ಬೆಳಗಾವಿ ಮರಾಠಿ ಪುಂಡರಿಂದ ಹಲ್ಲೆ ಪ್ರಕರಣ: ಕಂಡಕ್ಟರ್ ಮೇಲೆ ಕೇಸ್‌ ದಾಖಲು!

ಬೆಳಗಾವಿಯಲ್ಲಿ ನಡೆದಿರುವ ಬೆಳವಣಿಗೆಗೆ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಬೆಳಗಾವಿಯಲ್ಲಿ ಮರಾಠಿ ಪುಂಡರ ಹಾವಳಿ ಹೆಚ್ಚಾಗಿದೆ. ಇದಕ್ಕೆಲ್ಲ ಇಲ್ಲಿನ ರಾಜಕಾರಣಿಗಳ ಅಡ್ಜೆಸ್ಟಮೆಂಟ್ ರಾಜಕೀಯ ಹಾಗೂ ಕನ್ನಡಿಗರ ಮೇಲೆ ಹಲ್ಲೆ ನಡೆಯುತ್ತಿದ್ದರೂ ಸುಮ್ಮನೆ ಇರುವುದೇ ಕಾರಣ ಎಂದು ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ನಡೆದಿರುವ ಹಲ್ಲೆ ಪ್ರಕರಣವೂ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ಹೋರಾಟಗಾರರು ಈ ವಿಚಾರದಲ್ಲಿ ಆಕ್ಷೇಪಣೆ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿ ಇರುವಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್‌ವೊಂದು ಬಂದಿದೆ. ಈ ವಿಚಾರದಲ್ಲಿ ಕಂಡಕ್ಟರ್ ಗಂಭೀರ ತಪ್ಪೊಂದನ್ನು ಮಾಡಿದ್ದರು ಎನ್ನುವ ಆರೋಪ ಇದೀಗ ಕೇಳಿ ಬಂದಿದೆ.

ಬೆಳಗಾವಿ ಪ್ರಕರಣವು ಈಗಾಗಲೇ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು. ಕನ್ನಡಿಗರ ಆಕ್ರೋಶವನ್ನು ಹೆಚ್ಚಿಸಿದೆ. ಕನ್ನಡಿಗರು ಈ ವಿಚಾರದಲ್ಲಿ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಅಂತ ಆಗ್ರಹಿಸುತ್ತಿದ್ದಾರೆ. ಈ ರೀತಿ ಇರುವಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪವೊಂದು ಕೇಳಿ ಬಂದಿದೆ.

Belgaum Marathi Goons Attack Case POCSO Case Registered Against Conductor

ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ಸಹ ದಾಖಲಾಗಿದೆ. ಕಂಡಕ್ಟರ್ ಮಹದೇವಪ್ಪ ಹುಕ್ಕೇರಿ, ಬಸ್‌ನಲ್ಲಿ ಯುವತಿ ಮರಾಠಿಯಲ್ಲಿ ಟಿಕೆಟ್ ಕೇಳಿದ್ದಕ್ಕೆ, ನನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದು ಹೇಳಿದ್ದರು. ಇಷ್ಟಕ್ಕೆ ಬಸ್‌ನಲ್ಲಿದ್ದ ಮರಾಠಿ ಪುಂಡರು ಕಂಡಕ್ಟರ್ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಅಲ್ಲದೆ ಈ ರೀತಿ ಕಂಡಕ್ಟರ್‌ನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಬಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆದರೆ, ಈ ನಡುವೆ ಕಂಡಕ್ಟರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಈ ನಡುವೆ ಬಸ್‌ನಲ್ಲಿ ಬಾಲಕಿ ಮೇಲೆ ಕಂಡಕ್ಟರ್ ಮಹದೇವಪ್ಪ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮಹದೇವಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮರಾಠಿ ಬಸ್‌ಗಳಿಗೆ ಮಸಿ: ಇನ್ನು ಕರ್ನಾಟಕದಲ್ಲಿ ಕಂಡೆಕ್ಟರ್‌ನ ಮೇಲೆ ಹಲ್ಲೆ ಮಾಡಿದ ಆರೋಪದ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಆಕ್ರೋಶಗೊಂಡಿದ್ದು. ಮಹಾರಾಷ್ಟ್ರದಿಂದ ಬರುವ ಬಸ್‌ಗಳಿಗೆ ಹಾಗೂ ಅಲ್ಲಿನ ಸರ್ಕಾರಿ ಬಸ್‌ನ ಕಂಡಕ್ಟರ್ ಹಾಗೂ ಬಸ್‌ ಚಾಲಕರಿಗೆ ಮಸಿ ಬಳಿಯುತ್ತಿದ್ದಾರೆ. ಅಲ್ಲದೆ ಮಹಾರಾಷ್ಟ್ರದ ಬಸ್‌ನ ಮೇಲೆ ಜೈ ಕರ್ನಾಟಕ ಎಂದು ಬರೆಯುತ್ತಿದ್ದಾರೆ. ಮಹಾರಾಷ್ಟ್ರ ಗಡಿಭಾಗದಲ್ಲಿ ಹಾಗೂ ಬೆಳಗಾವಿಯ ಹೊರವಲಯದಲ್ಲಿ ಮರಾಠಿ ಮಾತನಾಡಲಿಲ್ಲ ಎಂದು ಕೆಎಸ್ಆರ್ಟಿಸಿ ಬಸನ್‌ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ಮಾಡಿದ್ದಾರೆ. ಈ ಬೆಳವಣಿಗೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+