ಸಂಪುಟ ವಿಸ್ತರಣೆ : ಶಾಸಕ ಸ್ಥಾನಕ್ಕೆ ಈಶ್ವರ ಖಂಡ್ರೆ ರಾಜೀನಾಮೆ?

ಬೆಂಗಳೂರು, ಜೂನ್ 06 : ಸಂಪುಟ ವಿಸ್ತರಣೆ ಆಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದಿದ್ದೆ. ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಈಶ್ವರ ಖಂಡ್ರೆ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾಗಿದ್ದರು. 2018ರ ಚುನಾವಣೆಯಲ್ಲಿಯೂ ಅವರು ಗೆಲುವು ಸಾಧಿಸಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು.

ಆದರೆ, ಇಂದು ನಡೆದ ಸಚಿವ ಸಂಪುಟ ವಿಸ್ತರಣೆ ವೇಳೆ ಈಶ್ವರ ಖಂಡ್ರೆ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಆದ್ದರಿಂದ, ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

Eshwar Khandre

ಈಶ್ವರ ಖಂಡ್ರೆ ಪ್ರಬಲವಾದ ಲಿಂಗಾಯತ ಸಮುದಾಯಕ್ಕೆ ಸೇರಿದವರು. 'ಸಂಪುಟ ವಿಸ್ತರಣೆ ವೇಳೆ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಿಲ್ಲ' ಎಂದು ಅವರು ಆರೋಪಿಸಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಈಶ್ವರ ಖಂಡ್ರೆ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದವರು. ಜಿಲ್ಲೆಗೆ ಆದ್ಯತೆ ನೀಡುವ ವಿಚಾರದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪೂರ ಅವರು ಸಚಿವರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+