ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಯೋಜನೆಗೆ ಸಮಿತಿ ಒಪ್ಪಿಗೆ: ಎಲ್ಲೆಲ್ಲಿ ಹಾದು ಹೋಗುತ್ತೆ?
ನವದೆಹಲಿ, ಮಾರ್ಚ್ 21ಬೆಂಗಳೂರು ನಗರದ ವಾಹನ ದಟ್ಟಣೆಯನ್ನು ಗಣನೀಯ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಕೇಂದ್ರ ಸಂಪುಟ ಸಭೆಯ ಮುಂದೆ ಬರಲಿದೆ. ಯೋಜನೆಗೆ 'ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ' ಒಪ್ಪಿಗೆ ನೀಡಿದೆ. ಈ ಬಗ್ಗೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದು, ಶೀಘ್ರವೇ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಯೋಜನೆಗೆ ಮಂಜೂರಾತಿ ನೀಡಲಾಗುವುದು ಎಂದರು.
ನವದೆಹಲಿಯಲ್ಲಿ ಗುರುವಾರ ನಿತಿನ್ ಗಡ್ಕರಿ ಅವರನ್ನು ಅವರ ಸಂಸತ್ ಭವನದ ಕಚೇರಿಯಲ್ಲಿ ಭೇಟಿಯಾದ ಸಚಿವ ಕುಮಾರಸ್ವಾಮಿ ಅವರು, ಈ ಯೋಜನೆಯ ಬಗ್ಗೆ ಮಹತ್ವದ ಚರ್ಚೆ ನಡೆಸಿದರು. ಈ ಹಿಂದೆ ಗಡ್ಕರಿಯವರನ್ನು ಸಚಿವರು ಭೇಟಿಯಾಗಿದ್ದರು. ಕುಮಾರಸ್ವಾಮಿ ಅವರ ಮನವಿಯ ಮೇರೆಗೆ ಯೋಜನೆಗೆ 'ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ' (Public Private Partnership Appraisal Committee - PPPAC) ಒಪ್ಪಿಗೆ ನೀಡಿದ್ದು, ಈಗ ಸಂಪುಟದ ಮುಂದೆ ಬರಲಿದೆ. ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ಕೊಡಿಸಲಾಗುವುದು ಎಂದು ಅವರು ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದರು.

ಗಡ್ಕರಿ ಅವರ ಸಕರಾತ್ಮಕ ಸ್ಪಂದನೆ ಬಗ್ಗೆ ಸಂತಸ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು;ಉಪನಗರ ವರ್ತುಲ ರಸ್ತೆ ಯೋಜನೆ (Satellite Town Ring Road-STRR) 2013ರಲ್ಲಿಯೇ ಚಾಲನೆ ಪಡೆದಿತ್ತು. ಆದರೆ, ಹಲವಾರು ಕಾರಣಗಳಿಂದ ಅದು ನೆನೆಗುದಿಗೆ ಬಿದ್ದಿತ್ತು. ಬೆಂಗಳೂರು ಸುತ್ತಮುತ್ತ ಇರುವ ಎಂಟು ಕೈಗಾರಿಕಾ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ. ಈ ಯೋಜನೆಯ ಕಾರ್ಯಗತಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಅವರು ಬರೆದಿದ್ದ ಪತ್ರವನ್ನು ಗಡ್ಕರಿ ಅವರಿಗೆ ನೀಡಲಾಯಿತು ಎಂದು ಹೇಳಿದರು.
4- 6 ಪಥಗಳ ಈ ಯೋಜನೆಯು ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಉಪನಗರ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಹಾಗೂ ಬೆಂಗಳೂರು - ಚೆನ್ನೈ ಎಕ್ಸ್ ಪ್ರೆಸ್ ಹೈವೇಯನ್ನು ಕೂಡುತ್ತದೆ. ಜತೆಗೆ ತಮಿಳುನಾಡಿನ ಹೊಸೂರನ್ನೂ ಸಂಪರ್ಕಿಸುತ್ತದೆ. ಈ ಉಪನಗರ ವರ್ತುಲ ರಸ್ತೆಯನ್ನು ಬೆಂಗಳೂರು - ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಯ ಸಂಪರ್ಕಗೊಳಿಸಲಾಗುವುದು. ಕೈಗಾರಿಕೆಗಳಿಗೆ ಸರಕು ಸರಂಜಾಮು ಸಾಗಿಸುವ ಯಾವುದೇ ಬೃಹತ್ ವಾಹನ ಬೆಂಗಳೂರು ನಗರದೊಳಕ್ಕೆ ಪ್ರವೇಶ ಮಾಡದಂತೆ ತಡೆಯುವುದೇ ಈ ಯೋಜನೆಯ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.
2018ರಿಂದ ನೆನೆಗುದಿಗೆ ಬಿದ್ದಿದ್ದ ಉಪನಗರ ಹೊರ ವರ್ತುಲ ರಸ್ತೆ ಯೋಜನೆಗೆ ಗಡ್ಕರಿ ಅವರ ಒಪ್ಪಿಗೆ ಹಾಗೂ ಕುಮಾರಸ್ವಾಮಿ ಅವರ ಒಪ್ಪಿಗೆಯೊಂದಿಗೆ ಮೋಕ್ಷ ಸಿಕ್ಕಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಿಗೆ ಈ ಯೋಜನೆಯಿಂದ ಹೆಚ್ಚು ಲಾಭವಾಗಲಿದೆ. ಮುಖ್ಯವಾಗಿ ಬೆಂಗಳೂರು ನಗರದ ಮೇಲೆ ಸಂಚಾರದ ಒತ್ತಡ ಕಡಿಮೆ ಆಗಲಿದೆ ಎಂದು ಕುಮಾರಸ್ವಾಮಿ ಹೇಳಿದರು.
ಈ ಯೋಜನೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು 135 ಕಿ.ಮೀ. ದೂರ ಹಾದು ಹೋಗಲಿದ್ದು, ಯೋಜನೆಯ ಸುಮಾರು ₹4,750 ಕೋಟಿ ವೆಚ್ಚದಲ್ಲಿ ಕಾರ್ಯಗತ ಆಗುತ್ತಿದೆ. 4 ರಿಂದ 6 ಪಥ ಹೊಂದಿರುವ ಸಂಪೂರ್ಣ ನಿಯಂತ್ರಿತ ಪ್ರವೇಶ ವ್ಯವಸ್ಥೆಯನ್ನು ಹೊಂದಿರುವ ಈ ಹೆದ್ದಾರಿಯು ಯಾವುದೇ ಅಡೆತಡೆಗಳಿಲ್ಲದೆ ಸಂಚಾರ ಸೌಲಭ್ಯ ಕಲ್ಪಿಸಲಿದೆ. ಬೆಂಗಳೂರು ಸುತ್ತಲಿನ ಉಪ ನಗರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಇದು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿದೆ ಎಂದು ಅಂದಾಜಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೈಗೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಕೈಗಾರಿಕಾಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಇದೆಲ್ಲಾ ಸಾಧ್ಯವಾಗುತ್ತಿದೆ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ನಿತಿನ್ ಗಡ್ಕರಿ ಅವರು ತೋರಿದ ಬದ್ಧತೆ ಅಭಿನಂದನಾರ್ಹ ಎಂದು ಹೆಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದರು.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Highways: ದೇಶದ 40,000 ಕಿಮೀ ಹೆದ್ದಾರಿಗೆ AI ಟಚ್, ನಿರ್ವಹಣೆ ಮತ್ತಷ್ಟು ಸುಲಭ, ಇಲ್ಲಿದೆ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ












Click it and Unblock the Notifications