ಶುರುವಾಯ್ತು ಮತ್ತೆ ಬಿಜೆಪಿ-ಕಾಂಗ್ರೆಸ್ ಕ್ರೆಡಿಟ್ ವಾರ್; ಆ ರಸ್ತೆ ಮಾಡಿದ್ದು ನಾವು: ಸಿದ್ದರಾಮಯ್ಯ
ಬೆಳಗಾವಿಯ ಶಿವಾಜಿ ಪ್ರತಿಮೆಯ ನಂತರ ಇದೀಗ ಕಾಂಗ್ರೆಸ ಹಾಗೂ ಬಿಜೆಪಿ ನಡುವೆ ಮೈಸೂರು-ಬೆಂಗಳೂರು ದಶಪಥ ರಸ್ತೆಯ ಕ್ರೆಡಿಟ್ ವಾರ್ ಶುರುವಾಗಿದೆ.
ಮೈಸೂರು,ಮಾರ್ಚ್6 : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಪ್ರತಿಮೆ ಪೊಲಿಟಿಕ್ಸ್ ಜೋರಾಗಿತ್ತು, ಇದೀಗ ಮೈಸೂರು-ಬೆಂಗಳೂರು ದಶಪಥ ರಸ್ತೆಯ ಕ್ರೆಡಿಟ್ ವಾರ್ ಶುರುವಾಗಿದೆ.
ಹೌದು, ಮಾರ್ಚ್ 9 ರಂದು ಮೈಸೂರು-ಬೆಂಗಳೂರು ದಶಪಥ ರಸ್ತೆಯನ್ನ ಪರಿಶೀಲಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದು, ಆ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೆ ಸಲ್ಲಬೇಕು. ಇದರಲ್ಲಿ ಸಂಸದ ಪ್ರತಾಪ್ ಸಿಂಹನದ್ದಾಗಲಿ, ಬಿಜೆಪಿ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ ಎಂದು ಹೇಳಿದ್ದಾರೆ.

ಇನ್ನೂ ಪ್ರತಾಪ್ ಸಿಂಹನ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಕೆಲವೇ ಕಿ ಮೀ ಮಾತ್ರ ಸೇರುತ್ತದೆ. ಆದರೂ ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ, ಇದರಲ್ಲಿ ಪ್ರತಾಪ್ ಸಿಂಹನ ಪಾತ್ರ ಏನು ಇಲ್ಲ. ಮಹದೇವಪ್ಪನಿಗೆ ಈ ರಸ್ತೆಯ ಎಲ್ಲಾ ಮಾಹಿತಿಯೂ ಗೊತ್ತಿದೆ. ಮಹದೇವಪ್ಪನೇ ಮುಂದೆ ನಿಂತು ಈ ರಸ್ತೆ ಮಾಡಿಸಿರು, ಆಗ ನಾನೂ ಇದ್ದೆ, ಆಗ ಆಸ್ಕರ್ ಫರ್ನಾಂಡೀಸ್ ಕೇಂದ್ರ ಸಚಿವರಾಗಿದ್ದರು.ಅವರ ಕಾಲದಲ್ಲೇ ಅಪ್ರೂವಲ್ ಆಗಿತ್ತು. ಈಗ ಆಸ್ಕರ್ ಫರ್ನಾಂಡೀಸ್ ಬದುಕಿಲ್ಲ, ಎಲ್ಲವೂ ಮಹದೇವಪ್ಪನ ಕಾಲದಲ್ಲಿ ಆಗಿದೆ. ದಶಪಥ ರಸ್ತೆ ನಮ್ಮ ಸರ್ಕಾರದ ಕೊಡುಗೆ ಎಂದು ಹೇಳಿದರು.
ನಾನು ಲೋಕಾಯುಕ್ತ ಬಂದ್ ಮಾಡಿಲ್ಲ. ನಾನು ಲೋಕಾಯುಕ್ತ ಬಂದ್ ಮಾಡಿದ್ದರೇ ಇವತ್ತೇ ರಾಜೀನಾಮೆ ಕೊಡುತ್ತೇನೆ. ನಾವು ಭ್ರಷ್ಟಾಚಾರ ನಿಗ್ರಹಕ್ಕಾಗಿ ಎಸಿಬಿ ರಚನೆ ಮಾಡಿದ್ದೇ ಅಷ್ಟೇ.
ನಾವು ಲೋಕಾಯುಕ್ತದ ಯಾವ ಅಧಿಕಾರವನ್ನು ಕಿತ್ತುಕೊಂಡಿಲ್ಲ ಎಂದು ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು.

ನಮ್ಮ ಕಾಲದಲ್ಲೂ ಲೋಕಾಯುಕ್ತರು ಇದ್ದರು. ಎಲ್ಲಾ ಸತ್ಯ ಗೊತ್ತಿದ್ದರೂ ಬಸವರಾಜ ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ. ಎಸಿಬಿ ರದ್ದು ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು.
ಆದರೆ ಎಸಿಬಿ ರದ್ದು ಮಾಡಿದ್ದು ಬಿಜೆಪಿ ಸರ್ಕಾರವಲ್ಲ. ಎಸಿಬಿ ರದ್ದು ಮಾಡಿದ್ದು ನ್ಯಾಯಾಲಯ. ಬಿಜೆಪಿಯವರಿಗೆ ಸುಳ್ಳು ಹೇಳುವುದು ಚಟ. ಸುಳ್ಳೇ ಬಿಜೆಪಿ ಮನೆದೇವರು.
ಹೀಗಾಗಿ ಲೋಕಾಯುಕ್ತ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆಂದು ಎಂದು ಸಿದ್ದರಾಮಯ್ಯ ಹರಿಹಾಯ್ದರು.
ಮಾಡಾಳ್ ವಿರೂಪಾಕ್ಷಪ್ಪನನ್ನು ಸರ್ಕಾರವೇ ರಕ್ಷಣೆ ಮಾಡುತ್ತಿದೆ. ವಿರೂಪಾಕ್ಷಪ್ಪ ಎಲ್ಲಿದ್ದಾನೆಂದು ಸರ್ಕಾರಕ್ಕೆ ಗೊತ್ತಿದೆ, ವಿರೂಪಾಕ್ಷಪ್ಪ ಅವನ ಮನೆಯಲ್ಲೇ ಓಡಾಡಿಕೊಂಡಿದ್ದಾನೆ.
ಅವನನ್ನು ಬಂಧಿಸದೇ ಇವರು ನಾಟಕ ಮಾಡ್ತಿದ್ದಾರೆ. ಲುಕ್ ಔಟ್ ನೋಟೀಸ್ ಜಾರಿ ಹೆಸರಿನಲ್ಲಿ ಜನರ ಗಮನ ಬೇರೆಡೆಗೆ ಸೆಳೆಯುತ್ತಿದ್ದಾರೆ ಅಷ್ಟೇ. ಮಾಡಾಳ್ ವಿರೂಪಾಕ್ಷಪ್ಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ಬಂದಾಗಲೇ ಅವನನ್ನು ಯಾಕೆ ಬಂಧಿಸಲಿಲ್ಲ ಎಂದು ಪ್ರಶ್ನಿಸಿದರು.
ಭ್ರಷ್ಟಾಚಾರದ ಆರೋಪಕ್ಕೆ ಮಿಸ್ಟರ್ ಬಸವರಾಜ ಬೊಮ್ಮಯಿ ಸಾಕ್ಷಿ ಕೇಳುತ್ತಿದ್ದರು. ಈಗ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ, ಏನು ಕ್ರಮ ತೆಗೆದುಕೊಂಡಿದ್ದಾರೆ.? ಆದರೂ ನಮಗೆ ಮುಜುಗರ ಆಗಿಲ್ಲ ಅಂತಿದ್ದಾರೆ, ಇವರಿಗೆ ಮುಜುಗರ ಆಗಿದೆ. ಅಪ್ಪ ಅಧ್ಯಕ್ಷ ಆಗಿದ್ದ ಕಾರಣಕ್ಕೆ ಮಗನ ಮೂಲಕ ಲಂಚ ಕೊಡಲು ಬಂದಿದ್ದರು. ಹೀಗಾಗಿ ಅಪ್ಪನೇ ಮೊದಲ ಆರೋಪಿ. ಮಾಡಾಳ್ ವಿರೂಪಾಕ್ಷಪ್ಪನನ್ನು ಕೂಡಲೇ ಬಂಧಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.












Click it and Unblock the Notifications