ತೊಗಾಡಿಯಾಗೆ ನಿಷೇಧ ಯಾರು, ಏನು ಹೇಳಿದರು?
ಬೆಂಗಳೂರು, ಫೆ.5 : ವಿಶ್ವ ಹಿಂದೂ ಪರಿಷತ್‌ನ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಬೆಂಗಳೂರು ಪ್ರವೇಶಿಸದಂತೆ ನಿಷೇಧ ವಿಧಿಸಿರುವ ಕ್ರಮ ಬುಧವಾರ ಉಭಯ ಸದನಗಳಲ್ಲಿ ಗದ್ದಲಕ್ಕೆ ಕಾರಣವಾಗಿತ್ತು. ಅತ್ತ ತೊಗಾಡಿಯಾ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಫೆ.8ರಂದು ನಡೆಯುವ ಹಿಂದೂ ಸಮಾಜೋತ್ಸವದಲ್ಲಿ ಪಾಲ್ಗೊಳ್ಳದಂತೆ ವಿಶ್ವ ಹಿಂದೂ ಪರಿಷತ್‌ನ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರಿಗೆ ಬೆಂಗಳೂರು ಪೊಲೀಸರು ನಿಷೇಧ ಹೇರಿದ್ದಾರೆ. ಪ್ರಚೋದನಾಕಾರಿ ಭಾಷಣ ಮಾಡಬಹುದು ಎಂಬ ಮಾಹಿತಿ ಹಿನ್ನಲೆಯಲ್ಲಿ ಪ್ರವೇಶ ನಿಷೇಧಿಸಲಾಗಿದೆ. [ತೊಗಾಡಿಯಾಗೆ ನಿಷೇಧ, ಮಂಗಳೂರಲ್ಲಿ ಪ್ರತಿಭಟನೆ]
ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ಆದೇಶದಂತೆ ಫೆ.5ರಿಂದ 10ರ ವರೆಗೆ ಪ್ರವೀಣ್ ತೊಗಾಡಿಯಾ ಅವರು ಬೆಂಗಳೂರು ನಗರಕ್ಕೆ ಪ್ರವೇಶಿಸುವಂತಿಲ್ಲ. ಇದೇ ವಿಚಾರಕ್ಕೆ ಬುಧವಾರದ ಕಲಾಪ ಬಲಿಯಾಗಿದೆ. ಜೆಡಿಎಸ್ ಶಾಸಕರು ಸಹ ತೊಗಾಡಿಯಾ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ಧ್ವನಿ ಎತ್ತಿದ್ದಾರೆ.
ಪ್ರವೀಣ್ ತೊಗಾಡಿಯಾ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ರಿಟ್ ಅರ್ಜಿಯ ವಿಚಾರಣೆ ನಡೆಯಲಿದೆ. ಪ್ರವೀಣ್ ತೊಗಾಡಿಯಾ ವಿಚಾರದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆದಿದೆ. ಈ ವಿಚಾರದ ಬಗ್ಗೆ ಯಾರು ಏನು ಹೇಳಿದರು? ನೋಡೋಣ ಬನ್ನಿ.

ದ್ವೇಷ ಬಿತ್ತುವ ವ್ಯಕ್ತಿಗೆ ಅವಕಾಶವಿಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ್ದು, 'ಪ್ರಚೋದನಾಕಾರಿ ಭಾಷಣ ಮಾಡುವ ಮೂಲಕ ಸಾಮರಸ್ಯ ಕದಡುವ, ದ್ವೇಷ ಬಿತ್ತುವ ವ್ಯಕ್ತಿಗೆ ಅನುಮತಿ ಕೊಡುವುದಿಲ್ಲ. ಮುಂಜಾಗ್ರತಾ ಕ್ರಮವಾಗಿ ನಿಷೇಧ ಹೇರಲಾಗಿದೆ. ಬಿಜೆಪಿ ಸರ್ಕಾರ ಗೋವಾದಲ್ಲಿ ಮುತಾಲಿಕ್‌ಗೆ ಏಕೆ ನಿಷೇಧ ಹೇರಿದ್ದೀರಿ?' ಎಂದು ಸಿಎಂ ಪ್ರಶ್ನಿಸಿದ್ದಾರೆ.

ಪ್ರತಿಪಕ್ಷ ನಾಯಕ ಶೆಟ್ಟರ್ ಹೇಳುವುದೇನು?
ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ ಹೇಳಿಕೆ ನೀಡಿದ್ದು, 'ಹಿಂದೂ ಸಮಾಜೋತ್ಸವಕ್ಕೆ ವೀಕ್ಷಕರನ್ನಾಗಿ ಸಚಿವ ರೋಷನ್ ಬೇಗ್ ಅವರನ್ನೇ ಕಳಿಸಿ. ಅವರ ಮೇಲೆ ನಮಗೆ ನಂಬಿಕೆ ಇದೆ. ಕಾನೂನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಿ. ಸರ್ವಾಧಿಕಾರಿ ಧೋರಣೆ ಮಾಡಬೇಡಿ' ಎಂದು ತಿಳಿಸಿದ್ದಾರೆ.

ಪ್ರವೇಶ ನೀಡುವುದು ಅಸಾಧ್ಯ ಅಂದ್ರು ಕೆಜೆ ಜಾರ್ಜ್
ಗೃಹ ಸಚಿವ ಕೆಜೆ ಜಾರ್ಜ್ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದು, 'ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿದ್ದು, ಅದನ್ನು ಕೆಡಿಸಲು ತೊಗಾಡಿಯಾ ಅವರನ್ನು ಕರೆಸುತ್ತಿದ್ದೀರಿ ಎಂದು ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ತೊಗಾಡಿಯಾ ಸಭೆ ಮುಗಿದ ಬಳಿಕ ಕೋಮುಗಲಭೆ ಉಂಟಾಗಿದೆ. ತೊಗಾಡಿಯಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿವೆ. ಪ್ರವೇಶ ನೀಡಲು ಸಾಧ್ಯವಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.

ಇದು ಹಿಂದುಸ್ತಾನವೇ? ಅಥವ ಪಾಕಿಸ್ತಾನವೇ?
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು 'ಸೋನಿಯಾ ಗಾಂಧಿ ಪ್ರಭಾವ ಬೀರಿ ಹೀಗೆ ಮಾಡಿಸಿದ್ದಾರೆ. ಇದೇನು ಸರ್ವಾಧಿಕಾರಿ ಸರ್ಕಾರವೇ? ಎಂದು ಪ್ರಶ್ನಿಸಿದ್ದಾರೆ. 'ಇದು ಹಿಂದುಸ್ತಾನವೇ ವಿನಃ ಪಾಕಿಸ್ತಾನವಲ್ಲ. ರಾಷ್ಟ್ರಭಕ್ತರಿಗೆ ಅವಮಾನ ಮಾಡುವುದನ್ನು ಸಹಿಸಲಾಗದು' ಎಂದು ಹೇಳಿದ್ದಾರೆ.

ಪ್ರವೇಶ ನೀಡುವುದು ಬೇಡ : ದತ್ತಾ
ಜೆಡಿಎಸ್ ಶಾಸಕ ವೈ.ಎಸ್.ವಿ.ದತ್ತಾ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ಸದನಕ್ಕಿಂತ ಯಾವುದೇ ವ್ಯಕ್ತಿ ದೊಡ್ಡವನಲ್ಲ. ದ್ವೇಷ ಕದಡುವ ವ್ಯಕ್ತಿಗೆ ಪ್ರವೇಶ ನೀಡುವುದು ಬೇಡ. ಒಬ್ಬ ವ್ಯಕ್ತಿಗಾಗಿ ಕಲಾಪವನ್ನು ಹಾಳುಮಾಡುವುದು ಸರಿಯಲ್ಲ' ಎಂದು ಹೇಳಿದ್ದಾರೆ.

ಈಗ ರಾಜ್ಯಕ್ಕೆ ಪದೇ-ಪದೇ ಬರುತ್ತಿದ್ದಾರೆ
'ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದಾಗ ತೊಗಾಡಿಯಾ ಅವರು ಏಕೆ ಬರಲಿಲ್ಲ? ಈಗ ಪದೇಪದೆ ರಾಜ್ಯಕ್ಕೆ ಏಕೆ ಬರುತ್ತಿದ್ದಾರೆ? ಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧದ ಕ್ರಮ ಅನಿವಾರ್ಯವಾಗಿದೆ ಎಂದು ವಾರ್ತಾ ಸಚಿವ ರೋಷನ್ ಬೇಗ್ ಹೇಳಿದ್ದಾರೆ.

ತೊಗಾಡಿಯಾ ವಿವಾದವೇನು?
ಫೆ.8ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳದಂತೆ ಪ್ರವೀಣ್ ತೊಗಾಡಿಯಾ ಅವರಿಗೆ ಬೆಂಗಳೂರು ಪೊಲೀಸರು ನಿಷೇಧ ಹೇರಿದ್ದಾರೆ. ಪ್ರಚೋದನಾಕಾರಿ ಭಾಷಣ ಮಾಡಬಹುದು ಎಂಬ ಮಾಹಿತಿ ಹಿನ್ನಲೆಯಲ್ಲಿ ಈ ಕ್ರಮ ಕೈಗೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications