ಭಾಗ್ಯಲಕ್ಷ್ಮೀ ಯೋಜನೆ: ಇಷ್ಟು ಲಕ್ಷ ಜನರಿಗೆ ಗುಡ್‌ನ್ಯೂಸ್ !
Bhagyalakshmi Yojana: ರಾಜ್ಯದಲ್ಲಿ ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮಿ ಯೋಜನೆಯ ಲಾಭ ಇದೀಗ ರಾಜ್ಯದ 2.30 ಲಕ್ಷ ಜನರನ್ನು ತುಲುಪಿದೆ. ಇಷ್ಟು ಜನರಿಗೆ ಈಗ ಇದರ ಲಾಭ ಸಿಗಲಿದೆ. ಸಾಮಾಜದಲ್ಲಿ ಹೆಣ್ಣು ಮಗು ಹೊರೆ ಎಂದು ಭಾವಿಸಬಾರದು. ಅವರು ಬೆಳೆದ ಮೇಲೆ ಅವರಿಗೆ ಹಣ ಸಿಗಬೇಕು ಎನ್ನುವುದು ಈ ಯೋಜನೆಯ ಉದ್ದೇಶವಾಗಿತ್ತು.
ಹೆಣ್ಣು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಯೋಜನೆಯನ್ನು ಪರಿಚಯಿಸಿದ್ದರು. ಮೊದಲ ಹಂತದಲ್ಲಿ ಈ ಯೋಜನೆಯಲ್ಲಿ ನೋಂದಣಿಯಾಗಿದ್ದವರಿಗೆ ಈಗ ಮೆಚ್ಯೂರಿಟಿ ಹಣ ಸಿಗಲಿದೆ. ಈ ಯೋಜನೆಯನ್ನು ರಾಜ್ಯ ಸರ್ಕಾರವು ಅಂಚೆ ಇಲಾಖೆಗೆ ವರ್ಗಾಯಿಸಿದ್ದು, ಇಷ್ಟರಲ್ಲೇ ಈ ಹಣ ಅರ್ಹರನ್ನು ತಲುಪಲಿದೆ. 2006 -2007ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದೇನು ?
ಈ ಬಗ್ಗೆ ಟ್ವೀಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ಹೆಣ್ಣುಮಗುವಿನ ಸ್ಥಾನ ಹೆಚ್ಚಿಸಲು ಹಾಗೂ ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣುಮಕ್ಕಳ ಜನನವನ್ನು ಉತ್ತೇಜಿಸಲು 2006-07ನೇ ಸಾಲಿನಲ್ಲಿ ಭಾಗ್ಯಲಕ್ಮೀ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಇದು ದೇಶದಲ್ಲೇ ಮೊದಲ ಬಾರಿಯಾಗಿತ್ತು. ಹೆಣ್ಣು ಮಕ್ಕಳ ರಕ್ಷಣೆಗಾಗಿ ಭಾಗ್ಯಲಕ್ಷ್ಮಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದು ನನ್ನ ರಾಜಕೀಯ ಜೀವನದ ಒಂದು ಸಂತೃಪ್ತಿಯ ಮೈಲಿಗಲ್ಲು ಎಂದು ಸ್ಮರಿಸಿಕೊಂಡಿದ್ದಾರೆ.
ಈ ಮಹತ್ವದ, ದೂರದೃಷ್ಟಿ ಯೋಜನೆಯ ಆರಂಭಿಕ ವರ್ಷದಲ್ಲಿ ನೋಂದಾಯಿಸಿದ್ದ ಸುಮಾರು 2.30 ಲಕ್ಷ ಫಲಾನುಭವಿಗಳು ಶೀಘ್ರದಲ್ಲಿ ಪರಿಪಕ್ವ ಮೊತ್ತ ಪಡೆಯಲಿರುವುದು ಅತ್ಯಂತ ಸಂತೋಷದ ವಿಷಯ. ಲಕ್ಷಾಂತರ ಬಡ ಹೆಣ್ಣುಮಕ್ಕಳ ಜೀವನವನ್ನು ಬೆಳಗುವ ಈ ಸಾರ್ಥಕ ಯೋಜನೆಯನ್ನು ರಾಜ್ಯ ಸರ್ಕಾರ ಮುಂದುವರಿಸಿಕೊಂಡು ಹೋಗಲಿ ಎಂದು ಆಗ್ರಹಿಸಿದ್ದಾರೆ. ಬಡ ಹೆಣ್ಣುಮಕ್ಕಳ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ತನ್ನ ಕರ್ತವ್ಯ ನಿರ್ವಹಿಸಲಿ ಎಂದು ಹೇಳಿದ್ದಾರೆ.












Click it and Unblock the Notifications