ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯ 'ಬೆಂಗಳೂರು ರಕ್ಷಿಸಿ' ಪಾದಯಾತ್ರೆಗೆ ಚಾಲನೆ

|
Google Oneindia Kannada News

ಬೆಂಗಳೂರು, ಮಾರ್ಚ್ 02: ಕರ್ನಾಟಕ ಬಿಜೆಪಿ ಆಯೋಜಿಸಿರುವ ಮೂರು ದಿನಗಳ ಬೆಂಗಳೂರು ರಕ್ಷಿಸಿ ಯಾತ್ರೆ ಇಂದಿನಿಂದ ಆರಂಭವಾಗಿದ್ದು, ರಾಜ್ಯದ ಘಟಾನುಘಟಿ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಗವಿಪುರಂನ ಗವಿ ಗಂಗಾಧರೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ, ನಂತರ ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ಪೂಜೆ ಸಲ್ಲಿಸಿದ ಬಿಜೆಪಿ ನಾಯಕರು ಯಾತ್ರೆ ಆರಂಭಿಸಿದ್ದಾರೆ. ಕರ್ನಾಟಕದಲ್ಲಿ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಯಾತ್ರೆ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.

ಬಿಜೆಪಿಯಿಂದ 'ಬೆಂಗಳೂರು ರಕ್ಷಿಸಿ' ಪಾದಯಾತ್ರೆಬಿಜೆಪಿಯಿಂದ 'ಬೆಂಗಳೂರು ರಕ್ಷಿಸಿ' ಪಾದಯಾತ್ರೆ

ಬೆಂಗಳೂರಿನ 10 ಪ್ರಮುಖ ಸಮಸ್ಯೆಗಳನ್ನು ಮುಂದಿಟ್ಟುಕೊಂಡು, ಕಾಂಗ್ರೆಸ್ ಸರ್ಕಾರ ಅವುಗಳ ಪರಿಹಾರದಲ್ಲಿ ಹೇಗೆ ವಿಫಲವಾಗಿದೆ ಎಂಬುದನ್ನು ಜನರಿಗೆ ತಿಳಿಸುವ ಯತ್ನ ಈ ಯಾತ್ರೆಯದು. ಬೆಂಗಳೂರಿನ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಯಲಿದೆ. ಮೂಲಭೂತ ಸೌಕರ್ಯ, ನಲಪಾಡ್ ಪ್ರಕರಣ ಸೇರಿದಂತೆ ಮತ್ತಿತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಈ ಯಾತ್ರೆ ನಡೆಯುತ್ತಿದೆ.

Bengaluru Rakshisi padayatra by BJP starts from today

ಈಗಾಗಲೇ ಯಾತ್ರೆ ಆರಂಭವಾಗಿದ್ದು, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್, ಕೇಂದ್ರ ಸಚಿವ ಅನಂತ್ ಕುಮಾರ್, ಮಾಜಿ ಉಪಮುಖ್ಯಮಂತ್ರಿ ಆರ್ .ಅಶೋಕ್ ಸೇರಿದಂತೆ ಹಲವು ಗಣ್ಯರು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿದ ಬಿಜೆಪಿಕಾಂಗ್ರೆಸ್ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡಿದ ಬಿಜೆಪಿ

ರಾಜ್ಯಸಭೆ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಲು ಪೈಪೋಟಿ!ರಾಜ್ಯಸಭೆ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಲು ಪೈಪೋಟಿ!

English summary
Karnataka BJP has started Bengaluru Rakshisi(save Bengaluru) padayatra from March 2nd. The jatha is organised by BJP's state unit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X