ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ ; ಅನ್ ಖೈದಾ ಜೊತೆಗೆ ನಂಟು
ಬಂಧಿತ ಆರೀಫ್ ಅಲ್ ಖೈದಾ ಉಗ್ರ ಸಂಘಟನೆಯ ಜೊತೆಗೆ ನಿತಂತರವಾಗಿ ಸಂಪರ್ಕದಲ್ಲಿದ್ದು, ಸಿರಿಯಾ ಮೂಲಕ ಇರಾಕ್ ಗೆ ಹೋಗಲು ಪ್ರಯತ್ನಿಸುತ್ತಿದ್ದ ಎಂದು ವರದಿಯಲ್ಲಿ ತಿಳಿದು ಬಂದಿದೆ
ಬೆಂಗಳೂರು, ಫೆಬ್ರವರಿ11: ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಖಚಿತ ಮಾಹಿತಿ ಮೇರೆಗೆ ರಾಜ್ಯ ಪೊಲೀಸರು ಒಬ್ಬ ವ್ಯಕ್ತಿಯನ್ನು ಇಂದು (ಶನಿವಾರ) ಮುಂಜಾನೆ ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರಿನ ತಣಿಸಂದ್ರದ ಮಂಜುನಾಥ್ ನಗರದಲ್ಲಿ ಉತ್ತರ ಪ್ರದೇಶ ಮೂಲದ ಟೆಕ್ಕಿಯನ್ನ ಕರ್ನಾಟಕ ಪೋಲಿಸ್, ಆಂತರಿಕ ಭದ್ರತಾ ಇಲಾಖೆ ಹಾಗೂ ರಾಷ್ಟ್ರೀಯ ಭದ್ರತಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನನ್ನು ಆರೀಫ್ ಎಂದು ಗುರುತಿಸಲಾಗಿದ್ದು, ರಾಜ್ಯ ಪೊಲೀಸರು ಕೇಂದ್ರದ ಬೇಹುಗಾರಿಕೆ ಸಂಸ್ಥೆಯ ಅಧಿಕಾರಿಗಳ ಸಹಯೋಗದಿಂದ ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಬಂಧಿತನಾದ ಆರೀಫ್ ವಿದೇಶ ಪ್ರಯಾಣಕ್ಕೆ ತಯಾರಿ ನಡೆಸಿದ್ದ ಎಂದೂ ಹೇಳಲಾಗಿದ್ದು, ಅಷ್ಟರಲ್ಲಿಯೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆರೀಫ್ ಟೆಲಿಗ್ರಾಂ, ಡಾರ್ಕ್ ವೆಬ್ ಮೂಲಕ ಅಲ್‌ಖೈದಾ ಗ್ರೂಪ್‌ಗಳಲ್ಲಿ ಸಕ್ರಿಯನಾಗಿದ್ದ ಎಂದು ತಿಳಿದು ಬಂದಿದೆ. ಬೆಂಗಳೂರಿನ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ವರ್ಕ್ ಫ್ರಂ ಹೋಮ್ ಮೂಲಕ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದು ಬಂದಿದೆ.
ಭಾರತವನ್ನು ದುರ್ಬಲಗೊಳಿಸುವ ಎಲ್ಲ ಪ್ರಯತ್ನಗಳನ್ನು ಹತ್ತಿಕ್ಕಲಾಗುವುದು
ದೇಶದಲ್ಲಿ ಕೋಮು ಭಾವನೆ ಕೆರಳಿಸಿ ಅಸ್ಥಿರತೆ ಉಂಟು ಮಾಡುತ್ತಿರುವ ಸಂಘಟನೆಗಳೂ ಹಾಗೂ ಅವುಗಳ ಸಂಪರ್ಕ ಹೊಂದಿರುವ ವ್ಯಕ್ತಿಗಳ ಬಗ್ಗೆ, ಸದಾ ಕಣ್ಗಾವಲು ಇರಿಸಿದ್ದು, ಭಾರತವನ್ನು ದುರ್ಬಲ ಗೊಳಿಸುವ ಎಲ್ಲಾ ಪ್ರಯತ್ನಗಳನ್ನು ಹತ್ತಿಕ್ಕಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬಂಧಿತ ಆರೀಫ್ ಅಲ್ ಖೈದಾ ಉಗ್ರ ಸಂಘಟನೆಯ ಜೊತೆಗೆ ನಿತಂತರವಾಗಿ ಸಂಪರ್ಕದಲ್ಲಿದ್ದು, ಸಿರಿಯಾ ಮೂಲಕ ಇರಾಕ್ ಗೆ ಹೋಗಲು ಪ್ರಯತ್ನಿಸುತ್ತಿದ್ದ ಎಂದು ವರದಿಯಲ್ಲಿ ತಿಳಿದು ಬಂದಿದೆ. ಐಸಿಸ್ ಜತೆಗೆ ಈತ ನಂಟು ಹೊಂದಿರುವುದನ್ನು ಐಎಸ್‌ಡಿ ತಂಡವು ಪತ್ತೆಹಚ್ಚಿತ್ತು. ಈತನ ಚಲನವಲನಗಳ ಮೇಲೆ ನಿಗಾ ಇರಿಸಲಾಗಿತ್ತು. ಈತ ಐಸಿಸ್‌ಗೆ ಸೇರಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದ ಎನ್ನಲಾಗಿದೆ.
ಅಲ್ ಖೈದಾ ಸಂಘಟನೆ ಜತೆಗೆ ನಿರಂತರ ಸಂಪರ್ಕ ಹೊಂದಿದ್ದ ಈತನು ಮುಂದಿನ ತಿಂಗಳು ಇರಾಕ್ ಮೂಲಕ ಸಿರಿಯಾಗೆ ಹೋಗಲು ಯತ್ನಿಸಿದ್ದ ಎಂದು ವರದಿಗಳು ತಿಳಿಸಿವೆ. ಇನ್ನೂ ಈ ತಿಂಗಳು ಮನೆ ಖಾಲಿ ಮಾಡಲು ಸಿದ್ದತೆಯನ್ನ ನಡೆಸಿದ ಆರೀಫ್ ತನ್ನ ಪತ್ನಿ ಹಾಗೂ ಮಕ್ಕಳನ್ನು ಉತ್ತರ ಪ್ರದೇಶದಲ್ಲಿ ಬಿಟ್ಟು ಉಗ್ರ ಸಂಘಟನೆಗೆ ಸೇರಲು ಮುಂದಾಗಿದ್ದ ಎಂದು ತಿಳಿದು ಬಂದಿದೆ.












Click it and Unblock the Notifications