ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಪರೀಕ್ಷಾ ಶುಲ್ಕ ಇಳಿಕೆ: ಸಂಪೂರ್ಣ ವಿವರ ತಿಳಿಯಿರಿ
ಬೆಳಗಾವಿ, ಡಿಸೆಂಬರ್ 09: ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಚುಕ್ಕೆ ಗುರುತಿನ ಸಂಖ್ಯೆ 105ಕ್ಕೆ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ ಸಿ ಸುಧಾಕರ್ ಉತ್ತರ ನೀಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಲಾಗುತ್ತದೆ ಎಂದು ತಿಳಿಸಿದರು.

2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 ನೇಮಕಾತಿ ಅಧಿಸೂಚನೆಗಳನ್ನು ಪೂರ್ಣಗೊಳಿಸಿರುವುದಿಲ್ಲ. 2024ರಲ್ಲಿ ಕೆಲವೇ ಅಧಿಸೂಚನೆಗಳನ್ನು ಹೊರಡಿಸಿ ಶುಲ್ಕ ಸಂಗ್ರಹಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಿಗೆ ತಗಲುಬಹುದಾದ ವೆಚ್ಚಗಳು, ಗೌಪ್ಯತಾ ವೆಚ್ಚಗಳು, ಮುದ್ರಣ, ಗೌಪ್ಯತಾ ಬಂಡಲುಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವುದು, ಪರೀಕ್ಷೆ ಮುಗಿದ ನಂತರ ಗೌಪ್ಯತಾ ಬಂಡಲುಗಳನ್ನು ಪ್ರಾಧಿಕಾರಕ್ಕೆ ತೆಗೆದುಕೊಂಡು ಬರುವುದು, ಪರೀಕ್ಷಾ ಕಾರ್ಯಗಳಲ್ಲಿ ನಿರತರಾಗುವ ಅಧಿಕಾರಿ, ಸಿಬ್ಬಂದಿಗೆ ಗೌರವಧನ ಭರಿಸುವುದು ಮುಂತಾದ ಎಲ್ಲಾ ವೆಚ್ಚಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಭರಿಸುತ್ತದೆ.
ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿನ ಪಾರದರ್ಶಕವಾಗಿ ನಡೆಸಲು ಆಧುನಿಕ ತಂತ್ರಜ್ಞಾನ ಬಳಕೆ ಮಾಡುವುದು ಅನಿವಾರ್ಯವಾಗಿದ್ದು, ಅರ್ಜಿಗೆ ನಿಗದಿಪಡಿಸಿರುವ ಅರ್ಜಿ ಶುಲ್ಕದಲ್ಲಿ ಎಲ್ಲಾ ವೆಚ್ಚಗಳನ್ನು ನಿಭಾಯಿಸುವುದು ಕಷ್ಟಸಾಧ್ಯವಾಗುತ್ತಿದೆ. ಅಭ್ಯರ್ಥಿಗಳಿಗೆ ಹೆಚ್ಚಿನ ಆರ್ಥಿಕ ಹೊರೆಯಿಲ್ಲದೆ ಪ್ರಾಧಿಕಾರವು ಪರೀಕ್ಷೆಯನ್ನು ನಡೆಸಲು ಕನಿಷ್ಠ ಮೊತ್ತವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳಿಂದ ನಿಗಧಿಪಡಿಸಿರುವ ಶುಲ್ಕ ಪಡೆಯುವುದು ಅನಿವಾರ್ಯವಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಯಾವುದೇ ಆರ್ಥಿಕ ಲಾಭ ಇರುವುದಿಲ್ಲ ಎಂದು ಸಚಿವ ಡಾ.ಎಂಸಿ ಸುಧಾಕರ್ ಸ್ಪಷ್ಟಪಡಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2022ನೇ ವರ್ಷದಿಂದ ಇಷ್ಟೇ ನಿಗಧಿ ಶುಲ್ಕವನ್ನು ವಿಧಿಸುತ್ತಿದ್ದು, ಪರೀಕ್ಷೆ ನಡೆಸುವ ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾದರೂ ಸಹ ಬಡ ಹಾಗೂ ಗ್ರಾಮೀಣ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಶುಲ್ಕವನ್ನು ಹೆಚ್ಚಿಸಿರುವುದಿಲ್ಲ ಹಾಗೂ ಆರ್ಥಿಕ ಹೊರ ತಪ್ಪಿಸಲು ಒಂದೇ ಪಠ್ಯಕ್ರಮವಿರುವ ವಿವಿಧ ಇಲಾಖೆಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರೆ ಮೊದಲ ಹುದ್ದೆಗೆ ಮಾತ್ರ ಅವರಿಗೆ ಅನ್ವಯಿಸುವ ಪೂರ್ಣ ಅರ್ಜಿ ಶುಲ್ಕ ಪಾವತಿಸಲು ಹಾಗೂ ಹೆಚ್ಚುವರಿ ಹುದ್ದೆಗೆ ಕೇವಲ ರೂ.100 ವಿಧಿಸಲಾಗುತ್ತಿದೆ ಎಂದು ಸಚಿವ ಡಾ.ಎಂಸಿ ಸುಧಾಕರ್ ತಿಳಿಸಿದರು.
ಕೇಂದ್ರ ಲೋಕ ಸೇವಾ ಆಯೋಗದ ಮಾದರಿಯಲ್ಲಿ ಅಥವಾ ಕರ್ನಾಟಕ ಲೋಕ ಆಯೋಗದ ಮಾದರಿಯಲ್ಲಿ ಅರ್ಜಿ ಶುಲ್ಕ ನಿಗದಿ ಪಡಿಸಬಹುದಲ್ಲವೇ? ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯ ಸರ್ಕಾರದಿಂದ ಯಾವುದೇ ಅನುದಾನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೀಡಲಾಗುತ್ತಿಲ್ಲ. ಆದ್ದರಿಂದ, ಕೇಂದ್ರ / ರಾಜ್ಯ ಲೋಕ ಸೇವಾ ಆಯೋಗದ ಮಾದರಿಯಲ್ಲಿ ಶುಲ್ಕ ವಿಧಿಸಲು ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications