Karnataka Rain: ಈ ಜಿಲ್ಲೆಗಳಲ್ಲಿ ಮುಂದಿನ ಭಾನುವಾರದವರೆಗೂ ಮಳೆ ಖಚಿತ! ಹವಾಮಾನ ಇಲಾಖೆ ಸೂಚನೆ
ಬೆಂಗಳೂರು, ಆಗಸ್ಟ್ 23: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರಾವಳಿ ಕರ್ನಾಟಕದಲ್ಲಿ ಭಾನುವಾರದವರೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ಮಂಗಳವಾರ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳು ಆಗಸ್ಟ್ 25 ರಿಂದ 28 ವರೆಗೆ ಮೋಡಕವಿದ ವಾತಾವರಣ ವಿರಲಿದ್ದು, ಗುರುವಾರ ಬೆಳಿಗ್ಗೆ ತನಕ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು IMD ತಿಳಿಸಿದೆ.

ಇನ್ನೂ ರಾಜ್ಯದ ಹಲವು ಭಾಗಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಸಂಸ್ಥೆ ಹೇಳಿದೆ. ಕೆಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಕರ್ನಾಟಕದ ಇತರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ತಿಳಿಸಿದೆ.
ಇನ್ನೂ ಕರ್ನಾಟಕದ ವಿವಿಧ ಜಿಲ್ಲೆಗಳಾದ ಹಾಸನ, ವಿಜಯಪುರ, ಶಿವಮೊಗ್ಗ, ಬೆಳಗಾವಿ, ಬೀದರ್, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ಉಡುಪಿ, ಉತ್ತರ ಕನ್ನಡ, ಕೊಡಗು, ಧಾರವಾಡ, ಕಲಬುರಗಿ, ಗದಗ, ಚಿತ್ರದುರ್ಗ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ರಾಯಚೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೊಪ್ಪಳ, ವಿಜಯನಗರ, ಹಾವೇರಿ, ರಾಮನಗರ, ದಾವಣಗೆರೆ, ಬಾಗಲಕೋಟೆ, ಚಾಮರಾಜನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.












Click it and Unblock the Notifications