Bengaluru Rain: ಬೆಂಗಳೂರಿನಲ್ಲಿ ಜೂನ್‌ 19 ರಿಂದ 21 ವರೆಗೂ ವ್ಯಾಪಕ ಮಳೆ: ಹವಾಮಾನ ಇಲಾಖೆ ಹೇಳಿದ್ದೇನು?

ಬೆಂಗಳೂರು, ಜೂನ್‌ 17: ಕರ್ನಾಟಕದಲ್ಲಿ ಮುಂಗಾರನ ಮಹಾ ಸ್ಟೋಟದ ಮುನ್ನೂಚನೆಯನ್ನ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ಕೊಟ್ಟಿದ್ದು, ಈ ಬೆಂಗಳೂರಿನಲ್ಲಿ ಜೂನ್‌ 17 ಮತ್ತು 18 ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿದಿದೆ.

ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿರಲಿದೆ. ಕರ್ನಾಟಕ ಸೇರಿ ದೇಶದ ಬಹುತೇಕ ಭಾಗಗಳಲ್ಲಿ ಭಾನುವಾರದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Bengaluru Rain: Heavy Rain Forecast In Bengaluru On June 19 To 21 th

ಬೆಂಗಳೂರಿನಲ್ಲಿ ಜೂ.17 ಮತ್ತು 18ರಂದು ಸಾಧಾರಣ ಮಳೆಯಾಗಲಿದ್ದು, ಜೂ.19 ರಿಂದ 21ರವರೆಗೆ ವ್ಯಾಪಕ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಜೂನ್ 18 ರಂದು ಮತ್ತು 19ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ಜೂನ್ 19ರಂದು ಕೋಲಾರ, ಚಿಕ್ಕಬಳ್ಳಾಪುರದಲ್ಲೂ ವ್ಯಾಪಕ ಮಳೆಯಾಗಲಿದ್ದು, ಅಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇತ್ತ ಗದಗ, ವಿಜಯನಗರ, ಬೆಳಗಾವಿ ಭಾಗಕ್ಕೆ ಮುಂಗಾರು ಮಾರುತಗಳು ವ್ಯಾಪಿಸಿದ್ದು, ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಜುಲೈ 2ನೇ ವಾರದವರೆಗೂ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ನಗರದಲ್ಲಿಇಲ್ಲಿಯವರೆಗೆ 183.7 ಮಿ.ಮೀ ಮಳೆಯಾಗಿದೆ. ವಾಡಿಕೆಗಿಂತ 2 ಮಿ.ಮೀ ಮಳೆ ಕಡಿಮೆ ಬಿದ್ದಿದ್ದು, ಜೂನ್‌ ತಿಂಗಳಲ್ಲಿ44 ಮಿ.ಮೀ ಮಳೆಯಾಗಬೇಕಿತ್ತು. ಆದರೆ, ಕೇವಲ 20 ಮಿ.ಮೀ ಮಳೆ ಸುರಿದಿದೆ.

ಕೆಲ ದಿನಗಳ ಹಿಂದೆ ಬೆಂಗಲೂರಿನ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿತ್ತು, ನಂತರ ಬೀಸಿಲಿನ ತಾಪಮಾನದಿಂದಾಗಿ ಒಣ ಹವೆ ಮುಂದುವರಿದಿದೆ. ಕೆಲವೆಡೆ ಮಳೆ ಇಲ್ಲದೇ ಹಾಹಾಕಾರ ಉಂಟಾಗಿದ್ದು, ಜನರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ಭಾರಿ ಮಳೆಯಿಂದಾಗುವ ಅನಾಹುತಗಳ ತಡೆಗೆ ಬಿಬಿಎಂಪಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+