ರೈತರ ಮೇಲೆ ಲಾಠಿ ಪ್ರಹಾರ: ಕೋಲಾರ, ಚಿಕ್ಕಬಳ್ಳಾಪುರ ಬಂದ್

Subscribe to Oneindia Kannada

ಕೋಲಾರ/ಚಿಕ್ಕಬಳ್ಳಾಪುರ, ಮಾರ್ಚ್, 04: ಕುಡಿಯುವ ನೀರು ಕೇಳಲು ಬಂದ ರೈತರ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಶುಕ್ರವಾರ ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಬಂದ್ ಆಚರಿಸಲಾಗುತ್ತಿದೆ.

ಬಯಲುಸೀಮೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಕರೆ ನೀಡಿರುವ ಬಂದ್ ಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಎರಡು ಜಿಲ್ಲೆಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.[ರೈತರಿಗೆ ಲಾಠಿ ರುಚಿ ತೋರಿಸಿದ ಸರ್ಕಾರಕ್ಕೆ ಪ್ರತಿಪಕ್ಷಗಳ ಚಾರ್ಜ್]

kolar

ರಸ್ತೆ ಮಧ್ಯದಲ್ಲೇ ಪ್ರತಿಭಟನಾನಿರತರು ಟೈರ್ ಗಳಿಗೆ ಬೆಂಕಿ ಇಟ್ಟಿದ್ದಾರೆ. ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶುಕ್ರವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.[ಕುಡಿಯುವ ನೀರು ಕೇಳಿದ ರೈತರಿಗೆ ಪೊಲೀಸರ ಲಾಠಿ ಏಟು]

ಗುರುವಾರ ಸಾವಿರಾರು ಸಂಖ್ಯೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದರು. ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಊರಿಗೆ ತೆರಳುತ್ತಿದ್ದ ರೈತರ ಮೇಲೂ ಪೊಲೀಸರು ದರ್ಪ ತೋರಿಸಿದ್ದರು.

ಪರೀಕ್ಷೆ ಮುಂದಕ್ಕೆ
ಶನಿವಾರ , ಮಾರ್ಚ್ 5 ರಂದು ನಡೆಯಬೇಕಿದ್ದ ಪ್ರಥಮ ಪಿಯುಸಿ ಭೌತಶಾಸ್ತ್ರ ಮತ್ತು ಲೆಕ್ಕಶಾಶ್ತ್ರ ಪರೀಕ್ಷೆಗಳನ್ನು ಮಾರ್ಚ್ 8 ಕ್ಕೆ ಮುಂದೂಡಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಡಾ ಎಂ ವಿ ವೆಂಕಟೇಶ್ ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Shashwatha Neeravari Horata Samiti has called for a bandh on Friday in Kolar and Chickballapur districts. Police on Thursday lathicharged a large group of farmers in Bengaluru when they tried to move towards Vidhana Soudha to press the government for a solution to water problems in drought-hit districts.
Please Wait while comments are loading...