ಕಸಾಪ ವಿಶೇಷ ಸಭೆ ನಿರ್ಣಯಗಳಿಗೆ ಬ್ರೇಕ್ ಹಾಕಿದ ಕೋರ್ಟ್!
ಬೆಂಗಳೂರು, ಮೇ 1: ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಮೇ 1ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ವಿಶೇಷ ಸರ್ವ ಸದಸ್ಯರ ಸಭೆ ಮತ್ತು ಮಹಾಸಭೆಯಲ್ಲಿ ಕೈಗೊಳ್ಳಲಾಗುವ ನಿರ್ಣಯಗಳಿಗೆ ನಗರದ ನ್ಯಾಯಾಲಯ ಬ್ರೇಕ್ ಹಾಕಿದೆ.
ಸಿಟಿ ಸಿವಿಲ್ ಕೋರ್ಟ್‌ನ 17ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ, ಮಹಾಸಭೆ ಕೈಗೊಳ್ಳುವ ಯಾವುದೇ ನಿರ್ಣಯಗಳು ಸಿಟಿ ಸಿವಿಲ್ ಕೋರ್ಟ್‌ನಲ್ಲಿ ದಾಖಲಾಗಿರುವ ಮೂಲ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಶನಿವಾರ ಆದೇಶ ನೀಡಿದೆ.
ಕಾಮಾಕ್ಷಿಪಾಳ್ಯದ ಎನ್.ಹನುಮೇಗೌಡ ಸಲ್ಲಿಸಿದ್ದ ಮಧ್ಯಂತರ ಅರ್ಜಿ ತುರ್ತು ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಧೀಶೆ ಶೈಲಾ ಅವರು ಈ ಆದೇಶ ನೀಡಿದ್ದಾರೆ. ಇದು ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರಿಗೆ ಹಿನ್ನೆಡೆಯಾಗಲಿದೆ.

ಅರ್ಜಿದಾರರು, ಕಸಾಪ 2022ರ ಮಾರ್ಚ್ 25ರಂದು ಕಾಗಿನೆಲೆಯ ಶ್ರೀ ಕನಕ ಕಲಾಭವನದಲ್ಲಿ ಸರ್ವ ಸದಸ್ಯರ ವಿಶೇಷ ಸಭೆ ನಡೆಸಲು ಹೊರಡಿಸಿರುವ ನೋಟಿಸ್ ತಡೆಹಿಡಿಯಬೇಕೆಂದು ಕೋರಿದ್ದಾರೆ.
ನಿಬಂಧನೆಗಳಿಗೆ ವಿರುದ್ಧ: ಅರ್ಜಿದಾರರ ಪರ ವಕೀಲರು, ಕಸಾಪ ಅಧ್ಯಕ್ಷರು ಪರಿಷತ್ತಿನ ನಿಬಂಧನೆಗಳಿಗೆ ವಿರುದ್ಧವಾಗಿ ಸರ್ವಸದಸ್ಯರ ವಿಶೇಷ ಸಭೆಯನ್ನು ಕರೆದಿರುವುದು ಸಾಹಿತ್ಯ ಪರಿಷತ್ತಿನ ನಿಬಂಧನೆಗಳ ನಿಯಮ 33 (ಅ) ಮತ್ತು (ಇ)ಗಳಿಗೆ ವಿರುದ್ಧವಾಗಿದೆ. ಸರ್ವಸದಸ್ಯರ ಸಭೆ ಕರೆದ ದಿನದಂದೇ ಮತ್ತೊಂದು ಸರ್ವಸದಸ್ಯರ ವಿಶೇಷ ಸಭೆ ನಡೆಸುವುದು ಕಾನೂನು ಬಾಹಿರ ಎಂದರು.
ಕಸಾಪ ಅಧ್ಯಕ್ಷರು ತಮ್ಮ ಸ್ವಹಿತಾಸಕ್ತಿಯಿಂದ ಪರಿಷತ್ತಿನ ನಿಬಂಧನೆಗಳಿಗೆ ವಿರುದ್ಧವಾಗಿ ವಿಶೇಷ ಸಭೆ ಕರೆದಿದ್ದಾರೆ. ಅದಕ್ಕೆ ಕಾರ್ಯಕಾರಿ ಸಮಿತಿಯ ಅನುಮೋದನೆಯಿಲ್ಲ. ವಿಶೇಷ ಸಭೆಯ ಕಾರ್ಯಸೂಚಿಯನ್ನು ಸರ್ವ ಸದಸ್ಯರ ಸಭೆಯಲ್ಲಿ ಮಂಡಿಸಲು ಅವಕಾಶವಿದ್ದಾಗಲೂ ವಿನಾಕಾರಣ ವಿಶೇಷ ಸಭೆ ನಡೆಸುವುದು ಆರ್ಥಿಕ ನಷ್ಟದ ಜೊತೆಗೆ ನಿಯಮಬಾಹಿರ. ಹಾಗಾಗಿ, ಸಭೆ ನಡೆಸಲು ಹೊರಡಿರುವ ನೋಟಿಸ್ ಗೆ ತಡೆ ನೀಡಬೇಕೆಂದು ಕೋರಿದರು.
Recommended Video
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications