ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ವೇ ನಿರ್ಮಾಣವಾದ್ರೆ ಏನೆಲ್ಲ ಪ್ರಯೋಜನಾಗಳಿವೆ ಗೊತ್ತಾ?
Bengaluru-Mangaluru Expressway: ಈಗಾಗಲೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ನಿರ್ಮಾಣವಾಗಿದ್ದು, ವಾಹಗಳು ಕೂಡ ಸಂಚರಿಸುತ್ತಿವೆ. ಇದೀಗ ಇದೇ ರೀತಿಯಲ್ಲಿ ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ವೇ ನಿರ್ಮಾಣ ಮಾಡಲು ಕಂದ್ರ ಸರ್ಕಾರ ನಿರ್ಧಾರ ಮಾಡಿದೆ. ಹಾಗಾದರೆ ಇದಕ್ಕೆ ತಗಲುವ ವೆಚ್ಚ ಹಾಗೂ ಇದರಿಂದ ಆಗುವ ಉಪಯೋಗಗಳೇನು ಎಂದು ಇಲ್ಲಿ ತಿಳಿಯಿರಿ.
ಬೆಂಗಳೂರಿನಿಂದ ಮಂಗಳೂರಿಗೆ ಅಥವಾ ಮಂಗಳೂರಿನಿಂದ ಬೆಂಗಳೂರಿಗೆ ಹೋಗಬೇಕೆಂದರೆ ಸುಮಾರು 350 ಕಿಲೋ ಮೀಟರ್ ಆಗುತ್ತದೆ. ಇಲ್ಲಿಗೆ ತಲುಪು ಸರಿಸುಮಾರು ಅಂದರೆ 6-7 ಗಂಟೆಗಳ ಕಾಲ ಸಮಯ ಬೇಕಾಗುತ್ತದೆ. ಆದರೆ, ಈ ಸಮಯವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಈ ಎರಡು ಮಾರ್ಗಗಳ ನಡುವೆ ಎಕ್ಸ್‌ಪ್ರೆಸ್ ವೇ ನಿರ್ಮಾಣ ಮಾಡಲು ನಿರ್ಧರಿಸಿದೆ. ಹಾಗಾದರೆ ಇದರಿಂದ ಎಷ್ಟು ಸಮಯ ಕಡಿತವಾಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ.

ಎಕ್ಸ್‌ಪ್ರೆಸ್ ವೇ ನಿರ್ಮಾಣ ಆದರೆ, ಬೆಂಗಳೂರಿನಿಂದ-ಮಂಗಳೂರಿಗೆ ಕೇವಲ 4-5 ಗಂಟೆಯೊಳಗೆ ತಲುಪಬಹುದು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆ ಡಿಪಿಆರ್ ತಯಾರಿಸಲು ಟೆಂಡರ್ ಕರೆಯಲಾಗಿತ್ತು. 9 ಕಂಪನಿಗಳು ಟೆಂಡತರ್ನಲ್ಲಿ ಭಾಗಿಯಾಗಿವೆ. 2025ರ ಜನವರಿ ವೇಳೆಗೆ ಟೆಂಡರ್ ಬಹುತೇಕ ಫೈನಲ್ ಆಗುವ ಸಾಧ್ಯತೆಯಿದ ಎಂದು ಹೇಳಲಾಗುತ್ತಿದೆ.
ಇದರಿಂದ ಬೆಂಗಳೂರಿನಿಂದ ವಿದೇಶಕ್ಕೆ ಸಾಮಾಗ್ರಿಗಳನ್ನು ಸಾಗಿಸಲು ಸಹಾಯ ಆದಂತಾಗಲಿದೆ. ಅಲ್ಲದೆ, ವಿದೇಶದಿಂದ ಭಾರತಕ್ಕೆ ಬರುವ ಇಂಧನ, ಗ್ಯಾಸ್, ಮೈನ್ಸ್ ಮಂಗಳೂರು ಬಂದರಿನ ಮೂಲಕ ಬೆಂಗಳೂರಿಗೆ ತರಲು ಸಹಾಯ ಆಗುತ್ತದೆ ಎಂದು ಟ್ರಾಫಿಕ್ ಎಕ್ಸ್ಪರ್ಟ್ ಚಂದ್ರಶೇಖರ್ ಅವರು ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಡಿಪಿಆರ್ ಸಿದ್ಧಪಡಿಸಲು 9 ಕಂಪನಿಗಳು ಟೆಂಡರ್ ಸಲ್ಲಿಸಿವೆ. ಈ ಎಕ್ಸ್‌ಪ್ರೆಸ್ ವೇ ಬೆಂಗಳೂರು-ಹಾಸನ-ಮಂಗಳೂರು ಮಾರ್ಗಕ್ಕೆ ಸಂಪರ್ಕ ಕಲ್ಪಿಸಲಿದೆ. ಈ ಹೆದ್ದಾರಿಯನ್ನು ನಾಲ್ಕು ಅಥವಾ 6 ಲೈನ್‌ನಲ್ಲಿ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಈ ಎಕ್ಸ್‌ಪ್ರೆಸ್ ವೇ 335 ಕಿಲೋ ಮೀಟರ್ ವಿಸ್ತೀರ್ಣ ಇರಲಿದ್ದು, ಟೆಂಡರ್ ಪಡೆದುಕೊಳ್ಳುವ ಕಂಪನಿಗೆ ಡಿಪಿಆರ್ ವರದಿ ಸಲ್ಲಿಸಲು 540 ದಿನಗಳ ಕಾಲವಕಾಶ ನೀಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
2028ರಲ್ಲಿ ಈ ಎಕ್ಸ್‌ಪ್ರೆಸ್ ವೇ ಯೋಜನೆಯ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಎಕ್ಸ್‌ಪ್ರೆಸ್ ವೇ ಮಾಡಲು ಸಾವಿರಾರು ಮರಗಳನ್ನು ಕಡಿಯಬೇಕಾಗುತ್ತದೆ. ಆದ್ದರಿಂದ ಅದಕ್ಕೆ ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸುವ ಸಾಧ್ಯುತೆ ಹೆಚ್ಚಿದೆ. ಆದರೆ, ಇದರಿಂದ ನಮ್ಮ ಖಾಸಗಿ ಬಸ್‌ಗಳ ನಿರ್ವಹಣೆ ಮತ್ತು ಡಿಸೇಲ್ ಉಳಿತಾಯ ಆಗಲಿದೆ ಎಂದು ಖಾಸಗಿ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮ ಹೇಳಿದ್ದಾರೆ ಎಂದು ಮೂಲಗಳಿಂದ ತಿಳೀದುಬಂದಿದೆ.












Click it and Unblock the Notifications