Data Center Park: ಬೆಂಗಳೂರಲ್ಲಿ 'ಅತ್ಯಾಧುನಿಕ ಡೇಟಾ ಸೆಂಟರ್ ಪಾರ್ಕ್ ನಿರ್ಮಾಣ': ಸರ್ಕಾರ
ದಾವೋಸ್, ಜನವರಿ 17: ಸ್ವಿಟ್ಜರ್ಲೆಂಡಿನ ಈ ದಾವೋಸ್ ನಗರದಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ನೇತೃತ್ವದ ನಿಯೋಗವು ಎರಡನೆಯ ದಿನವಾದ ಮಂಗಳವಾರದಂದು ವಿವಿಧ ಕಂಪನಿಗಳೊಂದಿಗೆ 22 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾವನೆಗಳಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದೆ. ಈ ವೇಳೆ ಹಲವು ಮಹತ್ವದ ನಿರ್ಧಾರಗಳು, ಯೋಜನೆಗಳು ಘೋಷಣೆ ಆಗಿವೆ.
ಈ ಯೋಜನೆಗಳಲ್ಲಿ ವೆಬ್ ವರ್ಕ್ಸ್ ಕಂಪನಿಯು ಬೆಂಗಳೂರಿನಲ್ಲಿ 'ಬಂಡವಾಳ ಹೂಡಿಕೆಯ ಡೇಟಾ ಸೆಂಟರ್ ಪಾರ್ಕ್' ಸ್ಥಾಪನೆಯ ಯೋಜನೆ ಒಂದಾಗಿದೆ. ಇದು ಒಟ್ಟು 100 ಮೆಗಾವ್ಯಾಟ್ ಸಾಮರ್ಥ್ಯದ, 20 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ ಡೇಟಾ ಸೆಂಟರ್ ಪಾರ್ಕ್ ಆಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಡೇಟಾ ಪಾರ್ಕ್ ಜತೆ ಮೈಕ್ರೋಸಾಫ್ಟ್, ಹಿಟಾಚಿ, ಲುಲು ಗ್ರೂಪ್, ಹ್ಯೂಲೆಟ್ ಪೆಕಾರ್ಡ್ (ಎಚ್.ಪಿ), ಹನಿವೆಲ್, ಐನಾಕ್ಸ್, ವೋಲ್ವೋ, ನೆಸ್ಲೆ, ಕಾಯಿನ್ ಬೇಸ್, ಟಕೇಡಾ ಫಾರ್ಮಾ, ಬಿಎಲ್ ಆಗ್ರೋ ಮುಂತಾದ ಕಂಪನಿಗಳೊಂದಿಗೆ 2,000 ಕೋಟಿ ರೂ. ಮೌಲ್ಯದ ಹೂಡಿಕೆಗಳಿಗೆ ತಿಳಿವಳಿಕೆ ಪತ್ರಗಳಿಗೆ ಕರ್ನಾಟಕ ಸರ್ಕಾರ ಸಹಿ ಹಾಕಿದೆ ಎಂದು ತಿಳಿಸಿದರು.
ವಿವಿಧ ಕ್ಷೇತ್ರಗಳಿಗೆ ಬಂಡವಾಳ ಹೂಡಿಕೆ
ರಾಜ್ಯದಲ್ಲಿ ಹೂಡಿಕೆಗೆ ಮುಂದಾಗಿರುವ ಮೈಕ್ರೋಸಾಫ್ಟ್ ಕಂಪನಿಯು ಕೌಶಲ್ಯಾಭಿವೃದ್ಧಿ ಮತ್ತು ಸುಗಮ ಆಡಳಿತ ಉಪಕ್ರಮಗಳ ತರಬೇತಿ ಕೊಡಲಿದೆ. ಹಿಟಾಚಿ ಕಂಪನಿಯು ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಸೇವೆ, ಶಿಕ್ಷಣ ಮತ್ತು ಇ-ಗವರ್ನೆನ್ಸ್ ಕ್ಷೇತ್ರಗಳಲ್ಲಿ ಬಂಡವಾಳ ತೊಡಗಿಸಲಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಲುಲು ಸಮೂಹವು ಹಣ್ಣು ಮತ್ತು ತರಕಾರಿ ಸಂಸ್ಕರಣೆ ಕ್ಷೇತ್ರದಲ್ಲಿ ಹೆಜ್ಜೆ ಗುರುತು ಮೂಡಿಸಲು ಉತ್ಸುಕವಾಗಿದೆ ಎಂದರು.
ಉ.ಕ ಭಾಗದಲ್ಲೂ ಹೂಡಿಕೆ, ಅಭಿವೃದ್ಧಿ
ಈ ಒಡಂಬಡಿಕೆಗಳು ಕಾರ್ಯರೂಪಕ್ಕೆ ಬರುವ ಮೂಲಕ ರಾಜ್ಯವು ತಂತ್ರಜ್ಞಾನ ಮತ್ತು ಆರ್ಥಿಕ ಅಭಿವೃದ್ಧಿಯ ಹೊಸ ಯುಗವನ್ನು ಕಾಣಲಿದೆ. ಜೊತೆಗೆ, ಮಾರುಕಟ್ಟೆಯಲ್ಲಿ ಇರುವ ಅವಕಾಶಗಳನ್ನು ಅತ್ಯಾಧುನಿಕ ಮೂಲಸೌಲಭ್ಯಗಳ ಮೂಲಕ ಗರಿಷ್ಠ ಮಟ್ಟದಲ್ಲಿ ಸದ್ಬಳಕೆ ಮಾಡಿಕೊಳ್ಳಲು ಇದರಿಂದ ಸಾಧ್ಯವಾಗಲಿದೆ. ಈ ಹೂಡಿಕೆಗಳಿಂದ ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ ಸೇರಿದಂತೆ ಹಲವು ಭಾಗಗಳು ಮುಂಚೂಣಿಗೆ ಬರಲಿದ್ದು, ಈ ಯೋಜನೆಗಳಿಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ.

ಡಿಜಿಟಲ್ ಸ್ಕಿಲ್ಲಿಂಗ್ ಸೌಲಭ್ಯ, ತರಬೇತಿ
ಮೈಕ್ರೋಸಾಫ್ಟ್ ಕಂಪನಿಯು ಡಿಜಿಟಲ್ ಉತ್ಪಾದಕತೆ, ಉದ್ಯಮಶೀಲತೆ ಮತ್ತು ಸಂವಹನಕ್ಕೆ ಸಂಬಂಧಿಸಿದಂತೆ ತನ್ನ 'ಮೈಕ್ರೋಸಾಫ್ಟ್ ರೈಸ್' ಡಿಜಿಟಲ್ ಸ್ಕಿಲ್ಲಿಂಗ್ ಸೌಲಭ್ಯದ ಮೂಲಕ 70 ಗಂಟೆಗಳ ವರ್ಚುಯಲ್ ತರಬೇತಿ ಕೊಡಲಿದೆ. ಜೊತೆಗೆ ಅಭ್ಯರ್ಥಿಗಳಿಗೆ ಮೈಕ್ರೋಸಾಫ್ಟ್ ಟ್ರೈನಿಂಗ್ ಪ್ಲಾಟ್ ಫಾರಂ ಮೂಲಕ 150 ಗಂಟೆಗಳ ಹೆಚ್ಚುವರಿ ಕೌಶಲ್ಯಾಭಿವೃದ್ಧಿ ಪಠ್ಯ ಸಾಮಗ್ರಿ ಸಿಗಲಿದೆ. ಇದರಿಂದ ರಾಜ್ಯದ ಯುವಜನರಿಗೆ ಕ್ಲೌಡ್, ಎಐ, ಸೈಬರ್ ಸೆಕ್ಯುರಿಟಿ ಕ್ಷೇತ್ರಗಳಲ್ಲಿ ಅವಕಾಶಗಳು ಸಿಗಲಿವೆ ಎಂದು ಸಚಿವರು ಹೇಳಿದರು.
ಗ್ಲೋಬಲ್ ಕೆಪಾಸಿಟಿ ಸೆಂಟರ್ ಸ್ಥಾಪನೆ
ಹನಿವೆಲ್ ಕಂಪನಿಯು ಐಒಟಿ (ಇಂಟರ್ನೆಟ್ ಆಫ್ ಥಿಂಗ್ಸ್) ಮೂಲಕ ಸಂಚಾರ ನಿರ್ವಹಣೆ, ತ್ಯಾಜ್ಯ ನಿರ್ವಹಣೆ ಮುಂತಾದುವುಗಳನ್ನು ನಿಭಾಯಿಸಲಿದೆ. ಲುಲು ಸಮೂಹವು 300 ಕೋಟಿ ರೂ. ಹೂಡಿಕೆಯೊಂದಿಗೆ ಕಲಬುರಗಿ ಜಿಲ್ಲೆಯಲ್ಲಿ ಆಹಾರ ಸಂಸ್ಕರಣೆಯಲ್ಲಿ ತೊಡಗಿಕೊಳ್ಳಲು ಉತ್ಸುಕವಾಗಿದೆ. ಹಾಗೆಯೇ ಟಕೇಡಾ ಫಾರ್ಮಾ, ಬೆಂಗಳೂರಿನಲ್ಲಿ ತನ್ನ ಗ್ಲೋಬಲ್ ಕೆಪಾಸಿಟಿ ಸೆಂಟರ್ ತೆರೆಯಲು ಮುಂದೆ ಬಂದಿದೆ ಎಂದು ಅವರು ವಿವರಿಸಿದರು.
ಈ ಶೃಂಗಸಭೆಯಲ್ಲಿ ತಾವು ವೆಬ್ ವರ್ಕ್ಸ್ ಸಂಸ್ಥಾಪಕ ನಿಖಿಲ್ ರತಿ, ಐನಾಕ್ಸ್ ಕಂಪನಿಯ ಸಿದ್ಧಾರ್ಥ ಜೈನ್, ಹನಿವೆಲ್ ಕಂಪನಿಯ ಮುಖ್ಯಸ್ಥ ಅನಂತ್ ಮಹೇಶ್ವರಿ, ಲುಲು ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಯೂಸುಫ್ ಅಲಿ ಮುಂತಾದವರೊಂದಿಗೆ ವಿಸ್ತೃತ ಮಾತುಕತೆ ನಡೆಸಿರುವುದಾಗಿ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವೋಸ್ ಗೆ ತೆರಳಿರುವ ನಿಯೋಗದಲ್ಲಿ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್,ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಏಕ್ ರೂಪ್ ಕೌರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್ ಪಾಲ್ಗೊಂಡಿದ್ದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications