ಈ ಪ್ರದೇಶದಲ್ಲಿ ಭೂಮಿ ಇದ್ದರೆ ನೀವೇ ಕೋಟ್ಯಾಧಿಪತಿಗಳು!
ಕರ್ನಾಟಕದಲ್ಲಿ ಬೆಂಗಳೂರು ಬಿಟ್ಟು ಇದೀಗ ಬೆಂಗಳೂರಿನಿಂದ ಮತ್ತೊಂದು ಪ್ರಮುಖ ಪ್ರದೇಶಕ್ಕೆ ರಿಯಲ್ ಎಸ್ಟೇಟ್‌ನಿಂದ ಭರ್ಜರಿ ಲಾಭವಾಗಿದೆ. ರಾಜ್ಯದಲ್ಲಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್‌ಗೆ ಭರ್ಜರಿ ಲಾಭವಿದೆ. ಬೆಂಗಳೂರಿನಾದ್ಯಂತ ಬಹುತೇಕ ಪ್ರದೇಶಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಇದೀಗ ಬೆಂಗಳೂರಿನಿಂದ ಕೆಲವೇ ಕಿ.ಮೀ ದೂರದಲ್ಲಿರುವ ಪ್ರದೇಶದಲ್ಲಿ ಭೂಮಿಗೆ ಬಂಪರ್ ಬೆಲೆ ಬಂದಿದೆ. ರಿಯಲ್ ಎಸ್ಟೇಟ್ ಚಿಗುರೊಡೆಯುತ್ತಿದ್ದು. ಇಲ್ಲಿ ಭೂಮಿ ಹೊಂದಿರುವವರು ಕೋಟ್ಯಾಧಿಪತಿಗಳಾಗುವ ಕನಸು ಕಾಣುತ್ತಿದ್ದಾರೆ. ದಕ್ಷಿಣ ಕರ್ನಾಟಕದ ಭಾಗದಲ್ಲಿ ಬೆಂಗಳೂರಿನ ನಂತರ ಮೈಸೂರು ಜಿಲ್ಲೆಯಲ್ಲಿ ಭೂಮಿಗೆ ಒಳ್ಳೆಯ ಬೆಲೆ ಬಂದಿದೆ. ಇದೀಗ ಈ ಎರಡೂ ನಗರಗಳಿಂದಾಗಿ ದಕ್ಷಿಣ ಕರ್ನಾಟಕದ ಮತ್ತೊಂದು ಭಾಗದಲ್ಲಿ ಭೂಮಿಯ ಬೆಲೆ ಬಂಪರ್ ಏರಿಕೆ ಕಂಡಿದೆ. ಅದು ಯಾವುದು ಹಾಗೂ ಯಾವ ಕಾರಣಕ್ಕಾಗಿ ಭೂಮಿ ಬೆಲೆ ಹೆಚ್ಚಳವಾಗುತ್ತಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಹೊಸ ದಾಖಲೆ ಸೃಷ್ಟಿ ಮಾಡಿದೆ. ಬೆಂಗಳೂರಿನಲ್ಲಿ ವಿವಿಧ ಯೋಜನೆಗಳ ಕಾರಣಕ್ಕಾಗಿ ಭೂಮಿ ಬೆಲೆಯು ಭರ್ಜರಿ ಹೆಚ್ಚಳವಾಗಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣದಿಂದಾಗಿ ಬೆಂಗಳೂರು ಹಾಗೂ ಮೈಸೂರು ಪ್ರಮುಖ ನಗರಗಳ ಸುತ್ತಮುತ್ತಲಿನ ಪ್ರದೇಶದ ಹಲವು ಭಾಗದಲ್ಲಿ ರಿಯಲ್ ಎಸ್ಟೇಟ್‌ಗೆ ಭರ್ಜರಿ ಲಾಭ ಬಂದಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿ ರಿಯಲ್ ಎಸ್ಟೇಟ್‌ಗೆ ಧಮಾಕ ಸೃಷ್ಟಿಯಾಗಿದೆ. ಈ ಎಕ್ಸ್‌ಪ್ರೆಸ್ ವೇ ಹಲವು ಭಾಗಗಳಲ್ಲಿ ಭೂಮಿ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ. ಅದರಲ್ಲಿ ಪ್ರಮುಖ ಜಿಲ್ಲೆಯ ಹೆಸರೂ ಸೇರ್ಪಡೆಯಾಗಿದೆ.

ಹೌದು ಬೆಂಗಳೂರು ಹಾಗೂ ಮೈಸೂರು ಎಕ್ಸ್‌ಪ್ರೆಸ್ ವೇಯಿಂದಾಗಿ ಮಂಡ್ಯ ಜಿಲ್ಲೆಯಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಮಂಡ್ಯದ ವಿವಿಧ ಭಾಗದಲ್ಲಿ ರಿಯಲ್ ಎಸ್ಟೇಟ್‌ಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಮುಖ್ಯ ಕಾರಣ ಈ ಜಿಲ್ಲೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳು ಅಭಿವೃದ್ಧಿ ಆಗಿರುವುದು ಹಾಗೂ ಈ ಭಾಗದ ಸುತ್ತಮುತ್ತಲಿನ ಪ್ರದೇಶದಲ್ಲಿ ಮೂಲಸೌಕರ್ಯ ಹೆಚ್ಚಳವಾಗಿರುವುದು ಎಂದು ಹೇಳಲಾಗಿದೆ.
ಮಂಡ್ಯದಲ್ಲಿ ಭೂಮಿ ಬೆಲೆ ಹೆಚ್ಚಳವಾಗುತ್ತಿರುವುದನ್ನು ಸುವರ್ಣ ಕಾರಿಡಾರ್ ಅಂತಲೇ ಕರೆಯಲಾಗುತ್ತಿದೆ. ಬೆಂಗಳೂರು ಹಾಗೂ ಮೈಸೂರು ಪ್ರಮುಖ ನಗರಗಳು ಅಭಿವೃದ್ಧಿ ಆಗುತ್ತಿರುವಾಗಲೇ ಇದರ ಮಧ್ಯ ಭಾಗದಲ್ಲಿರುವ ಪ್ರಮುಖ ನಗರಗಳ ಅಭಿವೃದ್ಧಿ ಆಗುತ್ತಿವೆ. ಅದರಲ್ಲಿ ಭೂಮಿಗೆ ಒಳ್ಳೆಯ ಬೆಲೆ ಬರುತ್ತಿರುವುದು ಸಹ ಪ್ರಮುಖವಾಗಿದೆ.
ಮಂಡ್ಯ ಜಿಲ್ಲೆಯು ಮೊದಲಿನಿಂದಲೂ ಕೃಷಿ ಪ್ರಧಾನ ಜಿಲ್ಲೆಯಾಗಿದೆ. ಆದರೆ, ಬೆಂಗಳೂರು ಹಾಗೂ ಮೈಸೂರಿನ ನಡುವೆ ಎಕ್ಸ್‌ಪ್ರೆಸ್ ವೇ ನಿರ್ಮಾಣ ಹಾಗೂ ಅಭಿವೃದ್ಧಿಯಿಂದಾಗಿ ಈ ಭಾಗದಲ್ಲಿ ಹೂಡಿಕೆ ಹೆಚ್ಚಳವಾಗಿದೆ. ಈ ಎಕ್ಸ್‌ಪ್ರೆಸ್ ವೇ ನಿರ್ಮಾಣದಿಂದಾಗಿ ಎರಡೂ ನಗರಗಳ ನಡುವೆ ಪ್ರಯಾಣದ ಅವಧಿ ಕಡಿಮೆಯಾಗಿದೆ. ಇದು ಇಲ್ಲಿನ ರಿಯಲ್ ಎಸ್ಟೇಟ್ ಮೇಲೆ ಭಾರೀ ಪರಿಣಾಮ ಬೀರಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಪ್ರಾಪರ್ಟಿ ರಿಜಿಸ್ಟ್ರೇಷನ್ ಪ್ರಮಾಣ ಭರ್ಜರಿ ಹೆಚ್ಚಳವಾಗಿದೆ. ಇಲ್ಲಿನ ಗ್ರಾಮೀಣ ಪ್ರದೇಶವು ಹೂಡಿಕೆದಾರರು ಹಾಗೂ ಡೆವಲಪರ್‌ಗಳಿಗೆ ಒಳ್ಳೆಯ ಆಯ್ಕೆಯಾಗಿ ಬದಲಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ರಿಯಲ್ ಎಸ್ಟೇಟ್ ಅಭಿವೃದ್ಧಿಗೆ ಪ್ರಮುಖ ಕಾರಣ
* ಉತ್ತಮ ಮೂಲಸೌಕರ್ಯ
* ಎರಡು ಪ್ರಮುಖ ನಗರಗಳಿಗೂ ಇಲ್ಲಿಂದ ಸುಲಭವಾಗಿ ಪ್ರಯಾಣಿಸಬಹುದು.
* ಗದ್ದಲವಿಲ್ಲದ ಪ್ರದೇಶ
* ಪ್ಲಾಟ್, ಭೂಮಿ ಹಾಗೂ ಕೃಷಿ ಭೂಮಿ ಸೇರಿ ಹಲವು ಆಯ್ಕೆಗಳು ಇವೆ.
* ಇನ್ನು ಈ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ರಿಯಲ್ ಎಸ್ಟೇಟ್‌ಗೆ ಬೇಡಿಕೆ ಹೆಚ್ಚುತ್ತಿದೆ ಎಂದೂ ಹೇಳಲಾಗಿದೆ.
ಹಲವು ಪ್ರದೇಶದಲ್ಲಿ ರಿಯಲ್ ಎಸ್ಟೇಟ್ ಧಮಾಕ: ಇನ್ನು ಬೆಂಗಳೂರು ಹಾಗೂ ಮೈಸೂರು ನಗರಗಳ ಅಭಿವೃದ್ಧಿ ಹಾಗೂ ಎಕ್ಸ್‌ಪ್ರೆಸ್ ನಿರ್ಮಾಣದಿಂದಾಗಿ ಹಲವು ಪ್ರದೇಶಗಳಲ್ಲಿ ರಿಯಲ್ ಎಸ್ಟೇಟ್ ಭಾರೀ ಬೇಡಿಕೆ ಸೃಷ್ಟಿಯಾಗಿದೆ. ಮೊದಲು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಸಾಕಷ್ಟು ಅಭಿವೃದ್ಧಿಯಾಗಿತ್ತು. ಇದಾದ ಮೇಲೆ ಮೈಸೂರು ಇದೀಗ ವಿವಿಧ ಜಿಲ್ಲೆಗಳು ಅಭಿವೃದ್ಧಿ ಆಗುತ್ತಿವೆ.ಇದು ಈ ಭಾಗದಲ್ಲಿ ಭೂಮಿ ಹೊಂದಿರುವವರಿಗೆ ಲಾಭವನ್ನು ತಂದುಕೊಡುತ್ತಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications