Matific ಗಣಿತ ಅನ್‌ಲೈನ್ ಪರೀಕ್ಷೆ: ಕೋರಮಂಗಲ ಪೊಲೀಸ್ ಪಬ್ಲಿಕ್ ಶಾಲೆ ನಂಬರ್ 1
ಬೆಂಗಳೂರು, ಸೆ. 23: ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ದೇಶದ ಅಗ್ರಗಣ್ಯ ಸಂಸ್ಥೆ ಒಲಂಪಿಯಾಡ್ ಪ್ರಸಕ್ತ ಸಾಲಿನಲ್ಲಿ ನಡೆಸಿದ "ಮ್ಯಾಟಿಫಿಕ್" ಜೂನಿಯರ್ ಮ್ಯಾಥ್ಸ್ ಚಾಂಪಿಯನ್ ಶಿಪ್ ನಲ್ಲಿ ದೇಶದಲ್ಲಿ ನಂಬರ್ ಒನ್ ಶಾಲೆಯಾಗಿ ಕೋರಮಂಗಲದ ಪೊಲೀಸ್ ಪಬ್ಲಿಕ್ ಶಾಲೆ ಹೊರ ಬಿದ್ದಿದೆ.
ಪೂರ್ವ ಪ್ರಾಥಮಿಕ ಹಂತದಿಂದ ಆರನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಒಲಂಪಿಯಾಡ್ ಸಂಸ್ಥೆ ಆನ್‌ಲೈನ್ ಮೂಲಕ "ಮ್ಯಾಟಿಫಿಕ್" ಚಾಂಪಿಯನ್‌ಶಿಪ್ ರಾಷ್ಟ್ರ ಮಟ್ಟದ ಸ್ಪರ್ಧೆಯನ್ನು ಏರ್ಪಡಿಸಿತ್ತು. ಕೋರಮಂಗಲದಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಯ 163 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ದೆಹಲಿಯ ಸರಪ್ ಪಬ್ಲಿಕ್ ಶಾಲೆಯ ಪಾರ್ಥ ಪಿ. ನಂಬರ್ ಒನ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಎರಡನೇ rankನ್ನು ದೆಹಲಿ ಪಬ್ಲಿಕ್ ಸ್ಕೂಲ್, ಬೆಂಗಳೂರು ದಕ್ಷಿಣ ವಿಭಾಗ ತನ್ನದಾಗಿಸಿಕೊಂಡಿದೆ.
ಚಾಂಪಿಯನ್ ಶಾಲೆ ವಿಭಾಗದಲ್ಲಿ ಕೋರಮಂಗಲದಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆ ನಂಬರ್ ಒನ್ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಮೂರು ದಿನದ ನಡೆದ ಮ್ಯಾಟಿಫಿಕ್ ಸ್ಪಧೆಯಲ್ಲಿ ಮೂರು ದಿನವೂ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎಲ್‌ಕೆಜಿ ಯಿಂದ ನರ್ಸರಿ ವರೆಗೆ ಕೋರಮಂಗಲ ಪೊಲೀಸ್ ಪಬ್ಲಿಕ್ ಶಾಲೆಯ 163 ವಿದ್ಯಾರ್ಥಿಗಳು ಮ್ಯಾಟಿಫಿಕ್ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಅದರಲ್ಲಿ ಏಳು ವಿದ್ಯಾರ್ಥಿಗಳು ವೈಯಕ್ತಿಕ ವಿಭಾಗದಲ್ಲಿ ಚಾಂಪಿಯನ್ ಗಳಾಗಿ ಹೊರ ಹೊಮ್ಮಿದ್ದಾರೆ.

ಆದರೆ, ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲ್ಗೊಂಡಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಕರು ಸಲಹೆ ಮಾಡಿದ, ಮತ್ತಿತರ ಮಾನದಂಡಗಳನ್ನು ಅನುಸರಿಸಿ ಕೊಡುವ ಚಾಂಪಿಯನ್ ಶಾಲೆ ವಿಭಾಗದಲ್ಲಿ ನಮ್ಮ ಶಾಲೆ ದೇಶದ ನಂಬರ್ ಒನ್ ಚಾಂಪಿಯನ್ ಶಾಲೆಯಾಗಿ ಹೊರ ಹೊಮ್ಮಿದೆ ಎಂದು ಕೋರಮಂಗಲದ ಪೊಲೀಸ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ನಂದಾ ಅವರು ಒನ್ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ.
ಹೊಸ ಕಲ್ಪನೆ ಶಿಕ್ಷಣಕ್ಕೆ ನಾಂದಿ ಹಾಡಿದ ಪೊಲೀಸ್ ಶಾಲೆ: ಮ್ಯಾಟಿರಿಕ್ ಚಾಂಪಿಯನ್‌ಶಿಪ್‌ನಲ್ಲಿ ಕೋರಮಂಗಲದ ಪೊಲೀಸ್ ಪಬ್ಲಿಕ್ ಶಾಲೆ ಅಗ್ರಗಣ್ಯ ಸ್ಥಾನ ಗಳಿಸಿದ್ದಕ್ಕೆ ಶಾಲೆ ನಿರ್ವಹಣಾ ಸಮಿತಿ ಮುಖ್ಯಸ್ಥರಾಗಿರುವ ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಒನ್ಇಂಡಿಯಾ ಕನ್ನಡ ಜತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ರಾಜ್ಯದಲ್ಲಿ ಕಮ್ಯುನಿಟಿ ಶಿಕ್ಷಣ ಕನಸಿನೊಂದಿಗೆ 2008 ರಲ್ಲಿ ಆರಂಭವಾಗಿದ್ದು ಕೋರಮಂಗಲದ ಪೊಲೀಸ್ ಪಬ್ಲಿಕ್ ಶಾಲೆ. ಪೊಲೀಸ್ ಅಧಿಕಾರಿಗಳಿಗೆ ಯಾವ ಶಾಲೆಯಲ್ಲಿ ಬೇಕಾದರೂ ಸೀಟು ಸಿಗುತ್ತೆ. ಆದರೆ ಪೊಲೀಸ್ ಸಿಬ್ಬಂದಿಗೆ ಎಷ್ಟೇ ಲಾಬಿ ಮಾಡಿದರೂ ಒಳ್ಳೆಯ ಶಾಲೆಗಳಲ್ಲಿ ಸೀಟು ಸಿಗಲ್ಲ. ಇನ್ನು ಕಡಿಮೆ ಸಂಬಳಕ್ಕೆ ದುಡಿಯುವ ಪೊಲೀಸ್ ಸಿಬ್ಬಂದಿಗೆ ದೊಡ್ಡ - ದೊಡ್ಡ ಶಾಲೆಗಳಲ್ಲಿ ಶಾಲಾ ಶುಲ್ಕ ಕಟ್ಟಲು ಸಾಧ್ಯವಿಲ್ಲ. ಹೀಗಾಗಿ ಯಾವುದೇ ಲಾಭ- ನಷ್ಟದ ಉದ್ದೇಶವಿಲ್ಲದ ಕಲ್ಪನೆಯೊಂದಿಗೆ ಹುಟ್ಟಿಕೊಂಡಿದ ಶಾಲೆ ಪೊಲೀಸ್ ಪಬ್ಲಿಕ್ ಶಾಲೆ. ಅಮೆರಿಕಾ ಸೇರಿದಂತೆ ಬಹುತೇಕ ಶಾಲೆಗಳಲ್ಲಿ ಕಮ್ಯುನಿಟಿ ಶಾಲೆಗಳೇ ಉತ್ತಮ ಶಿಕ್ಷಣ ನೀಡುತ್ತಿವೆ. ಈ ಉದ್ದೇಶದಿಂದ ಆರಂಭವಾದ ಪೊಲೀಸ್ ಪಬ್ಲಿಕ್ ಶಾಲೆಗಳು ಇದೀಗ ಮೈಸೂರು, ದಾವಣಗೆರೆ, ಶಿಗ್ಗಾಂವಿ, ಗುಲ್ಬರ್ಗಾ ಸೇರಿ ಐದು ಕಡೆ ಪ್ರಾರಂಭವಾಗಿವೆ. ಎಲ್ಲಾ ಕಡೆ ಅತ್ಯುತ್ತಮವಾಗಿ ನಡೆದುಕೊಂಡು ಹೋಗಿವೆ. ಮೊದಲು ಅರಂಭವಾದ ಶಾಲೆ ಇದೀಗ ಅಗ್ರಗಣ್ಯ ಶಾಲೆಯಾಗಿ ಹೊರ ಹೊಮ್ಮಿದೆ ಎಂದು ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ತಿಳಿಸಿದರು.

ನಾನು ಅಪರಾಧ ವಿಭಾಗದ ಡಿಸಿಪಿಯಾಗಿದ್ದಾಗ, ಕೆಎಸ್ಆರ್‌ಪಿ ಸಿಬ್ಬಂದಿಯ ಮಕ್ಕಳು ಅನೇಕ ಅಪರಾಧ ಪ್ರಕರಣದಲ್ಲಿ ಸಿಕ್ಕಿ ಬೀಳುತ್ತಿದ್ದರು. ಅವರಿಗೆ ಸೂಕ್ತ ಶಿಕ್ಷಣ, ಒಳ್ಳೆಯ ಸಹವಾಸ, ಪರಿಸರದ ಕೊರತೆ ಇಲ್ಲದಿರುವುದು ಕಾಣುತ್ತಿತ್ತು. ಇದೀಗ ಕಾಲ ಬದಲಾಗಿದೆ. ಕೆಎಸ್ಆರ್‌ಪಿ ಸಿಬ್ಬಂದಿಯಲ್ಲ, ಪೊಲೀಸ್ ಸಿಬ್ಬಂದಿಯ ಮಕ್ಕಳು ಸಿವಿಲ್ ಸೇವೆಗೆ ತಯಾರಿ ನಡೆಸುವ ಮಟ್ಟಕ್ಕೆ ಬದಲಾಗಿದ್ದಾರೆ. ಪೊಲೀಸ್ ಸಿಬ್ಬಂದಿಗೆ ಗುಣಮಟ್ಟದ ಶಿಕ್ಷಣವನ್ನು ಪೊಲೀಸ್ ಪಬ್ಲಿಕ್ ಶಾಲೆಗಳ ಮೂಲಕ ನೀಡಲಾಗಿತ್ತಿದೆ. ಮುಂದಿನ ದಿನಗಳಲ್ಲಿ ಈ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಪೊಲೀಸ್ ಪಬ್ಲಿಕ್ ಶಾಲೆಗೆ ಶಿಕ್ಷಕರನ್ನು ನೇಮಿಸಿಕೊಳ್ಳುವ ಸಂಬಂಧ ಯುಪಿಎಸ್‌ಸಿ ಮಾದರಿ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳುತ್ತೇವೆ. ಸಂದರ್ಶನದಲ್ಲಿ ಆಯ್ಕೆಯಾದವರಿಗೆ ಅವಕಾಶ ಕೊಡುತ್ತೇವೆ ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.

Recommended Video
ಕೋರಮಂಗಲ ಪೊಲೀಸ್ ಪಬ್ಲಿಕ್ ಶಾಲೆ: ಕರ್ನಾಟಕ ಪೊಲೀಸ್ ಇಲಾಖೆ ಪೊಲೀಸರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ 2008 ರಲ್ಲಿ ಆರಂಭವಾಗಿದ್ದು ಪೊಲೀಸ್ ಪಬ್ಲಿಕ್ ಶಾಲೆ. ಕೋರಮಂಗಲದ ಕೆಎಸ್ಆರ್‌ಪಿ ಸಿಬ್ಬಂದಿ ನೆಲೆಸಿರುವ ಜಾಗದಲ್ಲಿ ಶಾಲೆ ಪ್ರಾರಂಭದ ಮೂಲಕ ಪೊಲೀಸ್ ಸಿಬ್ಬಂದಿಯ ಮಕ್ಕಳಿಗೂ ಉತ್ತಮ ಶಿಕ್ಷಣ ನೀಡುವ ಅವಕಾಶ ಕಲ್ಪಿಸಲಾಗಿದೆ. ಕಮ್ಯುನಿಟಿ ಶಾಲೆ ಪ್ರಾರಂಭದ ಮೂಲಕ ಪೊಲೀಸ್ ಸಿಬ್ಬಂದಿ ಕಡಿಮೆ ಶುಲ್ಕಕ್ಕೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕೋರಮಂಗಲದಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಸುಮಾರು 1300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸುಸಜ್ಜಿತ ಲ್ಯಾಬ್, ಆಟದ ಮೈದಾನ ಸೇರಿದಂತೆ ಗುಣಮಟ್ಟದ ಶಿಕ್ಷಣವನ್ನು ಪೊಲೀಸ್ ಸಿಬ್ಬಂದಿಯ ಮಕ್ಕಳಿಗೆ ನೀಡಲಾಗುತ್ತಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications