Get Updates
Get notified of breaking news, exclusive insights, and must-see stories!

ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರು ವಿಶ್ವವಿದ್ಯಾಲಯ ಪಠ್ಯದಲ್ಲಿ ಅಪ್ಪು ಜೀವನ ಪಾಠ ಸೇರ್ಪಡೆ

ಬೆಂಗಳೂರು, ಡಿಸೆಂಬರ್ 22: ಕರ್ನಾಟಕ ರತ್ನ ದಿ.ಡಾ.ಪುನೀತ್ ರಾಜಕುಮಾರ್ ಅಭಿಮಾನಿಗಳ ಆಸೆಯಂತೆ ಕನ್ನಡದ ಭಾಷಾ ಪಠ್ಯ ಪುಸ್ತಕದಲ್ಲಿ ಅಳವಡಿಸಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯ ಪಠ್ಯ ಪುಸ್ತಕದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಪರಿಪೂರ್ಣ ಜೀವನದ ಆಯ್ದ ಭಾಗವನ್ನು ಅಳವಡಿಸಲಾಗಿದೆ. ಸ್ಯಾಂಡಲ್‌ವುಡ್‌ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಸರಿಸುಮಾರು 14ತಿಂಗಳು ಕಳೆದಿವೆ. ಅಪ್ಪು ಅವರ ಜೀವನದ ವಿವರವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಈ ಸಂಬಂಧ ಪುನೀತ್ ಅಭಿಮಾನಿ ಸಂಘಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದ್ದರು.

ಅಭಿಮಾನಿಗಳ ಆಸೆ ಈಗ ನೆರವೇರಿದೆ. ಬೆಂಗಳೂರು ವಿಶ್ವವಿದ್ಯಾಲಯವು ತನ್ನ ಬಿಕಾಂ ಪದವಿ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ 'ವಾಣಿಜ್ಯ ಕನ್ನಡ 3' ರಲ್ಲಿ ಪುನೀತ್ ಅವರ ಜೀವನದ ಆಯ್ದ ಭಾಗವನ್ನು ಪಠ್ಯಕ್ಕೆ ಅಳವಡಿಸಿಕೊಂಡಿದೆ.

Bengaluru University Added Part of Dr. Puneeth Rajkumar life in B.Com Kannada Textbook

'ಲೋಹಿತ್ ಎಂಬ ಮರಿಮುದ್ದು' ಬಳಕೆ

ಈ ಹಿಂದೆ ಪರ್ತಕರ್ತ ಡಾ. ಶರಣು ಹುಲ್ಲೂರು ಅವರು ಬರೆದಿದ್ದ ಸಾವಣ್ಣ ಪ್ರಕಾಶನ ಹೊರ ತಂದಿರುವ 'ನೀನೇ ರಾಜಕುಮಾರ' ಕೃತಿಯ ಒಂದು ಅಧ್ಯಾಯವಾದ 'ಲೋಹಿತ್ ಎಂಬ ಮರಿಮುದ್ದು' ಭಾಗವನ್ನು ಬೆಂಗಳೂರು ವಿಶ್ವವಿದ್ಯಾಲಯ ತನ್ನ ಪದವಿ ಪಠ್ಯದಲ್ಲಿ ಬಳಸಿಕೊಂಡಿದೆ.

ಡಾ. ಮುನಿಯಪ್ಪ ಎಂಬುವವರು ಈ ಪಠ್ಯಪುಸ್ತಕದ ಪ್ರಧಾನ ಸಂಪಾದಕರಾಗಿದ್ದಾರೆ. ಡಾ. ಅಮರೇಂದ್ರ ಶೆಟ್ಟಿ ಆರ್, ಡಾ.ಕ.ನಿಂ. ಹೊಯ್ಸಳಾದಿತ್ಯ, ಡಾ. ಶಿವರಾಜ ಬಿ.ಇ ಮತ್ತು ಡಾ.ಬಿ.ಆರ್. ರಘುನಂದನ್ ಅವರು ಪಠ್ಯದ ಸಂಪಾದಕರಾಗಿದ್ದಾರೆ. ಪ್ರಸಕ್ತ ವರ್ಷದ ಬಿಕಾಂ ಪದವಿ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳು ಕನ್ನಡ ಭಾಷಾ ಪಠ್ಯದಲ್ಲಿ ಪುನೀತ್ ಅವರ ಬಾಲ್ಯವನ್ನು ತಿಳಿದುಕೊಳ್ಳಲಿದ್ದಾರೆ.

Bengaluru University Added Part of Dr. Puneeth Rajkumar life in B.Com Kannada Textbook

ಕೆಲವು ದಿನಗಳ ಹಿಂದಷ್ಟೇ 'ನೀನೇ ರಾಜಕುಮಾರ' ಪುಸ್ತಕದ ನಾಲ್ಕನೇ ಆವೃತ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಿಡುಗಡೆ ಮಾಡಿದ್ದರು. ಅದು ಕನ್ನಡದಲ್ಲಿ ಅತೀ ಹೆಚ್ಚು ಮಾರಾಟ ಕಂಡ ಬಯೋಗ್ರಫಿ ಎನ್ನುವ ದಾಖಲೆಗೂ ಈ ಪುಸ್ತಕ ಪಾತ್ರವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+