Bengaluru Rain: ಮಳೆ ತಂದ ಅವಾಂತರ; ಬೆಂಗಳೂರಿನಲ್ಲಿ ಭಾರೀ ಮಳೆಯಿಂದ 5 ಮನೆಗಳು ಕುಸಿತ, ಕಾರುಗಳು ಜಖಂ

ಬೆಂಗಳೂರಯ, ಮೇ 09: ಮೇ ಆರಂಭದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಸೋಮವಾರ ಸುರಿ ಭಾರೀ ಮಳೆಯಿಂದಾಗಿ 5 ಮನೆಗಳು ಕುಸಿದು, ಅಪಾರ್ಟ್ಮೆಂಟ್‌ನಲ್ಲಿ ನಿಲ್ಲಿಸಿದ್ದ ಕಾರುಗಳು ಸಂಪೂರ್ಣ ಜಖಂಗೊಂಡಿದೆ.

ಹೌದು, ಸಿನಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸುರಿದ ಭಾರೀ ಮನೆಯ ಪರಿಣಾಯವಾಗಿ ಪಿಎಸ್ ಕಾಲೇಜ್ ಬಳಿಯ ವೀರಭದ್ರನಗರದ ಸ್ಲಮ್‌ನಲ್ಲಿ 5 ಮನೆಗಳು ಮತ್ತು ಕಾಂಪೌಂಡ್ ಗೋಡೆ ಕುಸಿದು ಪಕ್ಕದ ಅಪಾರ್ಟ್ಮೆಂಟ್‌ನಲ್ಲಿ ನಿಲ್ಲಿಸಿದ್ದ ಕೆಲ ಕಾರುಗಳು ಜಖಂಗೊಂಡಿದ್ದು, ಅದೃಷ್ಟವಶಾತ್ ಸಾವು-ನೋವು ಉಂಟಾಗಿಲ್ಲ.

bengaluru rain

ಇನ್ನೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಇತ್ತ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಈ ಬಾರಿ ಚುನಾವಣೆಗೆ ಮಳೆರಾಯನ ಅಡ್ಡಿಯಾಗುವ ಸಾಧ್ಯತೆ ಹೆಚ್ಚಾಗಿದೆ.

ಮೇ ಆರಂಭದಿಂದಲೇ ಹೆಚ್ಚಿನ ಮಳೆಯಾಗುತ್ತಿದ್ದು, ಬಂಗಾಳ ಕೊಲ್ಲಿಯಲ್ಲಿ ಮೇಲ್ಮಟ್ಟದಲ್ಲಿ ಸುಳಿಗಾಳಿ ಉಂಟಾಗಿದೆ, ಇದರ ಪ್ರಭಾವದಿಂದಾಗಿ ಸಮುದ್ರ ಮಟ್ಟದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ವಾಯುಭಾರ ಕುಸಿತ ಆಗ್ನೇಯದಿಂದ ಉತ್ತರ ದಿಕ್ಕಿನಲ್ಲಿ ತಲುಪಿ, ಮಧ್ಯಬಂಗಾಳ ಕೊಲ್ಲಿಯಲ್ಲಿ ಮೇ 10 ರಂದು ಚಂಡಮಾರುತವಾಗುವ ಸಾಧ್ಯತೆಗಳಿವೆ. ಇದರ ಪ್ರಭಾವದಿಂದಾಗಿ ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ.

bengaluru rain

ಇನ್ನೂ ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದ್ದು, ಮೇ 11ರಂದು ಕೆಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಈ ಮಳೆ ಚುನಾವಣೆಗೆ ಅಡ್ಡಿಯಾಗೋ ನಿರೀಕ್ಷೆಯಿದ್ದು, ಮತದಾನದ ಪ್ರಮಾಣ ಕಡಿಮೆಯಾಗೋ ಸಾಧ್ಯತೆಯಿದೆ.

ಇನ್ನೂ ವರ್ಷದ ಮೊದಲ ಮಳೆ ಆರಂಭದಲ್ಲೇ ಸಿಲಿಕಾನ್‌ ಸಿಟಿ ಜನರನ್ನ ನಿದ್ದೆಗೆಡಿಸಿದ್ದು, ಈ ಬಾರಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಬೆಂಗಳೂರಿನ ಜನಕ್ಕೆ ಮಳೆರಾಯನ ಕಾಟ ತಪ್ಪಿದಲ್ಲ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+