Bengaluru Rains: ರಾಜಧಾನಿ ಬೆಂಗಳೂರಿನಲ್ಲಿ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ
ಬೆಂಗಳೂರು, ಮೇ 10: ಬಿರುಬಿಸಿಲಿಗೆ ಹೈರಾಣಾಗಿದ್ದ ಬೆಂಗಳೂರಿಗರಿಗೆ ಕಳೆದ ನಾಲ್ಕೈದು ದಿನಗಳಿಂದ ಆಗುತ್ತಿರುವ ಮಳೆ ಸಂತಸ ತಂದಿದೆ. ಹಲವು ತಿಂಗಳಿನಿಂದ ಬಿಸಿಲಿನಿಂದ ಬೆಂದಿದ್ದ ಸಿಲಿಕಾನ್ ಸಿಟಿ ಬೆಂಗಳೂರು ಇದೀಗ ಸಂಜೆಯಾಗುತ್ತಿದ್ದಂತೆಯೇ ವರುಣ ತಂಪೆರೆಯುತ್ತಿದ್ದಾನೆ. ಕಳೆದ ವಾರದಿಂದ ಬೆಂಗಳೂರು ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇಂದು ಸಹ ನಗರದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ.
ಹೌದು, ಕಳೆದ ಐದಾರು ದಿನಗಳಿಂದ ಸೂರ್ಯ ಮುಳುಗುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಇನ್ನು ಮಳೆಯಿಂದ ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಸಂಚಾರ ವ್ಯತ್ಯಯವಾಗಿದೆ. ಬೆಂಗಳೂರು ನಗರದ ಪೀಣ್ಯ, ದಾಸರಹಳ್ಳಿ, ಮಲ್ಲಸಂದ್ರ, ಮಾಕಳಿ, ಚಿಕ್ಕಬಿದರಕಲ್ಲು ಸೇರಿದಂತೆ ಹಲವೆಡೆ ಮಳೆ ಆರಂಭವಾಗಿದೆ. ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಳೆಯಾಗುವ ಸಾಧ್ಯತೆಗಳಿವೆ.

ಕಳೆದ ನಾಲ್ಕೈದು ದಿನಗಳಿಂದ ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇಂದು(ಶುಕ್ರವಾರ) ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದ ವಾಹನ ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಸಂಚಾರ ವ್ಯತ್ಯಯವಾಗಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮಂದಗತಿಯಲ್ಲಿ ವಾಹನಗಳು ಸಂಚಾರ ನಡೆಸುತ್ತಿವೆ. ಈ ಹಿನ್ನಲೆಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.
ಇನ್ನೂ ಕರ್ನಾಟಕದಲ್ಲಿ ವಿವಿಧ ಭಾಗಗಳಲ್ಲಿ ಮಳೆ ಮುಂದುವರೆದಿದ್ದು, ಬೆಂಗಳೂರು, ಮೈಸೂರು, ಕೊಡಗು, ಕೋಲಾರ, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ರಾಜ್ಯದಲ್ಲಿ ಮೇ 16ರವರೆಗೂ ಮಳೆ ಮುಂದುವರೆಯಲಿದೆ. ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ: ಹವಾಮಾನ ಇಲಾಖೆ ಕೊಟ್ಟ ಸಲಹೆ ಏನು?
* ಮನೆಯೊಳಗೆ ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ ಇರಬೇಕು.
* ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ ಸುರಕ್ಷಿತ ಆಶ್ರಯವನ್ನು ತೆಗೆದುಕೊಳ್ಳಿ.
* ಮರಗಳ ಕೆಳಗೆ ಆಶ್ರಯ ಪಡೆಯಬೇಡಿ.
* ಕಾಂಕ್ರೀಟ್ ಗೋಡೆಗಳಿಗೆ ಒರಗಬೇಡಿ.
* ಎಲೆಕ್ನಿಕಲ್/ಎಲೆಕ್ಟ್ರಾನಿಕ್ ಉಪಕರಣಗಳನ್ನು ತಕ್ಷಣವೇ ಅನ್‌ಪ್ಲಗ್ ಮಾಡಿ.
* ಮಳೆ ವೇಳೆ ತಕ್ಷಣ ಜಲಮೂಲಗಳಿಂದ ಹೊರ ಬರುವಂತೆ ಸೂಚನೆ.
* ವಿದ್ಯುಚ್ಛಕ್ತಿಯನ್ನು ನಡೆಸುವ ಎಲ್ಲಾ ವಸ್ತುಗಳಿಂದ ದೂರವಿರಿ.
* ಪ್ರಯಾಣಿಸುತ್ತಿದ್ದರೆ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.












Click it and Unblock the Notifications