ಕಳ್ಳರೇ ಎಚ್ಚರ.. ಹೈ ರೆಸ್ಯೂಲೇಷನ್ ಕ್ಯಾಮೆರಾ ಬರ್ತಿದೆ ಲಾಕ್ ಆಗ್ತೀರ!
ಬೆಂಗಳೂರು: ಕರ್ನಾಟಕದಲ್ಲಿ ಅಪರಾಧ ಪ್ರಕರಣ ಏರಿಕೆಯಾಗುತ್ತಿವೆ. ಅದರಲ್ಲೂ ಸುಲಿಗೆ ಮಾಡುವವರು ಮತ್ತು ಚೈನ್ ಕಳ್ಳರನ್ನ ಬಲೆಗೆ ಬೀಳಿಸೋದೆ ರಾಜ್ಯ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ರಾಜ್ಯ ಗೃಹ ಇಲಾಖೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಅದರ ಸಂಪೂರ್ಣ ಮಾಹಿತಿಯನ್ನ ಖುದ್ದು ಗೃಹ ಸಚಿವರೇ ನೀಡಿದ್ದಾರೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.
ಕಳ್ಳರ ಕಾಟಕ್ಕೆ ಬ್ರೇಕ್ ಬೀಳುತ್ತಿಲ್ಲ, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರು ಚಿನ್ನದ ಆಭರಣ ಧರಿಸಿಕೊಂಡು ಧೈರ್ಯವಾಗಿ ಓಡಾಡಲು ಆಗುತ್ತಿಲ್ಲ. ಯಾಕಂದ್ರೆ ಥಟ್ ಅಂತಾ ವಕ್ಕರಿಸುವ ಖದೀಮರು, ಕತ್ತಲ್ಲಿ ಇರುವ ಚಿನ್ನದ ಸರವನ್ನ ಪಟ್ ಅಂತಾ ಎಗರಿಸಿ ಎಸ್ಕೇಪ್ ಆಗಿಬಿಡ್ತಾರೆ. ಆದ್ರೆ ಈ ಖದೀಮರನ್ನ ಬಲೆಗೆ ಬೀಳಿಸುವುದೇ ಕಷ್ಟದ ಕೆಲಸವಾಗಿ ಪರಿಣಮಿಸಿತ್ತು. ಅದರಲ್ಲೂ ಬೆಂಗಳೂರಿನ ವಿವಿಧೆಡೆ ಪೊಲೀಸ್ ಇಲಾಖೆ ಹಾಕಿರುವ ಸಿಸಿ ಕ್ಯಾಮೆರಾ ಬ್ಲರ್ ಬ್ಲರ್ ಕ್ವಾಲಿಟಿ. ಹೀಗಾಗಿ ಎಲ್ಲವನ್ನೂ ಹೈಫೈ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, HD ಕ್ವಾಲಿಟಿಯ ಸಿಸಿ ಕ್ಯಾಮೆರಾ ಅಳವಡಿಸಲಿದೆಯಂತೆ.

ಕಳ್ಳರು ಅಂದರ್ ಆಗೋದು ಸುಲಭ!
ಹೌದು, ಬೆಂಗಳೂರಿನಲ್ಲಿ ಅಪರಾಧ ಕೃತ್ಯ ತಡೆಗೆ ಗೃಹ ಇಲಾಖೆ ಖಡಕ್ ಕ್ರಮ ಕೈಗೊಂಡಿದೆ. ಸೂಕ್ಷ್ಮ ಪ್ರದೇಶಗಳನ್ನ ಆಯ್ಕೆ ಮಾಡಿಕೊಂಡು, ಅಲ್ಲಿ ಭದ್ರತೆ ಹೆಚ್ಚಿಸಲು ಮುಂದಾಗಿದೆ. ಮಹಿಳೆಯರು ಓಡಾಡುವ ಸ್ಥಳಗಳು ಸೇರಿ ಅಗತ್ಯ ಎನಿಸಿದ ಜಾಗಗಳಲ್ಲಿ ಬರೋಬ್ಬರಿ 7000 HD ಕ್ವಾಲಿಟಿಯ ಸಿಸಿ ಕ್ಯಾಮೆರಾ ಅಳವಡಿಕೆಗೆ ನಿರ್ಧರಿಸಲಾಗಿದೆ. ಈ ಮೂಲಕ ಒಟ್ಟು 80 ಠಾಣೆಗಳಲ್ಲಿ ಸಿಸಿ ಕ್ಯಾಮೆರಾ ದೃಶ್ಯ ನೋಡಲು ವ್ಯವಸ್ಥೆ ಮಾಡಲಾಗಿದೆ ಅಂತಾ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwara) ಮಾಹಿತಿ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಈ ಮಹತ್ವದ ಮಾಹಿತಿ ತಿಳಿಸಿದ್ದಾರೆ.
ಇಂದು @CPBlr ಅವರ ಕಛೇರಿಗೆ ಕರ್ನಾಟಕದ ಗೌರವಾನ್ವಿತ ಗೃಹ ಸಚಿವರಾದ @DrParameshwaraರು ಭೇಟಿ ನೀಡಿದರು.
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) June 16, 2023
ಭೇಟಿಯ ಭಾಗವಾಗಿ, ಅವರು #BengaluruSafeCityProject ಪ್ರಗತಿಯನ್ನು ವಿವರಿಸಿದರು ಮತ್ತು @BlrCityPoliceನ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ತೆಗೆದುಕೊಂಡ ಪೂರ್ವಭಾವಿ ಕ್ರಮಗಳನ್ನು ಪರಿಶೀಲಿಸಿದರು. ಹೊಯ್ಸಳ ಸಿಬ್ಬಂದಿಗೆ ಫಿಂಗರ್… https://t.co/ce5FCTdovJ
ಮಹಿಳೆಯರ ರಕ್ಷಣೆಗೆ 'ಸೇಫ್ಟಿ ಐಲ್ಯಾಂಡ್'
ಭಾರತದ ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದ್ರೆ ಕರ್ನಾಟಕ ಸುರಕ್ಷಿತ ಎನ್ನುವ ಮಾತಿದೆ. ಆದರೂ ರಾಜಧಾನಿ ಬೆಂಗಳೂರಲ್ಲಿ ಆಗಾಗ ಕಿರಾತಕರ ಅಟ್ಟಹಾಸ ನಡೆಯುತ್ತಲೇ ಇರುತ್ತೆ. ಹೀಗಾಗಿ ಮಹಿಳೆಯರ ರಕ್ಷಣೆಗೆ ಅಂತಾ ಮತ್ತೊಂದು ಅತ್ಯಾಧುನಿಕ ಕ್ರಮ ಕೈಗೊಳ್ಳಲು ಈಗ ರಾಜ್ಯ ಗೃಹ ಇಲಾಖೆ ಮುಂದಾಗಿದೆ. ಬೆಂಗಳೂರಿನ ಒಟ್ಟು 30 ಕಡೆಗಳಲ್ಲಿ ಸೇಫ್ಟಿ ಐಲ್ಯಾಂಡ್ ತೆರೆಯಲಾಗಿದ್ದು, ಸೇಫ್ಟಿ ಐಲ್ಯಾಂಡ್ ಮೂಲಕ ಮಹಿಳೆಯರಿಗೆ ರಕ್ಷಣೆ ಒದಗಿಸಲು ಪ್ಲ್ಯಾನ್ ಮಾಡಲಾಗಿದೆ. ಸೇಫ್ಟಿ ಐಲ್ಯಾಂಡ್ನಲ್ಲಿ ಬಟನ್ ಒತ್ತಿದರೆ ಸಾಕು ಪೊಲೀಸರಿಗೆ ಸಮಸ್ಯೆಯಲ್ಲಿ ಸಿಲುಕಿದವರ ಮಾಹಿತಿ ಸಿಗಲಿದೆ. ಕೆಲವೇ ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಬಂದು ರಕ್ಷಣೆ ಮಾಡುತ್ತಾರೆ ಎಂದು ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಠಾಣೆಯಲ್ಲಿ ದೂರು ಸ್ವೀಕರಿಸದಿದ್ದರೆ ಕ್ರಮ!
ಬೆಂಗಳೂರಿನ ಪೊಲೀಸರು ಸೇರಿದಂತೆ ಕರ್ನಾಟಕ ಪೊಲೀಸ್ ಇಲಾಖೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮತ್ತೊಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸ್ ಇಲಾಖೆ ಜನಸ್ನೇಹಿ ಆಗಬೇಕಿದೆ. ಪೊಲೀಸ್ ಸಿಬ್ಬಂದಿಗೆ ಹಿರಿಯ ಅಧಿಕಾರಿಗಳು ತಿಳಿಹೇಳಬೇಕಾಗಿದ್ದು ಆ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಖಡಕ್ ಸೂಚನೆ ನೀಡಿದ್ದೇನೆ. ಇಷ್ಟೇ ಅಲ್ಲದೆ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಲ್ಲ ಎಂಬ ದೂರು ಬರಬಾರದು. ನಾನು ಕೂಡ ಠಾಣೆಗೆ ವಿಸಿಟ್ ಕೊಟ್ಟು, ಪರಿಶೀಲನೆ ನಡೆಸುತ್ತೇನೆ ಎಂದಿದ್ದಾರೆ ಗೃಹ ಸಚಿವ. ಸರ್ಕಾರ ಪೊಲೀಸರಿಗೆ ಎಲ್ಲಾ ರೀತಿ ಸಹಕಾರ ನೀಡಲಿದ್ದು, ಪೊಲೀಸ್ ಇಲಾಖೆ ಜನಪರ ಕೆಲಸ ಮಾಡಬೇಕಿದೆ ಎಂದರು.
ಫಿಂಗರ್‌ಪ್ರಿಂಟ್ ಸ್ಕ್ಯಾನರ್ ವಿತರಣೆ
ಇನ್ನು ಬೆಂಗಳೂರಲ್ಲಿ ಗೃಹ ಸಚಿವರು ಹೊಯ್ಸಳ ಸಿಬ್ಬಂದಿಗೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ಗಳು ಮತ್ತು ಬಾಡಿ ವೋರ್ನ್ ಕ್ಯಾಮೆರಾ ವಿತರಿಸಿದರು, ಈ ಬಗ್ಗೆ ಬೆಂಗಳೂರು ಪೊಲೀಸ್ ಇಲಾಖೆ ಟ್ವೀಟ್ ಮಾಡಿದೆ. 'ಇಂದು @CPBlr ಅವರ ಕಛೇರಿಗೆ ಕರ್ನಾಟಕದ ಗೌರವಾನ್ವಿತ ಗೃಹ ಸಚಿವರಾದ @DrParameshwaraರು ಭೇಟಿ ನೀಡಿದರು. ಭೇಟಿಯ ಭಾಗವಾಗಿ, ಅವರು #BengaluruSafeCityProject ಪ್ರಗತಿಯನ್ನು ವಿವರಿಸಿದರು ಮತ್ತು @BlrCityPoliceನ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ತೆಗೆದುಕೊಂಡ ಪೂರ್ವಭಾವಿ ಕ್ರಮಗಳನ್ನು ಪರಿಶೀಲಿಸಿದರು. ಹೊಯ್ಸಳ ಸಿಬ್ಬಂದಿಗೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ಗಳು ಮತ್ತು ಬಾಡಿ ವೋರ್ನ್ ಕ್ಯಾಮೆರಾ ವಿತರಿಸಿದರು, ಇದು ಸುರಕ್ಷಿತ ಬೆಂಗಳೂರಿನತ್ತ ನಮ್ಮ ಬದ್ಧತೆಯನ್ನು ಇನ್ನಷ್ಟು ಬಲಪಡಿಸುತ್ತದೆ.' ಎಂದು ತಿಳಿಸಿದೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ











Click it and Unblock the Notifications