Expressway: ಕರ್ನಾಟಕದಲ್ಲಿ ಹೊಸ ಎಕ್ಸ್‌ಪ್ರೆಸ್ ವೇ: ಯಾವೆಲ್ಲಾ ಜಿಲ್ಲೆಗಳಲ್ಲಿ ಹಾದುಹೋಗಲಿದೆ ಹಾಗೂ ಪ್ರಯೋಜನಗಳೇನು?
Expressway: ರಾಜ್ಯದಲ್ಲಿ ಉದ್ಘಾಟನೆ ಹಂತದಲ್ಲಿರುವ ಬಹುನಿರೀಕ್ಷಿತ ಎಕ್ಸ್‌ಪ್ರೆಸ್ ವೇಗಳಲ್ಲಿ ಬೆಂಗಳೂರು-ಚೆನ್ನೂ ಎಕ್ಸ್‌ಪ್ರೆಸ್ ವೇ ಕೂಡ ಒಂದಾಗಿದೆ. ಇದು ಯಾವಾಗ ಉದ್ಘಾಟನೆಯಾಗಲಿದೆ ಎಂದು ಬಹುತೇಕ ಮಂದಿ ಕಾಯುತ್ತಿದ್ದು. ಹಾಗಾದ್ರೆ, ಲೋಕಾರ್ಪಣೆ ದಿನಾಂಕ ಹಾಗೂ ಕರ್ನಾಟಕದ ಯಾವೆಲ್ಲಾ ಪ್ರಮುಖ ನಗರಗಳ ಮೇಲೆ ಹಾದುಹೋಗಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕದಲ್ಲಿ ಹಾದುಹೋಗುವ ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಕೂಡ ಒಂದಾಗಿದೆ. ಈಗಾಗಲೇ ಇದರ ಉದ್ಘಾಟನೆ ಆಗಬೇಕಿತ್ತು. ಆದರೆ, ಕಾರಣಾಂತಗಳಿಂದ ದಿನಾಂಕ ಮುಂದೂಡಿಕೆ ಆಗುತ್ತಲೇ ಬಂದಿದೆ. ಇತ್ತೀಚೆಗಷ್ಟೇ ಕೇಂದ್ರ ಹೆದ್ದಾರಿ ಸಚಿವಾಲಯ ಇದರ ಲೋಕಾರ್ಪಣೆ ದಿನಾಂಕ ರಿವೀಲ್ ಮಾಡಿದೆ.

ಈ ಎಕ್ಸ್‌ಪ್ರೆಸ್ ವೇನ ಕಾಮಗಾರಿ ಕರ್ನಾಟಕ ಭಾಗದಲ್ಲಿ ಸಂಪೂರ್ಣವಾಗಿ ಮುಕ್ತಾಯವಾಗಿದ್ದು, ವಾಹನ ಸಂಚಾರಕ್ಕೂ ಅವಕಾಶ ಕಲ್ಪಿಸಲಾಗಿದೆ. ಆದರೆ, ಉದ್ಘಾಟನೆ ಆಗಿಲ್ಲ. ಇದಕ್ಕೆ ಕಾರಣವೂ ಇದೆ. ಇನ್ನೂ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಭಾಗದಲ್ಲಿ ಕಾಮಗಾರಿ ಬಾಕಿ ಉಳಿದ ಕಾರಣ ಉದ್ಘಾಟನೆ ದಿನಾಂಕ ಮುಂದೂಡಿಕೆಯಾಗುತ್ತಲೇ ಬಂದಿದೆ. ಈ ಕಾರ್ಯ ಈ ವರ್ಷದ ಅಂತ್ಯದಲ್ಲೇ ಆಗಬೇಕಿತ್ತು. ಆದರೆ, ಕಾಮಗಾರಿ ಹಂತದಲ್ಲಿರುವ ಕಾರಣ ಮುಂದಿನ ವರ್ಷದ ಜೂನ್ ಅಥವಾ ಜುಲೈನಲ್ಲಿ ಆಗಲಿದೆ ಎನ್ನುವ ಮಾಹಿತಿಯಿದೆ.
ಕರ್ನಾಟಕ ಭಾಗದಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿ ಪೂರ್ಣಗೊಂಡಿದ್ದು, ವಾಹನಗಳು ಕೂಡ ಸಂಚಾರ ಮಾಡುತ್ತಿವೆ. ಅಲ್ಲದೆ, ಈಗಾಗಲೇ ಟೋಲ್ ಶುಲ್ಕಗಳನ್ನು ಕೂಡ ನಿಗದಿಪಡಿಸಲಾಗಿದ್ದು, ಹೆದ್ದಾರಿ ಸಚಿವಾಲಯ ಒಪ್ಪಿಗೆ ಸೂಚಿಸಿದ ಬಳಿಕ ಇದು ಜಾರಿ ಆಗಲಿದೆ ಎನ್ನುವ ಮಾಹಿತಿ ಇದೆ.
260 ಕಿಲೋ ಮೀಟರ್ ಉದ್ದದ ಈ ಎಕ್ಸ್‌ಪ್ರೆಸ್ ವೇ ಅನ್ನು ಗ್ರೀನ್‌ಫೀಲ್ಡ್ ಯೋಜನೆಯಡಿ ₹17,900 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಇದರಿಂದ ಬೆಂಗಳೂರು ಮತ್ತು ಚೆನ್ನೈ ನಡುವಿನ ಪ್ರಯಾಣದ ಸಮಯ 6 ಗಂಟೆಗಳಿಂದ ಕೇವಲ ಎರಡೂವರೇ ಗಂಟೆಗೆ ಇಳಿಕೆ ಆಗಲಿದೆ. ಇದನ್ನು ವಾಹನಗಳು 120 ಕಿಲೋ ಮೀಟರ್‌ವರೆಗೆ ಗರಿಷ್ಠ ವೇಗದಲ್ಲಿ ಸಂಚರಿಸುವಂತೆ ನಿರ್ಮಾಣ ಮಾಡಲಾಗಿದೆ. ಮಾಲೂರು, ಬಂಗಾರಪೇಟೆ ಮತ್ತು ಬೇತಮಂಗಲದಲ್ಲಿ ಪ್ರಮುಖ ನಿರ್ಗಮನ ಕೇಂದ್ರಗಳನ್ನು ನಿರ್ಮಿಸಲಾಗಿದೆ.
ಕರ್ನಾಟಕ ಭಾಗದ ವಿವರ: ಕರ್ನಾಟಕ ಭಾಗದಲ್ಲಿ ಮೂರು ಹಂತದಗಳಲ್ಲಿ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಬೆಂಗಳೂರು-ಮಾಲೂರು ಭಾಗದ ಕಾಮಗಾರಿಗೆ 2,761 ಕೋಟಿ ರೂಪಾಯಿ, ಮಾಲೂರು-ಬಂಗಾರ ಪೇಟೆ ಭಾಗದ ಕಾಮಗಾರಿಗೆ 1,496 ಕೋಟಿ ರೂಪಾಯಿ, ಪ್ಯಾಕೇಜ್ -3ಗೆ 784.22 ಕೋಟಿ ರೂಪಾಯಿ ವೆಚ್ಚ ಆಗಿದೆ.
ಕರ್ನಾಟಕದಲ್ಲಿ ಮೂರು ಹಂತಗಳಲ್ಲಿ ನಿರ್ಮಾಣ
* ಹೊಸಕೋಟೆ-ಮಾಲೂರು: 27.1 ಕಿಲೋ ಮೀಟರ್
* ಮಾಲೂರು-ಬಂಗಾರಪೇಟೆ: 27.1 ಕಿಲೋ ಮೀಟರ್
* ಬಂಗಾರಪೇಟೆ-ಬೇತಮಂಗಲ: 17.5 ಕಿಲೋ ಮೀಟರ್
ದೇಶದ ಪ್ರಮುಖ ಎಕ್ಸ್‌ಪ್ರೆಸ್ ವೇಗಳಲ್ಲಿ ಇದು ಒಂದಾಗಿದೆ. ಇದು ಕರ್ನಾಟಕ ಭಾಗದಲ್ಲಿ 71 ಕಿಲೋ ಮೀಟರ್, ತಮಿನಾಡು 106 ಕಿಲೋ ಮೀಟರ್, ಆಂಧ್ರ ಪ್ರದೇಶದಲ್ಲಿ 85 ಕಿಲೋ ಮೀಟರ್ ಹಾದುಹೋಗಿದೆ. ಇದಕ್ಕೆ 2,650 ಹೆಕ್ಟೇರ್ ಭೂಸ್ವಾಧಿನ ಮಾಡಿಕೊಳ್ಳಲಾಗಿದೆ. ಇನ್ನು ಇಲ್ಲಿನ ಭೂಮಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಲೆ ಅಂತೂ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ದುಪ್ಪಟ್ಟಾಗುವುದರಲ್ಲಿ ಅನುಮಾನವಿಲ್ಲ ಎನ್ನಲಾಗುತ್ತಿದೆ.
ಯಾವೆಲ್ಲಾ ಮಾರ್ಗಗಳಲ್ಲಿ ಹಾದು ಹೋಗಲಿದೆ?: ಹೊಸಕೋಟೆ, ಮುಳಬಾಗಲು, ಚಿತ್ತೂರು, ರಾಣಿಪೇಟೆ, ವಾಲಾಜಪೇಟೆ, ಶ್ರೀಪೆರಂಬದೂರು, ಪೊನ್ನಮಲ್ಲೆ, ಕೋಯಂಬೆಡು ಮೂಲಕ ಹಾದುಹೋಗಲಿದೆ. ಈ ಹೆದ್ದಾರಿ ಬೆಂಗಳೂರಿನ ಹೊರವಲಯದಲ್ಲಿರುವ ಹೊಸಕೋಟೆಯಿಂದ ಆರಂಭವಾಗಿ ಮಾಲೂರು, ಬಂಗಾರಪೇಟೆ, ಕೋಲಾರ, ಪಲಮನೇರ್, ಚಿತ್ತೂರು, ರಾಣಿಪೇಟೆ ಪಟ್ಟಣಗಳ ಮೂಲಕ ಸಾಗಲಿದ್ದು, ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಶ್ರೀಪೆರಂಬದೂರಿನಲ್ಲಿ ಕೊನೆಗೊಳ್ಳಲಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ











Click it and Unblock the Notifications