ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆ ಶಿವಕುಮಾರ್‌ಗೆ ಹಿನ್ನಡೆ, ಅರ್ಜಿ ವಜಾಗೊಳಿಸಿದ ನ್ಯಾಯಾಲಯ

|
Google Oneindia Kannada News

ಬೆಂಗಳೂರು, ಜೂನ್ 25 : ಆದಾಯ ತೆರಿಗೆ ದಾಳಿ ವಿಚಾರದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಹಿನ್ನಡೆ ಉಂಟಾಗಿದೆ. ಪ್ರಕರಣದಿಂದ ತಮ್ಮ ಹೆಸರು ಕೈ ಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಮಂಗಳವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಪ್ರಕಟಿಸಿದರು. ಪ್ರಕರಣದ ವಿಚಾರಣೆಯನ್ನು ಮುಂದುವರೆಸಬಹುದು ಎಂದು ತೀರ್ಪು ನೀಡಿದರು.

ದೆಹಲಿಯಲ್ಲಿ ಸಿಕ್ಕ ಹಣ ಡಿಕೆಶಿಗೆ ಸೇರಿದ್ದು : ಹೆಚ್ಚುವರಿ ಸಾಲಿಟರ್ ಜನರಲ್ದೆಹಲಿಯಲ್ಲಿ ಸಿಕ್ಕ ಹಣ ಡಿಕೆಶಿಗೆ ಸೇರಿದ್ದು : ಹೆಚ್ಚುವರಿ ಸಾಲಿಟರ್ ಜನರಲ್

2017ರಲ್ಲಿ ನಡೆದ ಐಟಿ ದಾಳಿಯ ಬಳಿಕ ಜಾರಿ ನಿರ್ದೇಶನಾಲಯ ದಾಖಲು ಮಾಡಿರುವ ಪ್ರಕರಣದಿಂದ ತಮ್ಮ ಹೆಸರು ಕೈ ಬಿಡಬೇಕು ಎಂದು ಡಿ.ಕೆ.ಶಿವಕುಮಾರ್ ಅವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.

ಆದಾಯ ತೆರಿಗೆ ಇಲಾಖೆ ದಾಳಿ : ಡಿಕೆಶಿಯಿಂದ ಸಾಕ್ಷಿ ನಾಶಕ್ಕೆ ಪ್ರಯತ್ನಆದಾಯ ತೆರಿಗೆ ಇಲಾಖೆ ದಾಳಿ : ಡಿಕೆಶಿಯಿಂದ ಸಾಕ್ಷಿ ನಾಶಕ್ಕೆ ಪ್ರಯತ್ನ

ಜಾರಿ ನಿರ್ದೇಶನಾಲಯದ ಪರವಾಗಿ ಹೆಚ್ಚುವರಿ ಸಾಲಿಟರ್ ಜನರಲ್ ಪ್ರಭುಲಿಂಗ ಕೆ.ನಾವಡಗಿ ವಾದ ಮಂಡನೆ ಮಾಡಿದ್ದರು. ಆರೋಪಿಗಳು ದಂಡನೀಯ ಅಪರಾಧವನ್ನು ಮಾಡಿದ್ದಾರೆ ಎಂದು ವಾದ ಮಂಡಿಸಿದ್ದರು....

ಡಿ.ಕೆ.ಶಿವಕುಮಾರ್ ವಿರುದ್ಧದ ಐಟಿ ತನಿಖೆಗೆ ಇದ್ದ ತಡೆ ತೆರವುಡಿ.ಕೆ.ಶಿವಕುಮಾರ್ ವಿರುದ್ಧದ ಐಟಿ ತನಿಖೆಗೆ ಇದ್ದ ತಡೆ ತೆರವು

ಏನಿದು ಪ್ರಕರಣ?

ಏನಿದು ಪ್ರಕರಣ?

2017ರಲ್ಲಿ ಡಿ.ಕೆ.ಶಿವಕುಮಾರ್ ಅವರ ಬೆಂಗಳೂರು, ದೆಹಲಿ ನಿವಾಸದ ಮೇಲೆ ಐಟಿ ದಾಳಿ ನಡೆದಿತ್ತು. ದೆಹಲಿಯ ಸಫ್ದರ್ ಜಂಗ್ ಎನ್ಕ್ಲೇವ್‌ನಲ್ಲಿನ ನಿವಾಸದಲ್ಲಿ 8.59 ಕೋಟಿಗೂ ಅಧಿಕ ಮೊತ್ತದ ಹಣ ಪತ್ತೆಯಾಗಿತ್ತು. ಈ ಹಣಕ್ಕೆ ಅಗತ್ಯ ದಾಖಲೆಗಳನ್ನು ನೀಡಿರಲಿಲ್ಲ. ಆದ್ದರಿಂದ, ಐಟಿ ಇಲಾಖೆಯ ಸೂಚನೆಯಂತೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿತ್ತು.

ಪ್ರಕರಣದಿಂದ ಕೈ ಬಿಡಲು ಅರ್ಜಿ

ಪ್ರಕರಣದಿಂದ ಕೈ ಬಿಡಲು ಅರ್ಜಿ

ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್, ಎನ್.ರಾಜೇಂದ್ರ, ಆಂಜನೇಯ ಮತ್ತು ಹನುಮಂತಯ್ಯ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿತ್ತು. ಡಿ.ಕೆ.ಶಿವಕುಮಾರ್ ಅವರು ಪ್ರಕರಣದಲ್ಲಿ ತಮ್ಮ ಹೆಸರನ್ನು ಕೈಬಿಡಬೇಕು ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ದಂಡನೀಯ ಅಪರಾಧ

ದಂಡನೀಯ ಅಪರಾಧ

ಜಾರಿ ನಿರ್ದೇಶನಾಲಯದ ಪರವಾಗಿ ಹೆಚ್ಚುವರಿ ಸಾಲಿಟರ್ ಜನರಲ್ ಪ್ರಭುಲಿಂಗ ಕೆ.ನಾವಡಗಿ ಅವರು ವಾದ ಮಂಡನೆ ಮಾಡಿ, ಆರೋಪಿಗಳು ಆದಾಯ ತೆರಿಗೆ ಕಾಯ್ದೆ 1961ರ ಕಲಂ 276 ಸಿ (1) ಮತ್ತು 277ರ ಪ್ರಕಾರ ದಂಡನೀಯ ಅಪರಾಧ ಎಸಗಿದ್ದಾರೆ. ಹವಾಲಾ ಮೂಲಕ ಬೆಂಗಳೂರಿನಿಂದ ದೆಹಲಿಗೆ ಹಣ ಸಾಗಣೆ ಮಾಡಿದ್ದಾರೆ ಎಂದು ವಾದ ಮಂಡಿಸಿದ್ದರು.

ಕಾನೂನು ಬದ್ಧವಾಗಿದೆ

ಕಾನೂನು ಬದ್ಧವಾಗಿದೆ

ಐಟಿ ದಾಳಿಯ ವೇಳೆ ದೆಹಲಿಯ ನಿವಾಸದಲ್ಲಿ ಸಿಕ್ಕ ಹಣ ಡಿ.ಕೆ.ಶಿವಕುಮಾರ್ ಅವರಿಗೆ ಸೇರಿದ್ದು. 8.59 ಕೋಟಿ ಮೊತ್ತದ ಹಣಕ್ಕೆ ಅಗತ್ಯ ದಾಖಲೆಗಳನ್ನು ನೀಡುವಲ್ಲಿ ಆರೋಪಿಗಳು ವಿಫಲರಾಗಿದ್ದಾರೆ. ಎಲ್ಲಾ ಆರೋಪಿಗಳು ಐಪಿಸಿ ಕಲಂ 120ಬಿ ಅಡಿ ಒಳಸಂಚು ರೂಪಿಸಿದ್ದಾರೆ ಎಂದು ವಾದ ಮಂಡನೆ ಮಾಡಿದ್ದರು.

English summary
Special courts for elected representatives Bengaluru quashed petition field by Karnataka water resource minister D.K.Shiva Kumar in IT raid case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X