ISP ಗಳಿಗೆ ಬೆಸ್ಕಾಂ ಗಡುವು: ಬೆಂಗಳೂರಿನಲ್ಲಿ ಇಂಟರ್ನೆಟ್ ವ್ಯತ್ಯಯ ಸಾಧ್ಯತೆ

ಬೆಂಗಳೂರು, ಆಗಸ್ಟ್‌ 25: ಬೆಂಗಳೂರು ನಗರದಾದ್ಯಂತ ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತವಾಗಿ ಹಾಕಲಾಗಿರುವ ಆಪ್ಟಿಕಲ್ ಫೈಬರ್ ಕೇಬಲ್ ಗಳು, ಡಾಟಾ ಕೇಬಲ್ ಗಳು ಹಾಗೂ ಡಿಶ್ ಕೇಬಲ್ ಗಳನ್ನು ತೆಗೆದು ಹಾಕುವ ನಿರ್ಧಾರಕ್ಕೆ ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿಯು ಬಂದಿರುವುದರಿಂದ ತಂತ್ರಜ್ಞಾನ ಕಂಪನಿಗಳ ಕಾರ್ಯನಿರ್ವಹಣೆ ಹಾಗೂ ಮನೆಯಿಂದಲೇ ಉದ್ಯೋಗ ನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ಇಂಟರ್ ನೆಟ್‌ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ನಾವು ಎಲ್ಲಾ ಸಾಲುಗಳನ್ನು ಸಂಪರ್ಕ ಕಡಿತಗೊಳಿಸುವ ಮೊದಲು ನಾವು ಏಳು ದಿನಗಳವರೆಗೆ ಕಾಯುತ್ತೇವೆ. ನಾವು ಕೇಬಲ್‌ಗಳು ಅಪಾಯಕಾರಿಯಾಗಿ ತೂಗಾಡುತ್ತಿರುವ ಸ್ಥಳಗಳಲ್ಲಿ ಮತ್ತು ಪ್ರಯಾಣಿಕರಿಗೆ ಮತ್ತು ನಿವಾಸಿಗಳಿಗೆ ಅಪಾಯವನ್ನುಂಟುಮಾಡುವ ಸ್ಥಳಗಳಲ್ಲಿ ತೆಗೆದುಹಾಕುತ್ತಿದ್ದೇವೆ ಎಂದು ಬೆಸ್ಕಾಂ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Bescom Deadline To ISPs Triggers Internet Disruption

ಸರ್ಜಾಪುರ ಮತ್ತು ಬೆಳ್ಳಂದೂರು ನಿವಾಸಿಗಳು ದೀರ್ಘಕಾಲದ ಅಡಚಣೆಯ ಬಗ್ಗೆ ಈಗಾಗಲೇ ದೂರು ಬಂದಿದ್ದು, ಎಲ್ಲ ಅನಧಿಕೃತ ಕೇಬಲ್ ಗಳನ್ನು ಇನ್ನು ಒಂದು ವಾರದಲ್ಲಿ ತೆರವುಗೊಳಿಸಲಾಗುವುದು ಎಂಬ ತನ್ನ ನಿರ್ಧಾರವನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಪ್ರಕಟಿಸಿದೆ.

ಇನ್ನೂ ಸೂಚನೆಯಂತೆ ತೆರವು ಕಾರ್ಯವಾಗದೇ ಇದ್ದಲಿ ತಾನೇ ಈ ವಿಷಯವನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಹಾಗೂ ಕೇಬಲ್ ಗಳ ತೆರವಿಗೆ ಮುಂದಾಗಬೇಕಾಗುತ್ತದೆ. ಇದರೊಂದಿಗೆ ಸಂಬಂಧಿಸಿದ ಕಾರ್ಯನಿರ್ವಾಹಕರ ವಿರುದ್ಧ ಪ್ರಕರಣಗಳನ್ನೂ ದಾಖಲಿಸಲಾಗುತ್ತದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಎಚ್ಚರಿಕೆ ನೀಡಿದೆ.

ಬೆಸ್ಕಾಂ ಕಟ್ಟು ಸೂಚನೆ ಏನು?

ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್‌, ಡಾಟ ಕೇಬಲ್‌ ಹಾಗೂ ಡಿಶ್ ಕೇಬಲ್‌ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್‌ ನೆಟ್‌ ಸೇವಾ ಕಂಪನಿಗಳು, ಟಿವಿ ಕೇಬಲ್‌ ಆಪರೇಟರ್‌ ಗಳಿಗೆ ಬೆಸ್ಕಾಂ ಕಟ್ಟು ನಿಟ್ಟಿನ ಸೂಚನೆ ನೀಡಿದೆ.

ಬೆಸ್ಕಾಂ ವಿದ್ಯುತ್‌ ಕಂಬಗಳ ಮೇಲೆ ಅನಧಿಕೃತವಾಗಿ ಓಎಫ್‌ ಸಿ ಕೇಬಲ್‌ ಹಾಗೂ ಇನ್ನಿತರ ಕೇಬಲ್‌ ಗಳನ್ನು ಅಳವಡಿಸಿದ್ದ ಪರಿಣಾಮ ವಿದ್ಯುತ್‌ ಕಂಬ ಉರುಳಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪಾದಚಾರಿಗಳು ಗಾಯಗೊಂಡಿದ್ದು, ಸುರಕ್ಷತೆ ದೃಷ್ಠಿಯಿಂದ ಬೆಸ್ಕಾಂ ಅನಧಿಕೃತ ಕೇಬಲ್‌ ಗಳನ್ನು ತೆರವುಗೊಳಿಸಲು ನಿರ್ಧರಿಸಿದೆ. ಬೆಸ್ಕಾಂ ವಿದ್ಯುತ್‌ ಕಂಬಗಳಲ್ಲಿ ಹಾಕಿರುವ ಓಎಫ್‌ಸಿ, ಇಂಟರ್‌ ನೆಟ್‌ ಡಾಟ ಕೇಬಲ್‌ ಹಾಗೂ ಡಿಶ್‌ ಕೇಬಲ್‌ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಲು ಸಂಬಂಧಪಟ್ಟ ಇಂಟರ್‌ ನೆಟ್‌ ಕಂಪನಿಗಳು ಹಾಗೂ ಡಿಶ್‌ ಕೇಬಲ್‌ ಅಪರೇಟರ್‌ ಗಳು ತಪ್ಪಿದ್ದಲ್ಲಿ, ಬೆಸ್ಕಾಂ ಅವುಗಳನ್ನು ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+