Bengaluru Weather: ನಗರದಲ್ಲಿ 32°C ತಾಪಮಾನ ದಾಖಲು, ರಾಜ್ಯಾದ್ಯಂತ ಬಿಸಿಲು ಏರಿಕೆ ಮುನ್ಸೂಚನೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗುವ, ಅತ್ಯಧಿಕ ತಾಪಮಾನ ದಾಖಲಾಗುವ ಮುನ್ಸೂಚನೆ ಸಿಕ್ಕಿದೆ. ಈ ಮಾತಿಗೆ ಪೂರಕೆವೆಂಬಂತೆ ನೆನ್ನೆ ಸಂಜೆ ನಗರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಈ ಬೇಸಿಗೆಯಲ್ಲಿ ಈವರೆಗಿನ ಗರಿಷ್ಠ ಉಷ್ಣಾಂಶ ಎನ್ನಲಾಗಿದೆ. ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ನಲ್ಲಿ ಬೆಂಗಳೂರ ಸೇರಿ ರಾಜ್ಯದಲ್ಲಿ ಬಿಸಿಲು ಇನ್ನಷ್ಟು ಏರಿಕೆ ಆಗುವ ನಿರೀಕ್ಷೆ ಇದೆ.
ನಗರದ ಕೆಲವೆಡೆ ಬೆಳಗ್ಗೆ ಮಂಜು ಕವಿದಿದೆ. ಸಂಜೆ ನಂತರ ತಂಪು ಗಾಳಿ ಕಂಡು ಬರುತ್ತಿದ್ದು, ಹಗಲು ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದೆ. ಇದು ಕ್ರಮೇಣ ಏರಿಕೆ ಆಗಲಿದೆ. ಮುಂದಿನ 5-7 ದಿನ ಬೆಂಗಳೂರಿನಲ್ಲಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರದ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ.ಎಸ್.ಪುವಿಯರಸನ್ ಅವರು ತಿಳಿಸಿದ್ದಾರೆ.

ಬೆಂಗಳೂರು ಸೇರಿ ವಿವಿಧೆಡೆ ತಾಪಮಾನ ಏರಿಕೆ
ಮಂಗಳವಾರ ಸಂಜೆ ಬೆಂಗಳೂರು ನಗರ 29.9 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ (KIAL) 32.2 ಡಿಗ್ರಿ ಸೆಲ್ಸಿಯಸ್ ಮತ್ತು ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ 29.9 ಗರಿಷ್ಠ ತಾಪಮಾನ ಕಂಡು ಬಂದಿದೆ. ಬೆಂಗಳೂರು ಮಾತ್ರವಲ್ಲದೇ ರಾಜ್ಯದ ವಿವಿಧೆಡೆ ತಾಪಮಾನ ಪ್ರಮಾಣದ ಏರಿಕೆ ಆಗುತ್ತಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆ ಕಂಡು ಬರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಬೆಳಗಾವಿ, ಹಾವೇರಿ, ರಾಯಚೂರು, ಕಲಬುರಗಿ ಸೇರಿ ಎಲ್ಲೆಡೆ ಒಣಹವೆ ಮುಂದುವರಿಯಲಿದೆ.
ಕೆಲವೆಡೆ ರಾಜ್ಯದ ಗರಿಷ್ಠ ತಾಪಮಾನ ದಾಖಲು
ಕರ್ನಾಟಕದಲ್ಲಿ ಅತೀ ಗರಿಷ್ಠ ತಾಪಮಾನ ಕಲಬುರಗಿಯಲ್ಲಿ ಮತ್ತು ಬಳ್ಳಾರಿ (AWAS) ನಲ್ಲಿ ತಲಾ 34 ಡಿಗ್ರಿ ಸೆಲ್ಸಿಯಸ್, , ಕಾರವಾರದಲ್ಲಿ 33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉಳಿದಂತೆ ಶಿವಮೊಗ್ಗ, ದಾವಣಗೆರೆ, ಮಂಗಳೂರಿನ ಶಕ್ತಿ ನಗರ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ತಲಾ 32 ಡಿಗ್ರಿ ಸೆಲ್ಸಿಯಸ್, ಮೈಸೂರು, ಚಿತ್ರದುರ್ಗ, ಹಾವೇರಿ, ಬೀದರ್, ಬೆಳಗಾವಿ ಏರ್ಪೋರ್ಟ್, ಮಂಗಳೂರು ಏರ್ಪೋರ್ಟ್ ಮತ್ತು ಹೊನ್ನಾವರದಲ್ಲಿ ತಲಾ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಕಂಡು ಬಂದಿದೆ. ಉಳಿದ ಜಿಲ್ಲೆಗಳಲ್ಲೂ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ನಷ್ಟಿದೆ.
ಹವಾಮಾನ ವೈಪರೀತ್ಯ ವರದಿ
ಹವಾಮಾನ ವೈಪರೀತ್ಯ ನೋಡುವುದಾದರೆ, ಪೂರ್ವ ಸಮಭಾಜಕ ಹಿಂದೂ ಮಹಾಸಾಗರ ಮತ್ತು ಅದಕ್ಕೆ ಹೊಂದಿಕೊಂಡಿರುವ ಆಗ್ನೆಯ ಬಂಗಾಳ ಕೊಲ್ಲಿ ಭಾಗದಲ್ಲಿ ವಾಯು ಚಂಡಮಾರುತದ ಪರಿಚಲನೆ ಉಂಟಾಗಿದೆ. ಇದು ಸಮುದ್ರ ಮಟ್ಟದಿಂದ ಸರಾಸರಿ 3.1 ಕಿ.ಮೀ ಎತ್ತರದಲ್ಲಿದೆ. ಮಧ್ಯ ಕೇರಳ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ













Click it and Unblock the Notifications