Namma Metro: ನಮ್ಮ ಮೆಟ್ರೋ ದರ ಏರಿಕೆ: BMRCLಗೆ ಬಿಜೆಪಿ ಕೊಟ್ಟ ಎಚ್ಚರಿಕೆ ಏನು?

ಬೆಂಗಳೂರು, ಫೆಬ್ರವರಿ 10: ರಾಜಧಾನಿ ಬೆಂಗಳೂರಿಗೆ ಮೆಟ್ರೋ ಬರೆ ಬಿದ್ದಿದೆ. ಮೆಟ್ರೋದ ಟಿಕೆಟ್ ದರ ಏರಿಕೆಯಿಂದಾಗಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ಬಿಜೆಪಿ ನಿಯೋಗ ಇಂದು ಬಿಎಂಆರ್ಸಿಎಲ್ ಎಂಡಿ ಭೇಟಿ ಮಾಡಿ ದರ ಇಳಿಕೆ ಮಾಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ. ದರ ಕಡಿಮೆ ಮಾಡದಿದ್ದರೆ ಹೋರಾಟ ಮಾಡುವುದಾಗಿ ಬಿಜೆಪಿ ನಿಯೋಗವೂ ಎಚ್ಚರಿಸಿದ್ದಾರೆ.

ಬಿಜೆಪಿ ನಿಯೋಗವು ಇಂದು ಮೆಟ್ರೋ ಎಂ.ಡಿ. ಭೇಟಿಯಾಗಿದೆ. ಮೆಟ್ರೋ ಪ್ರಯಾಣದರ ಏರಿಕೆಯನ್ನು ಹಿಂಪಡೆಯಬೇಕೆಂದು ರವಿ ಸುಬ್ರಹ್ಮಣ್ಯ ಆಗ್ರಹಿಸಿದ್ದಾರೆ. ಇಲ್ಲಿ ದೇಶದಲ್ಲೇ ಮೆಟ್ರೋ ದರ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಿಸಿದ್ದಾರೆ. ಇದನ್ನು ಖಂಡಿಸುತ್ತೇವೆ. ಮೆಟ್ರೋ ಸಂಪಾದನೆ ಮಾಡುವ ಇಲಾಖೆ ಅಲ್ಲ, ಸೇವಾ ವಲಯ ಇದು; ನಗರದ ದಟ್ಟಣೆ ಕಡಿಮೆ ಮಾಡುವ ಸಲುವಾಗಿ ಮೆಟ್ರೊ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ. ಏಕಾಏಕಿ ದರ ಏರಿಕೆಯನ್ನು ನಾವು ಖಂಡಿಸುತ್ತೇವೆ ಎಂದು ತಿಳಿಸಿದರು.

Bengaluru Metro Fare Hike BJP Delegation Demands Rollback

ಈಗಾಗಲೇ ರಾಜ್ಯ ಸರ್ಕಾರ ಜನರ ಮೇಲೆ ದರ ಏರಿಕೆಯ ಬರೆ ಎಳೆದಿದೆ. ಈಗ ಮೆಟ್ರೋ ದರ 46% ಏರಿಕೆ ಮಾಡಿ ಪ್ರಹಾರ ಮಾಡಲಾಗಿದೆ ಎಂದ ಅವರು, ಮೆಟ್ರೋ ನಿಲ್ದಾಣಗಳಲ್ಲಿ ಜನರಿಗೆ ಅಗತ್ಯ ಅನುಕೂಲಗಳನ್ನೂ ಮೆಟ್ರೋ ಮಾಡಲಿ ಎಂದು ಒತ್ತಾಯಿಸಿದರು. ಮೆಟ್ರೋ ಸಾರ್ವಜನಿಕರಿಗಾಗಿ ಇದೆ. ಲಾಭವನ್ನೇ ನೋಡುವುದು ಸರಿಯಲ್ಲ; ಬೆಂಗಳೂರಿನ ವಾಹನ ದಟ್ಟಣೆ ಕಡಿಮೆ ಮಾಡಬೇಕು ಎಂಬ ದೃಷ್ಟಿಯಿಂದ ಇದು ಜಾರಿಯಾಗಿದೆ. ಅದಕ್ಕಾಗಿ ಕೇಂದ್ರ ಸರ್ಕಾರ ಅನುದಾನ ನೀಡಿದೆ. ಪ್ರಯಾಣದರ ಹೆಚ್ಚಳ ಸರಿಯಲ್ಲ ಎಂದು ಹೇಳಿದರು. ದರ ಹೆಚ್ಚಳ ಕೂಡಲೇ ಸ್ಥಗಿತಗೊಳಿಸಬೇಕು. ಜನರಿಗೆ ಬೇಕಿರುವ ಪಾರ್ಕಿಂಗ್ ನೀಡಬೇಕು. ಒಂದಷ್ಟು ಬೇಡಿಕೆ ಮುಂದಿಟ್ಟಿದ್ದೇವೆ. ಬೇಡಿಕೆ ಈಡೇರಿಸದಿದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಶಾಸಕ ಸಿ.ಕೆ.ರಾಮಮೂರ್ತಿ ಅವರು ಮಾತನಾಡಿ, ಇಂದು ಬಿಜೆಪಿ ನಿಯೋಗ ಮೆಟ್ರೋ ಎಂಡಿ ಭೇಟಿ ಮಾಡಿ ಬೆಂಗಳೂರಿನ ಜನರ ಸಮಸ್ಯೆ ಬಗ್ಗೆ ಹೇಳಿದ್ದೇವೆ. ದೇಶದ ಎಲ್ಲಾ ರಾಜ್ಯಗಳ ಮೆಟ್ರೊ ದರ ಕಡಿಮೆ ಇದೆ. ಆದರೆ, ಬೆಂಗಳೂರು ನಗರದಲ್ಲಿ ದರ ಹೆಚ್ಚಾಗಿದೆ. ಇವರು ಯಾವುದೋ ಸಮಿತಿ ಮಾಡಿದ್ದು, ಅದರ ವರದಿಯನ್ನ ಒಪ್ಪಿ ಜಾರಿ ಮಾಡಿದ್ದು ಸರಿಯಲ್ಲ. ಬೆಂಗಳೂರಿನ ಶಾಸಕರ ಜೊತೆ ಚರ್ಚೆ ಮಾಡಬೇಕಿತ್ತು. ಪ್ರಯಾಣಿಕರಿಗೆ ದರ ಹೆಚ್ಚಾಗಿದೆ ಎಂದು ಟೀಕಿಸಿದರು.

ದರ ಹೆಚ್ಚು ಮಾಡಿದ್ದೀರಿ, ಹೊರತು ಮೂಲಭೂತ ಸೌಕರ್ಯ ನೀಡಿಲ್ಲ. ಶೌಚಾಲಯ, ಪಾಕಿರ್ಂಗ್ ಏನೂ ಮಾಡಿಲ್ಲ ಎಂದರಲ್ಲದೆ, ದರ ಕಡಿಮೆ ಮಾಡದಿದ್ದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದರು. ಬಿಜೆಪಿ ಬೆಂಗಳೂರು ಮಹಾನಗರ ಘಟಕವು ದರ ಹೆಚ್ಚಳ ಮಾಡಬಾರದು ಎಂಬ ಬೇಡಿಕೆ ಮುಂದಿಟ್ಟಿದೆ. ಮಾಡುವುದಾದರೆ, 5% ದರ ಹೆಚ್ಚಳ ಮಾಡಲಿ ಎಂದು ತಿಳಿಸಿದರು.

ಇನ್ನೂ ಈ ವೇಳೆ ಶಾಸಕರಾದ ರವಿ ಸುಬ್ರಹ್ಮಣ್ಯ, ಸಿ.ಕೆ.ರಾಮಮೂರ್ತಿ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಜಿಲ್ಲಾಧ್ಯಕ್ಷ ಹರೀಶ್, ಮಾಜಿ ಮಹಾಪೌರರಾದ ಗೌತಮ್, ಪ್ರಕಾಶ್ ಹಾಗೂ ಮುಖಂಡರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+