5 ವರ್ಷದಲ್ಲಿ ಸಿದ್ದು ಮಾಡಿದ್ದು ಸಾಲವನ್ನಷ್ಟೇ! ಜೋಶಿ ವಾಗ್ದಾಳಿ

ಬೆಂಗಳೂರು, ಮಾರ್ಚ್ 12: "ಕಳೆದ ಐದು ವರ್ಷಗಳಿಂದ ಕರ್ನಾಟಕದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ, ರಾಜ್ಯವನ್ನು 1.25 ಲಕ್ಷ ಕೋಟಿ ರೂ. ಸಾಲದ ಹೊರೆಯಲ್ಲಿ ಮುಳುಗಿಸಿದ್ದಾರೆ" ಎಂದು ಸಂಸದ ಪ್ರಹ್ಲಾದ್ ಜೋಶಿ ಹೇಳಿದರು.

ಕರ್ನಾಟಕ ಬಿಜೆಪಿ ಮಾ.2 ರಿಂದ 15 ರವರೆಗೆ ಆಯೋಜಿಸಿರುವ 'ಬೆಂಗಳೂರು ರಕ್ಷಿಸಿ' ಪಾದಯಾತ್ರೆಯಲ್ಲಿ ಅವರು ಮಾತನಾಡುತ್ತಿದ್ದರು. ಪಾದಯಾತ್ರೆ ಇಂದು 10 ನೇ ದಿನಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ ನಡೆಯುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ರಾಜ್ಯದಲ್ಲಿ ಸಾಕಷ್ಟು ಅಪರಾಧ ಪ್ರಕರಣಗಳು ನಡೆಯುತ್ತಿವೆ. ಐಪಿಎಸ್ ಅಧಿಕಾರಿಗಳು ಈಗ ಗೂಂಡಾಗಳು ಮತ್ತು ಭ್ರಷ್ಟ ಕಾಂಗ್ರೆಸ್ಸಿಗರ ಭಯದಲ್ಲೇ ಬದುಕುವಂತಾಗಿದೆ ಎಂದರು. ಗೋಮಾಂಸದ ಕುರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಈ ಸಂದರ್ಭದಲ್ಲಿ ಅವರು ಖಂಡಿಸಿದರು.

Bengaluru Rakshisi: 10th day of BJP's Padayatre at Dasarahalli

ಪಾದಯಾತ್ರೆಯಲ್ಲಿ ದಾಸರಹಳ್ಳಿ ಶಾಸಕ ಮುನಿರಾಜು ಸೇರಿದಮತೆ ಬಿಜೆಪಿಯ ಹಲವು ಮುಖಂಡರು ಭಾಗವಹಿಸಿಸದ್ದರು.

Bengaluru Rakshisi: 10th day of BJP's Padayatre at Dasarahalli
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+