Bengaluru Rains: ಇನ್ನೂ 3 ದಿನ ಬೆಂಗಳೂರಿನಲ್ಲಿ ಮಳೆಯೋ ಮಳೆ: ಹವಾಮಾನ ಇಲಾಖೆ ಹೇಳಿದ್ದೇನು?
ಬೆಂಗಳೂರು, ಮೇ 07: ಬಿಸಿಲಿನ ಹೊಡೆತಕ್ಕೆ ಬೆಂಗಳೂರು ಮಂದಿ ರೋಸಿ ಹೋಗಿದ್ರು. ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಸೋಮವಾರ ಬೆಂಗಳೂರಿನ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಇತ್ತ ಬೆಂಗಳೂರು ನಗರವಾಸಿಗಳಿಗೆ ಹವಾಮಾನ ಇಲಾಖೆ ಮಳೆ ಕುರಿತು ಶುಭಸುದ್ದಿ ನೀಡಿದೆ.
ಹೌದು, ಸೋಮವಾರ ಬೆಂಗಳೂರು ಭಾಗದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಇನ್ನೂ ನಗರದಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಳೆದ ಗುರುವಾರ, ಶುಕ್ರವಾರ ಹಾಗೂ ಸೋಮವಾರ ನಗರದಲ್ಲಿ ಮಳೆಯಾಗಿದ್ದು, ವಾತಾವರಣ ತುಸು ತಣ್ಣಗಾಗಿದೆ. ಈ ಮಧ್ಯೆ, ಮೇ 10ರ ವರೆಗೂ ಬೆಂಗಳೂರಿನಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ ಸೋಮವಾರ ನಗರದ ಹಲವೆಡೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಿದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಸೋಮವಾರ ಸುರಿದ ಮಳೆಯ ಅಬ್ಬರದಿಂದಾಗಿ ವಾಹನ ಸವಾರರು ಹೈರಾಣಾಗಿ ಹೋಗಿದ್ದಾರೆ. ನಿನ್ನೆ ಸಂಜೆ ಸಹಿತ ಸುರಿದ ಮಳೆಗೆ ನಗರದ ಹಲವು ಕಡೆ ಅವಾಂತರಗಳು ಸೃಷ್ಟಿಯಾಗಿದೆ. 25ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, ಬಿಟಿಎಂ ಲೇಔಟ್, ಯಶವಂತಪುರ, ಜಯನಗರ, ಕೋರಮಂಗಲ, ಬಸವನಗುಡಿ, ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಸುರಿದ ಮಳೆಯಾಗಿದೆ.
ನಗರದಲ್ಲಿ ಮೇ 10 ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಡಿಗ್ರಿ ಸೆಲ್ಸಿಯಸ್ ಮತ್ತು 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಲಹಂಕದಲ್ಲಿ ಅತಿ ಕಡಿಮೆ ಮಳೆಯಾಗಿದೆ. ಮಧ್ಯಾಹ್ನದ ವೇಳೆಗೆ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು,ರಾಜಾಜಿನಗರ, ಮೆಜೆಸ್ಟಿಕ್ ಸೇರಿದಂತೆ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ಅಂಕಿಅಂಶಗಳ ಪ್ರಕಾರ, ಸೋಮವಾರ ಸಂಜೆಯಿಂದ ಸುರಿದ ಮಳೆಗೆ ರಾತ್ರಿ 9 ಗಂಟೆಯ ಹೊತ್ತಿಗೆ ರಾಜಮಹಲ್ ಗುಟ್ಟಹಳ್ಳಿಯಲ್ಲಿ ಗರಿಷ್ಠ 39.5 ಮಿಮೀ ಮಳೆಯಾಗಿದ್ದು, ನಂತರದ ದಯಾನಂದ ನಗರದಲ್ಲಿ (32.5 ಮಿಮೀ) ಮಳೆಯಾಗಿದೆ. ನಗರದ 18 ವಾರ್ಡ್‌ಗಳಲ್ಲಿ 10 ಮಿಮೀಗೂ ಹೆಚ್ಚು ಮಳೆಯಾಗಿದೆ.












Click it and Unblock the Notifications