ಬೆಂಗಳೂರು–ಪುಣೆ ಹೈ ಸ್ಪೀಡ್ ರೈಲು ಕಾರಿಡಾರ್: ಮಧ್ಯ ಹಾಗೂ ಉತ್ತರ ಕರ್ನಾಟಕಕ್ಕೆ ಭರ್ಜರಿ ಗುಡ್ ನ್ಯೂಸ್
ಬೆಂಗಳೂರು, ಫೆಬ್ರವರಿ 4: ಇತ್ತೀಚೆಗಷ್ಟೇ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ದೇಶಾದ್ಯಂತ 7 ಹೈ ಸ್ಪೀಡ್ ರೈಲು ಕಾರಿಡಾರ್‌ಗಳ ಘೋಷಣೆ ಮಾಡಲಾಯಿತು. ಇನ್ನೂ ಕರ್ನಾಟಕಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಮಾರ್ಗ ದೊರಕುವ ಸೂಚನೆ ಸಿಕ್ಕಿದೆ. ಇದು ಬಂದ್ರೆ, ಯಾವೆಲ್ಲಾ ಜಿಲ್ಲೆಗಳಿಗೆ ಅನುಕೂಲ ಆಗಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಂಗಳೂರು ಮತ್ತು ಪುಣೆ ನಡುವೆ ಹೊಸ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣದ ಬಗ್ಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಈ ಕುರಿತು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರು ಮಾಹಿತಿ ನೀಡಿದ್ದಾರೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಪ್ರಲ್ಹಾದ್ ಜೋಶಿ ಮನವಿ ಏನು?: ಬುಧವಾರ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಪ್ರಲ್ಹಾದ್ ಜೋಶಿ ಅವರು, ಬೆಂಗಳೂರು-ಪುಣೆ ನಡುವೆ ಹೈ ಸ್ಪೀಡ್ ರೈಲು ಕಾರಿಡಾರ್ ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ. ಈ ಮನವಿಗೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಯೋಜನೆ ಕುರಿತು ಪರಿಶೀಲನೆ ನಡೆಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ದಕ್ಷಿಣ ಹಾಗೂ ಮಧ್ಯ ಕರ್ನಾಟಕಕ್ಕೆ ಗುಡ್ ನ್ಯೂಸ್: ಈ ಮಾರ್ಗ ನಿರ್ಮಾಣವಾದಲ್ಲಿ ಕರ್ನಾಟಕದ ಮಧ್ಯ ಹಾಗೂ ಉತ್ತರ ಭಾಗದ ಜಿಲ್ಲೆಗಳಿಗೆ ಹೆಚ್ಚಿನ ಲಾಭ ಆಗಲಿದೆ. ವಿಶೇಷವಾಗಿ ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಸೇರಿದಂತೆ ಹಲವು ಪ್ರದೇಶಗಳಿಗೆ ಉತ್ತಮ ಸಂಪರ್ಕ ಸಿಗಲಿದೆ. ಜೊತೆಗೆ ಪುಣೆ ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳ ನಡುವೆ ತ್ವರಿತ ಪ್ರಯಾಣ ಸಾಧ್ಯವಾಗುವ ನಿರೀಕ್ಷೆಯಿದೆ. ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲು ಕಾರಿಡಾರ್ ಕಾರ್ಯರೂಪಕ್ಕೆ ಬಂದರೆ, ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಸಂಭವಿಸುವುದರ ಜೊತೆಗೆ, ರಾಜ್ಯದ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೂ ಉತ್ತೇಜನ ಸಿಗಲಿದೆ ಎಂದು ಹೇಳಲಾಗುತ್ತಿದೆ.
ಏನೆಲ್ಲಾ ಪ್ರಯೋಜನೆಗಳಿವೆ?: ಬೆಂಗಳೂರು-ಪುಣೆ ನಡುವೆ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣದ ಕುರಿತು ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಇದು ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಮಹತ್ವದ ಸಂಪರ್ಕ ಯೋಜನೆಯಾಗಲಿದೆ ಎಂಬ ನಿರೀಕ್ಷೆ ಮೂಡಿಸಿದೆ. ಇತ್ತೀಚೆಗೆ ದೇಶದಲ್ಲಿ ಹಲವು ಹೈ ಸ್ಪೀಡ್ ರೈಲು ಕಾರಿಡಾರ್‌ಗಳ ಘೋಷಣೆಯಾದ ಬೆನ್ನಲ್ಲೇ, ಬೆಂಗಳೂರು-ಪುಣೆ ಮಾರ್ಗವನ್ನೂ ಪರಿಗಣಿಸುವ ಬಗ್ಗೆ ಸೂಚನೆಗಳು ಲಭಿಸಿವೆ.
ಈ ಕಾರಿಡಾರ್ ನಿರ್ಮಾಣವಾದರೆ ಬೆಂಗಳೂರು ಮತ್ತು ಪುಣೆ ನಡುವಿನ ಪ್ರಯಾಣ ಸಮಯ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದ ಉದ್ಯೋಗ, ಶಿಕ್ಷಣ, ಕೈಗಾರಿಕೆ ಹಾಗೂ ವ್ಯಾಪಾರ ಕ್ಷೇತ್ರಗಳಿಗೆ ಹೆಚ್ಚಿನ ಉತ್ತೇಜನ ಸಿಗಲಿದೆ. ಜೊತೆಗೆ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಗಳ ಮೂಲಕ ಈ ಮಾರ್ಗ ಹಾದು ಹೋಗುವ ಸಾಧ್ಯತೆ ಇದ್ದು, ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಉತ್ತಮ ಸಂಪರ್ಕ ಸಿಗುವ ನಿರೀಕ್ಷೆಯಿದೆ.
ಹೈ ಸ್ಪೀಡ್ ರೈಲು ಕಾರಿಡಾರ್ ಯೋಜನೆಯು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗೆ ಸಹಕಾರಿಯಾಗಲಿದೆ. ರಸ್ತೆ ಹಾಗೂ ವಾಯು ಮಾರ್ಗಗಳ ಮೇಲೆ ಇರುವ ಒತ್ತಡ ಕಡಿಮೆಯಾಗುವುದರ ಜೊತೆಗೆ, ಪ್ರಯಾಣಿಕರಿಗೆ ಸುರಕ್ಷಿತ ಮತ್ತು ವೇಗದ ಪ್ರಯಾಣ ಸೌಲಭ್ಯ ಲಭ್ಯವಾಗಲಿದೆ.
ಈ ಯೋಜನೆ ಕಾರ್ಯರೂಪಕ್ಕೆ ಬಂದರೆ, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಆರ್ಥಿಕ ಸಂಬಂಧಗಳು ಮತ್ತಷ್ಟು ಬಲಗೊಳ್ಳಲಿವೆ. ಕೈಗಾರಿಕಾ ಹೂಡಿಕೆಗಳಿಗೆ ಸಹ ಉತ್ತೇಜನ ಸಿಗಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಈ ಹೈ ಸ್ಪೀಡ್ ರೈಲು ಕಾರಿಡಾರ್ ದಕ್ಷಿಣ ಮತ್ತು ಪಶ್ಚಿಮ ಭಾರತದ ಅಭಿವೃದ್ಧಿಗೆ ಹೊಸ ವೇಗ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications