ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು: ವೈಟ್ ಫೀಲ್ಡ್ ನಲ್ಲಿ ಹಂದಿಜ್ವರಕ್ಕೆ ಮೊದಲ ಬಲಿ

|
Google Oneindia Kannada News

ಬೆಂಗಳೂರು, ಫೆ. 6: ಮಹಾನಗರದಲ್ಲಿ ಎಚ್ 1 ಎನ್ 1 ಮೊದಲ ಬಲಿ ಪಡೆದುಕೊಂಡಿದೆ. ಹಂದಿಜ್ವರ ಸೋಂಕಿನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಡಿ ಎಚ್‌ಒ ಎಂ.ರಂಜಿನಿ ತಿಳಿಸಿದ್ದಾರೆ.

ವೈಡ್ ಫೀಲ್ಡ್ ನ ವೈದೇಹಿ ಆಸ್ಪತ್ರೆಯಲ್ಲಿ 35 ವರ್ಷದ ರತ್ನಮ್ಮ ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಕಿರು ಮೇನಹಳ್ಳಿಯ ನಿವಾಸಿ ರತ್ಮಮ್ಮ ಕಳೆದ ಕೆಲ ದಿನಗಳಿಂದ ತೀವ್ರ ಕೆಮ್ಮು ಮತ್ತು ನೆಗಡಿಯಿಂದ ಬಳಲುತ್ತಿದ್ದರು.[ಕರ್ನಾಟಕಕ್ಕೂ ಕಾಲಿಟ್ಟ ಮಹಾಮಾರಿ ಎಚ್ 1 ಎನ್ ]

h1n1

ಉಡುಪಿಯಲ್ಲೂ ಎಚ್ 1 ಎನ್ 1 ಸೋಂಕು ತಗುಲಿರುವ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾದ ಬಗ್ಗೆ ವರದಿಯಾಗಿದೆ. ಇತ್ತ ತುಮಕೂರಿನಲ್ಲೂ ಹಂದಿ ಜ್ವರದ ಸೋಂಕು ತಗುಲಿರುವ ಪ್ರಕರಣಗಳು ದಾಖಲಾಗಿವೆ.

ಹಂದಿಜ್ವರದ ಲಕ್ಷಣಗಳೇನು?
* ಸತತ ಕೆಮ್ಮು, ಅತೀವ ಜ್ವರ, ಕಫಗಟ್ಟಿರುವ ಗಂಟಲು, ಇಡಿಯ ದೇಹದ ಒಂದೊಂದು ಅಂಗವೂ ನೋವಿನಿಂದ ಕಿರುಗುಟ್ಟುವುದು, ಸುಸ್ತು, ತಲೆ ಎತ್ತಲಾರದಷ್ಟು ತಲೆನೋವು ಮತ್ತು ವಾಂತಿ ಮತ್ತು ಬೇಧಿ [191 ಜನರನ್ನು ಬಲಿ ತೆಗೆದುಕೊಂಡ ಎಚ್ 1 ಎನ್ 1]
* ಈ ವೈರಸ್ ಪೀಡಿತ ಹಂದಿಯ ಮಾಂಸವನ್ನು ಸರಿಯಾಗಿ ಸ್ವಚ್ಛಗೊಳಿಸದೇ ಅಥವಾ ಬೇಯಿಸದೇ ತಿಂದರೆ ರೋಗ ಸಂಭವವಿರುತ್ತದೆ.
* ರೋಗಾಣು ಬೆರೆತ ನೀರು, ಮಾಂಸ, ಸೇವಿಸುವುದರಿಂದ ರೋಗ ಹರಡಬಹುದು.
* ಇದೊಂದು ಸಾಂಕ್ರಾಮಿಕ ಕಾಯಿಲೆ
* ಹಂದಿಜ್ವರ ಪೀಡಿತ ವ್ಯಕ್ತಿಯ ಜೊಲ್ಲು, ಸೀನಿನ ಮೂಲಕ ಸಿಡಿದ ದ್ರವ ಆಹಾರ ವಸ್ತುಗಳಿಗೆ ಸೇರಿದರೆ ಸೊಂಕು ತಗಲುವ ಸಾಧ್ಯತೆಯಿದೆ.
* ಮೂಗಿಗೆ ಸದಾ ಬಟ್ಟೆ ಕಟ್ಟಿಕೊಳ್ಳುವುದರಿಂದ ಕೆಲ ಪ್ರಮಾಣದಲ್ಲಿ ರೋಗ ಹರಡುವುದನ್ನು ತಡೆಯಬಹುದು.

English summary
The IT capital on Friday reported the First death due to swine flu. A 35-year-old man from Kirumarenahalli near Whitefield succumbing to the H1N1 virus at a private hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X