Bengaluru-Mysuru Expressway : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಬೆಳವಣಿಗೆಗೆ ಸಹಕಾರಿ: ಮೋದಿ
ನವದೆಹಲಿ ಮಾರ್ಚ್, 10: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಮುಖ ಯೋಜನೆಯಾಗಿದ್ದು, ಅದು ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.
ಬೆಂಗಳೂರು ಮೈಸೂರು ನಡುವೆ ನಿರ್ಮಿಸಿರುವ 118 ಕಿಲೋ ಮೀಟರ್ ಉದ್ದದ ಎಕ್ಸ್‌ಪ್ರೆಸ್‌ವೇಯು ಇದೇ ಮಾರ್ಚ್ 12ರಂದು ಉದ್ಘಾಟನೆಗೆ ಸಜ್ಜಾಗಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಟ್ವೀಟ್ ಅನ್ನು ಪ್ರಧಾನಿ ಮೋದಿ ಟ್ಯಾಗ್ ಮಾಡಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣವು ರಾಷ್ಟ್ರೀಯ ಹೆದ್ದಾರಿ-275 ರ ಭಾಗವನ್ನು ಸುತ್ತುವರೆದಿದೆ. ನಾಲ್ಕು ರೈಲು ಮೇಲ್ಸೇತುವೆಗಳು, ಒಂಬತ್ತು ಪ್ರಮುಖ ಸೇತುವೆಗಳು, 40 ಸಣ್ಣ ಸೇತುವೆಗಳು ಮತ್ತು 89 ಅಂಡರ್‌ಪಾಸ್‌ಗಳು ಮತ್ತು ಮೇಲ್ಸೇತುವೆಗಳನ್ನು ಒಳಗೊಂಡಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ ಮುಂಚಿತವಾಗಿ ಕರ್ನಾಟಕ ಬಹುಚರ್ಚಿತ ಹೆದ್ದಾರಿಯಾದ ಮೈಸೂರು ಬೆಂಗಳೂರು ಹೆದ್ದಾರಿಯನ್ನು ಇದೇ ಮಾರ್ಚ್ 12ರಂದು ಕರ್ನಾಟಕಕ್ಕೆ ಬರಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ಹೆದ್ದಾರಿಯಲ್ಲಿ 1.8 ಕಿ.ಮೀ.ವರೆಗೆ ರೋಡ್ ಶೋ ಕೂಡ ನಡೆಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಂಡ್ಯದ ಐಬಿ ವೃತ್ತದಿಂದ ಮೈ ಶುಗರ್ ಫ್ಯಾಕ್ಟರಿ ಸರ್ಕಲ್‌ವರೆಗೆ ಮೋದಿ ಅವರ ರೋಡ್ ಶೋ ನಡೆಯಲಿದೆ. ಬಳಿಕ ಕಾರಿನಲ್ಲಿ ತೆರಳುವ ನರೇಂದ್ರ ಮೋದಿಯವರು ರಸ್ತೆ ಪಕ್ಕದಲ್ಲಿ ನಿಂತು ವೀಕ್ಷಿಸುವ ಗ್ರಾಮಸ್ಥರತ್ತಲೂ ಮಾತನಾಡುವ ನಿರೀಕ್ಷೆ ಇದೆ. ಮದ್ದೂರು ತಾಲೂಕು ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನಾ ವೇದಿಕೆಗೆ ಹೋಗುವ ಮುನ್ನ ನಿಗಧಿತ ಸ್ಥಳದಲ್ಲಿ ದಶಪಥ ಹೆದ್ದಾರಿಯನ್ನು ಉದ್ಘಾಟಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಹೆದ್ದಾರಿಯಲ್ಲಿ 50 ಮೀಟರ್ ಕಾಲ್ನಡಿಗೆ
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ನಿಗದಿಪಡಿಸಿರುವ ಸ್ಥಳದಿಂದ ಅವರು ಸ್ವಲ್ಪ ದೂರ 50 ಮೀಟರ್ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ತೆರಳುವ ನಿರೀಕ್ಷೆ ಇದೆ. ಇಲ್ಲಿ ಸ್ಥಳೀಯ ಮಹಿಳೆಯರು ಮೋದಿ ಅವರಿಗೆ ಬೆಲ್ಲದ ಆರತಿ ಮಾಡಿ ಸ್ವಾಗತಿಸಲಿದ್ದಾರೆ. ಬಳಿಕ ದಶಪಥ ಹೆದ್ದಾರಿಯನ್ನು ಟೇಪು ಕತ್ತರಿಸುವ ಮೂಲಕ ಉದ್ಘಾಟಿಸಲಿದ್ದಾರೆ. ದಶಪಥ ರಸ್ತೆ ಉದ್ಘಾಟನೆ ಬಳಿಕ ನೇರವಾಗಿ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಿರುವ ವೇದಿಕೆಗೆ ತೆರಳಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ವಿವಿಧ ಭಾಗದಿಂದ ಕಾರ್ಯಕರ್ತರು
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಮಂಡ್ಯದ ವಿವಿಧ ಭಾಗದಿಂದ ಕಾರ್ಯಕರ್ತರು ಜನರು ಆಗಮಿಸಿಸಲಿದ್ದಾರೆ. ಇದಲ್ಲದೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಕಾರ್ಯಕ್ರಮಕ್ಕೆ ಬರಲು ಜನರಿಗೆ ಸುಮಾರು 3 ಸಾವಿರಕ್ಕೂ ಹೆಚ್ಚಿನ ಸಾರಿಗೆ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರ, ಹಾಸನ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾರಿಗೆ ಬಸ್‌ಗಳನ್ನು ನಿಯೋಜಿಸಲಾಗಿದೆ.

ರಾತ್ರೋರಾತ್ರಿ 34 ಮರಗಳಿಗೆ ಕೊಡಲಿ
ನರೇಂದ್ರಮೋದಿ ರೋಡ್ ಶೋಗಾಗಿ ರಾತ್ರೋರಾತ್ರಿ 34 ಮರಗಳನ್ನು ಕಡಿದು ಹಾಕಲಾಗಿದೆ. ರಸ್ತೆಗೆ ಅಡ್ಡಲಾಗಿರುವ ಮರಗಳ ರೆಂಬೆ-ಕೊಂಬೆಗಳನ್ನು ತೆರವುಗೊಳಿಸುವ ಬದಲು ಮರಗಳ ಅರ್ಧ ಭಾಗವನ್ನೇ ಕಡಿದುಹಾಕಿರುವುದು ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಒಣಗಿಹೋಗಿರುವ ಮರಗಳನ್ನು ಕತ್ತರಿಸುವುದಕ್ಕೆ ವರ್ಷಾನುಗಟ್ಟಲೇ ಸತಾಯಿಸುವ ಅರಣ್ಯ ಇಲಾಖೆ ಸಿಬ್ಬಂದಿ, ಇದೀಗ ರಾತ್ರೋರಾತ್ರಿ ಮರಗಳ ಮಾರಣಹೋಮ ನಡೆಸಿದ್ದಾರೆ.

ಉದ್ಘಾಟನೆಗೂ ಮುನ್ನವೇ ಈಗ ರಾಜಕೀಯ ಕೆಸರೆರಚಾಟ
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೂ ಮುನ್ನವೇ ಈಗ ರಾಜಕೀಯ ಕೆಸರೆರಚಾಟ ಶುರುವಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಈ ಹೆದ್ದಾರಿ ಶ್ರೇಯ ಪ್ರಧಾನಿ ಮೋದಿ ಅವರಿಗೆ ಸೇರಬೇಕು ಎಂದು ಹೇಳಿದರೆ, ಕರ್ನಾಟಕ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರತಾಪ್ ಸಿಂಹ ಎಕ್ಸ್‌ಪ್ರೆಸ್‌ವೇ ಇರುವ ಮೈಸೂರಿನ 7 ಕಿಮೀಗಷ್ಟೆ ಸಂಸದ ಉಳಿದರು ಏನು ಮಾಡಿಲ್ಲವೇ. ವಾಸ್ತವವಾಗಿ ಇದು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅನುಮೋದನೆಗೊಂಡ ಯೋಜನೆಯಾಗಿದೆ ಎಂದು ಹೇಳಿದರು.












Click it and Unblock the Notifications