Get Updates
Get notified of breaking news, exclusive insights, and must-see stories!

ಬೆಂ-ಮೈಸೂರು 6 ಪಥದ ರಸ್ತೆ ಕಾಮಗಾರಿ ನವೆಂಬರ್‌ನಲ್ಲಿ ಆರಂಭ

ಬೆಂಗಳೂರು, ಸೆಪ್ಟೆಂಬರ್ 03 : ಬಹುನಿರೀಕ್ಷಿತ ಬೆಂಗಳೂರು-ಮೈಸೂರು ನಡುವಿನ 6 ಪಥದ ರಸ್ತೆ ನಿರ್ಮಾಣ ಕಾಮಗಾರಿ ನವೆಂಬರ್‌ನಲ್ಲಿ ಆರಂಭವಾಗಲಿದೆ. ಸುಮಾರು 3,750 ಕೋಟಿ ರೂ.ಗಳ ಯೋಜನೆ ಇದಾಗಿದೆ.

ಶುಕ್ರವಾರ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಈ ಕುರಿತು ವಿವರ ನೀಡಿದ್ದಾರೆ. 'ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಗೆ ಟೆಂಡರ್ ಕರೆಯಲು ಕೇಂದ್ರ ಸರ್ಕಾರಕ್ಕೆ ಕೋರಿದ್ದು, ಈ ಪ್ರಕ್ರಿಯೆ ಶೀಘ್ರದಲ್ಲಿಯೇ ನಡೆಯಲಿದೆ' ಎಂದು ಸಚಿವರು ಹೇಳಿದರು.[ಬೆಂಗಳೂರು-ಮೈಸೂರು ನಡುವೆ 6 ಪಥದ ರಸ್ತೆ]

hc mahadevappa

ಸದ್ಯ, ಸಿದ್ಧಪಡಿಸಿರುವ ಯೋಜನೆಯಂತೆ ಬೆಂಗಳೂರಿನ ಜ್ಞಾನಭಾರತಿ ಜಂಕ್ಷನ್‌ನಿಂದ ಮೈಸೂರಿನ ಕೊಲಂಬಿಯಾ ಆಸ್ಪತ್ರೆ ತನಕ ಒಟ್ಟು 117 ಕಿ.ಮೀ. ಉದ್ದದ ರಸ್ತೆಯನ್ನು ಆರು ಪಥದ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುತ್ತದೆ.[ಬೆಂ-ಮೈಸೂರು 6 ಪಥದ ರಸ್ತೆ, ಭೂ ಸ್ವಾಧೀನ ಆರಂಭ]

ಬೈಪಾಸ್, ಮೇಲ್ಸೇತುವೆ : ಆರುಪಥದ ರಸ್ತೆ ನಿರ್ಮಿಸುವಾಗ ಬಿಡದಿ, ರಾಮನಗರ, ಚನ್ನಪಟ್ಟಣ, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬೈಪಾಸ್ ನಿರ್ಮಾಣ ಮಾಡಲಾಗುತ್ತದೆ. ಮದ್ದೂರು ಸಮೀಪ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತದೆ.

ಯೋಜನೆಯಲ್ಲಿ ಬದಲಾವಣೆ : 6 ಪಥದ ರಸ್ತೆ ನಿರ್ಮಾಣ ಕಾಮಗಾರಿಯ ಯೋಜನೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಮೊದಲು ಜ್ಞಾನಭಾರತಿ ಜಂಕ್ಷನ್‌ನಿಂದ ನೈಸ್ ರಸ್ತೆ ವರೆಗೆ ಫ್ಲೈ ಓವರ್ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಅಲ್ಲಿ ನಮ್ಮ ಮೆಟ್ರೋ ಮೇಲ್ಸೇತುವೆ ಬರುವುದರಿಂದ ಆ ಯೋಜನೆಯನ್ನು ಕೈಬಿಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+