ಮಾ. 4ರಿಂದ 20ರವರೆಗೆ ದಿನ ಕರ್ನಾಕಟದಾದ್ಯಂತ ಫಲಾನುಭವಿಗಳ ಸಮಾವೇಶ: BJP
ರಾಜ್ಯ ಸರ್ಕಾರದ ವತಿಯಿಂದ ಮಾರ್ಚ್ 04ರಿಂದ 20ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ ನಡೆಯಲಿದೆ ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದರು.
ಬೆಂಗಳೂರು, ಫೆಬ್ರವರಿ 28: ದೇಶದಲ್ಲಿ ಡಬಲ್ ಇಂಜಿನ್ ಬಿಜೆಪಿ ಸರ್ಕಾರವಿದೆ. ನಮ್ಮ ಯೋಜನೆಗಳನ್ನು ರಾಜ್ಯದ ಜನರಿಗೆ ಸಮರ್ಪಕವಾಗಿ ತಲುಪಿಸಬೇಕಿದೆ. ಈ ಸಂಬಂಧ ಮಾರ್ಚ್ 04ರಿಂದ 20ರವರೆಗೆ ರಾಜ್ಯಾದ್ಯಂತ ಫಲಾನುಭವಿಗಳ ಸಮಾವೇಶ ನಡೆಯಲಿದೆ.
ಮಂಗಳವಾರ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್, ಅಬಕಾರಿ ಸಚಿವ ಕೆ. ಗೋಪಾಲಯ್ಯ ಮತ್ತು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಮಾತನಾಡಿದ ಕರ್ನಾಟಕ ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್ ಅವರು, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ಅವಧಿಯಲ್ಲಿ ಜಾರಿಯಾದ ವಿವಿಧ ಯೋಜನೆಗಳನ್ನು ಜನರಿಗೆ ತುಲುಪಿಸುವ ಸಂಬಂಧ ರಾಜ್ಯಾದ್ಯಂತ 15 ದಿನ ಈ ಸಮಾವೇಶ ಆಯೋಜಿಸಿದ್ದೇವೆ ಎಂದರು.

ರಾಜ್ಯದ 31 ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ ವಿಶೇವಾಗಿ ನಡೆಯಲಿದೆ. ಪ್ರತಿ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಲ್ಲಿನ ಜಿಲ್ಲಾಧಿಕಾರಿಗಳು ಸಮಾವೇಶಗಳ ನೇತೃತ್ವ ಹೊಣೆ ನಿರ್ವಹಿಸಲಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯನ್ನು ಬಿಜೆಪಿ ಸಂಪರ್ಕಿಸಲಿದೆ. ಸರ್ಕಾರದ ಯೋಜನೆಗಳ ಕುರಿತು ಪೂರ್ಣ ಮಾಹಿತಿ ನೀಡಲಿದೆ. ಸಮಾವೇಶ್ ಕುರಿತು ಈಗಾಗಲೇ ಸಿದ್ಧತೆಗಳು ನಡೆಸಿದ್ದೇವೆ ಎಂದು ತಿಳಿಸಿದರು.
ಸರ್ಕಾರಿ ನೌಕರರ ಮುಷ್ಕರ ಕುರಿತು ಪ್ರತಿಕ್ರಿಯಿಸಿದ ಸೋಮಶೇಖರ್, 'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರಿ ನೌಕರರ ಸಂಘದ ಪ್ರಮುಖರ ಜತೆ ಚರ್ಚಿಸಿ, ಸಮಸ್ಯೆ ಪರಿಹರಿಸಲಿದ್ದಾರೆ' ಎಂದು ಮಾತುಗಳನ್ನಾಡಿದರು.

ರಾಜ್ಯ ಸರ್ಕಾರಿ ನೌಕರರು ಬುಧವಾರ ಮಾರ್ಚ್ 01ರಿಂದಲೇ ಅನಿರ್ದಿಷ್ಟವಾಧಿ ಮುಷ್ಕರ ಹಮ್ಮಿಕೊಂಡಿದ್ದಾರೆ. ಇತ್ತ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು ಪ್ರಯೋಜನವಾಗಿಲ್ಲ. ಸರ್ಕಾರಿ ನೌಕರರು ತಮ್ಮ ನಿರ್ಧಾರದಿಂದ ಹಿಂದೆ ಸರಿದಂತೆ ಕಾಣುತ್ತಿಲ್ಲ.












Click it and Unblock the Notifications