Bengaluru-Bidar Train: ಬೆಂಗಳೂರಿನಿಂದ ಗಡಿ ಜಿಲ್ಲೆಗೆ ವಿಶೇಷ ರೈಲು ಸೇವೆ, ವೇಳಾಪಟ್ಟಿ
ಬೆಂಗಳೂರು, ಡಿಸೆಂಬರ್ 01: ನೈಋತ್ಯ ರೈಲ್ವೆ ಇಲಾಖೆಯು ಕಳೆದ ವಿವಿಧ ಹಬ್ಬಗಳ ಪ್ರಯುಕ್ತ ವಿಶೇಷ ರೈಲುಗಳ ಕಾರ್ಯಾಚರಣೆ ಮಾಡಿತ್ತು. ಅದೇ ರೀತಿ ಮುಂದಿನ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಶಾಲೆ-ಕಾಲೇಜುಗಳಿಗೆ ರಜೆ ಇರುತ್ತದೆ. ಹೀಗಾಗಿ ಪ್ರಯಾಣಿಕರ ಸಂಚಾರ, ದಟ್ಟಣೆ ಹೆಚ್ಚಿರುವ ಕಾರಣ ಬೆಂಗಳೂರಿನಿಂದ ರಾಜ್ಯದ ಗಡಿ ಜಿಲ್ಲೆಗೆ ವಿಶೇಷ ರೈಲು ಸೇವೆ ಒದಗಿಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ರೈಲಿನ ಸೇವೆ, ದಿನಾಂಕ, ಸಂಚಾರ ಮಾರ್ಗ, ನಿಲುಗಡೆ ವಿವರ ಇಲ್ಲಿದೆ.
ಕ್ರಿಸ್‌ಮಸ್ ಪ್ರಯುಕ್ತ ರಾಜಧಾನಿ ಬೆಂಗಳೂರು ಕಂಟೋನ್ಮೆಂಟ್ ಮತ್ತು ಗಡಿ ಜಿಲ್ಲೆ ಬೀದರ್ ಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಮೂಲಕ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲಾಗುತ್ತದೆ. ಇದು ಒಂದು ಟ್ರಿಪ್ ಸೇವೆ ಮಾತ್ರ ಆಗಿರುತ್ತದೆ. ಪ್ರಯಾಣಿಕರು ಮುಂಗಡ ಬುಕ್ಕಿಂಗ್ ಮಾಡಬಹುದು.

ದಿನಾಂಕ 24.12.2025 (ಬುಧವಾರ) ರಂದು ಬೆಂಗಳೂರು ಕಂಟೋನ್ಮೆಂಟ್ - ಬೀದರ್ ವಿಶೇಷ ಎಕ್ಸ್‌ಪ್ರೆಸ್ ರೈಲು (06291) ಬೆಂಗಳೂರು ಕಂ. ನಿಲ್ದಾಣದಿಂದ ರಾತ್ರಿ 9:15ಕ್ಕೆ ಹೊರಡುತ್ತದೆ. ಮರುದಿನ ಬೆಳಗ್ಗೆ 11:30ಕ್ಕೆ ಬೀದರ್ ರೈಲು ನಿಲ್ದಾವನ್ನು ತಲುಪಲಿದೆ. ಮರಳಿ ಅದೇ ದಿಕ್ಕಿನಲ್ಲಿ ಬೀದರ್ ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ ರೈಲು (06292) ದಿನಾಂಕ 25.12.2025 (ಗುರುವಾರ) ಬೀದರ್‌ನಿಂದ ಮಧ್ಯಾಹ್ನ 1:00ಕ್ಕೆ ಹೊರಡುತ್ತದೆ. ಮರುದಿನ ಬೆಳಗಿನ ಜಾವ 4:00ಕ್ಕೆ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಕ್ಕೆ ಬಂದು ಸೇರಲಿದೆ.
ಈ ಈ ವಿಶೇಷ ರೈಲು ಮಾರ್ಗ ಮಧ್ಯದಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಾಬಾದ, ಕಲಬುರಗಿ ಮತ್ತು ಹುಮನಾಬಾದ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ಈ ವಿಶೇಷ ರೈಲು 22 ಬೋಗಿಗಳನ್ನು ಒಳಗೊಂಡಿರಲಿದೆ, ಇದರಲ್ಲಿ ಒಂದು ಎಸಿ 2-ಟೈರ್, ಎರಡು ಎಸಿ 3-ಟೈರ್, ಹನ್ನೊಂದು ಸ್ವೀಪರ್ ಕ್ಲಾಸ್, ಆರು ಜನರಲ್ ಸೆಕೆಂಡ್ ಕ್ಲಾಸ್, ಮತ್ತು ಎರಡು ಎಸ್‌ಎಲ್‌ಆರ್/ಡಿ ಬೋಗಿಗಳು ಇರಲಿವೆ. ಹೆಚ್ಚಿನ ಮಾಹಿತಿಗೆ ಪ್ರಯಾಣಿಕರು ಅಧಿಕೃತ ವೆಬ್‌ಸೈಟ್ enquiry.indianrail.gov.in ಗೆ ಸಂಪರ್ಕಿಸಬೇಕು. ಇಲ್ಲವೇ ಸಹಾಯವಾಣಿ 139 ಗೆ ಕರೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications