ಬೆಳಗಾವಿ - ಹುಬ್ಬಳ್ಳಿಯಲ್ಲೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎಂ.ಬಿ ಪಾಟೀಲ್!
Bengaluru Second Airport: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಭಾರೀ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿರುವಾಗಲೇ ಉತ್ತರ ಕರ್ನಾಟಕಕ್ಕೂ ಕರ್ನಾಟಕ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಚರ್ಚೆಯಾದಾಗಿನಿಂದಲೂ ಉತ್ತರ ಕರ್ನಾಟಕದ ಭಾಗಕ್ಕೆ ಅನ್ಯಾಯವಾಗುತ್ತಿದೆ ಎನ್ನುವ ಮಾತು ಕೇಳಿ ಬಂದಿತ್ತು. ಅಲ್ಲದೇ ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕ vs ದಕ್ಷಿಣ ಕರ್ನಾಟಕ ಎನ್ನುವ ಚರ್ಚೆಗಳು ಜೋರಾಗಿತ್ತು. ಇದೀಗ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಜೊತೆ ಜೊತೆಗೆ ಉತ್ತರ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗುಡ್‌ನ್ಯೂಸ್ ಸಿಕ್ಕಿದೆ. ಅದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ಸ್ ಬಂದಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಅಧಿಕಾರಿಗಳು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಈ ತಂಡವು ಏಪ್ರಿಲ್ 9ರ ವರೆಗೆ ಪರಿಶೀಲನೆ ನಡೆಸಲಿದೆ. ತಾಂತ್ರಿಕ ವರದಿಗಳನ್ನು ಸಲ್ಲಿಕೆ ಮಾಡಲಿದೆ. ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಪ್ರಕ್ರಿಯೆ ಚುರುಕು ಪಡೆದುಕೊಂಡಿರುವಾಗಲೇ ಉತ್ತರ ಕರ್ನಾಟಕದಲ್ಲೂ ಒಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಿದ್ಧತೆ ಪ್ರಾರಂಭವಾಗಿದೆ. ಈ ನಿಟ್ಟಿನಲ್ಲಿ ಎರಡು ಜಿಲ್ಲೆಗಳನ್ನು ಲಿಸ್ಟ್‌ನಲ್ಲಿ ಇರಿಸಿಕೊಳ್ಳಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.

ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗುತ್ತಿದೆ. ಉತ್ತರ ಕರ್ನಾಟಕವು ಕರ್ನಾಟಕದ ಪ್ರಮುಖ ಯೋಜನೆಗಳಿಂದ ವಂಚಿತವಾಗುತ್ತಿದೆ ಎನ್ನುವ ಆರೋಪ ಹಾಗೂ ಅಸಮಾಧಾನಗಳ ನಡುವೆ ಕೊನೆಗೂ ಕರ್ನಾಟಕ ಸರ್ಕಾರವು ಉತ್ತರ ಕರ್ನಾಟಕದ ಭಾಗದ ಜನರಿಗೂ ಗುಡ್‌ನ್ಯೂಸ್ ನೀಡಿದೆ. ಬೆಂಗಳೂರಿನಲ್ಲಿ ಈಗಾಗಲೇ ಒಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದೆ. ದೇವನಹಳ್ಳಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದೆ. ಇದೀಗ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೂರು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದ್ದು ಇಲ್ಲಿಗೆ ಕೇಂದ್ರ ತಂಡವು ಭೇಟಿ ನೀಡಿದೆ. ಇದೀಗ ಉತ್ತರ ಕರ್ನಾಟಕದ ಎರಡು ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿದ್ಧತೆ ಶುರು ಮಾಡಲಿದ್ದೇವೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.
ಉತ್ತರ ಕರ್ನಾಟಕದ ಈ ಭಾಗದಲ್ಲಿ ವಿಮಾನ ನಿಲ್ದಾಣ!
ಉತ್ತರ ಕರ್ನಾಟಕದ ಭಾಗದ ಜನರ ಅನುಕೂಲಕ್ಕಾಗಿ ಎರಡು ಭಾಗದಲ್ಲಿ ಒಂದರಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚರ್ಚೆ ನಡೆದಿದೆ. ಈ ವಿಷಯವನ್ನು ಖುದ್ದು ಸಚಿವ ಎಂ.ಪಾಟೀಲ್ ಅವರೇ ಖಚಿತಪಡಿಸಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಎರಡು ಪ್ರಮುಖ ಜಿಲ್ಲೆಗಳಾದ ಧಾರವಾಡ ಹಾಗೂ ಬೆಳಗಾವಿಯನ್ನು ಮೊದಲ ಹಂತದಲ್ಲಿ ಗುರುತು ಮಾಡಲಾಗಿದೆ. ಇನ್ನು ಹುಬ್ಬಳ್ಳಿ - ಬೆಳಗಾವಿ ಎರಡೂ ಪ್ರದೇಶ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಿಸ್ಟ್‌ನಲ್ಲಿ ಇವೆ. ಈ ಎರಡು ಪ್ರದೇಶಗಳಲ್ಲಿ ಒಂದು ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ಧಿ ಆಗಲಿದೆ. ಈ ನಿಟ್ಟಿನಲ್ಲಿ ಶೀಘ್ರವೇ ಚರ್ಚೆ ಮಾಡಿ ಪ್ರಸ್ತಾವನೆಯನ್ನೂ ಸಿದ್ಧಪಡಿಸಲಿದ್ದೇವೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.













Click it and Unblock the Notifications