ನಟ ದುನಿಯಾ ವಿಜಯ್ ಜಾಮೀನು ಅರ್ಜಿ ವಜಾ, ಜೈಲೇ ಗತಿ
ಬೆಂಗಳೂರು, ಸೆಪ್ಟೆಂಬರ್ 26 : ಕನ್ನಡ ನಟ ದುನಿಯಾ ವಿಜಯ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅಪಹರಣ, ಹಲ್ಲೆ ಪ್ರಕರಣದ ಆರೋಪಿಯಾಗಿರುವ ದುನಿಯಾ ವಿಜಯ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಬುಧವಾರ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಹೇಶ್ ಬಾಬು ಅವರು ದುನಿಯಾ ವಿಜಯ್ ಜಾಮೀನು ಅರ್ಜಿಯ ತೀರ್ಪನ್ನು ಪ್ರಕಟಿಸಿದರು. ಜಿಮ್ ಟ್ರೈನರ್ ಮಾರುತಿ ಗೌಡ ಅಪಹರಣ, ಹಲ್ಲೆ ಪ್ರಕರಣದಲ್ಲಿ ದುನಿಯಾ ವಿಜಯ್ 2ನೇ ಆರೋಪಿಯಾಗಿದ್ದಾರೆ.
ಸೆ.23ರಂದು ದುನಿಯಾ ವಿಜಯ್ ಅವರನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸೆ.24ರಂದು ದುನಿಯಾ ವಿಜಯ್ ಪರ ವಕೀಲರು ಎಸಿಎಂಎಂ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಬುಧವಾರ ತೀರ್ಪನ್ನು ಪ್ರಕಟಿಸಿದ ನ್ಯಾಯಾಲಯ ಜಿಮ್ ಟ್ರೈನರ್ ಮಾರುತಿ ಗೌಡ ಮೇಲೆ ಹಲ್ಲೆ, ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದುನಿಯಾ ವಿಜಯ್, ಕಾರು ಚಾಲಕ ಪ್ರಸಾದ್, ಪ್ರಸಾದ್, ಮಣಿ ಸೇರಿ ಎಲ್ಲಾ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಎಸಿಎಂಎಂ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ದುನಿಯಾ ವಿಜಯ್ ಪರ ವಕೀಲರು ನಿರ್ಧರಿಸಿದ್ದಾರೆ. ಗುರುವಾರವೇ ಜಾಮೀನು ಅರ್ಜಿಯನ್ನು ಸಲ್ಲಿಸಲಾಗುತ್ತದೆ.












Click it and Unblock the Notifications