ಜನವರಿ 9ರಂದು ಯಾವ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಬೆಂಗಳೂರು, ಜನವರಿ 08 : ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಭಾರತ್ ಬಂದ್‌ನ ಮೊದಲ ದಿನ ಮುಕ್ತಾಯಗೊಂಡಿದೆ. ಜನವರಿ 9ರಂದ ಸಹ ಬಂದ್ ಮುಂದುವರೆಯಲಿದೆ ಎಂದು ವಿವಿಧ ಸಂಘಟನೆಗಳು ಹೇಳಿವೆ.
ಮಂಗಳವಾರ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರ್ಕಾರಿ ಬಸ್ ಸಂಚಾರ ವಿರಳವಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿತ್ತು.
ಜನವರಿ 9ರ ಬುಧವಾರವೂ ಬಂದ್ ಮುಂದುವರೆಯಲಿದೆ ಎಂದು ಕಾರ್ಮಿಕ ಸಂಘಟನೆಗಳು ಹೇಳಿವೆ. ಬೆಂಗಳೂರಿನಲ್ಲಿ ಬುಧವಾರವೂ ಕಾರ್ಮಿಕ ಸಂಘಟನೆಗಳಿಂದ ಸಾಂಕೇತಿಕ ಪ್ರತಿಭಟನೆ ನಡೆಯಲಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜನವರಿ 9ರ ಬುಧವಾರ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ನೀಡಿಲ್ಲ. ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ರಜೆ ನೀಡುವ ಕುರಿತು ತೀರ್ಮಾನ ಕೈಗೊಳ್ಳಬೇಕಿದೆ.
'ಖಾಸಗಿ ಶಾಲೆಗಳಿಗೆ ರಜೆ ನೀಡುವ ಕುರಿತು ಶಾಲಾ ಆಡಳಿತ ಮಂಡಳಿ ನಿರ್ಧಾರವನ್ನು ಕೈಗೊಳ್ಳಬೇಕು' ಎಂದು ಖಾಸಗಿ ಅನುದಾನ ರಹಿತ ಶಾಲೆಗಳ ರಾಜ್ಯ ಸಂಘಟನೆ ಕಾರ್ಯದರ್ಶಿ ಶಶಿಕುಮಾರ್ ಹೇಳಿದರು.
ಯಾವ ಜಿಲ್ಲೆಯಲ್ಲಿ ರಜೆ ಇಲ್ಲ : ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ಚಿಕ್ಕಮಗಳೂರು, ಬಾಗಲಕೋಟೆ, ಕಲಬುರಗಿ, ಕೋಲಾರ, ಉಡುಪಿ, ವಿಜಯಪುರ, ಚಿಕ್ಕಬಳ್ಳಾಪುರ, ಬೀದರ್, ಚಾಮರಾಜನಗರ, ಶಿವಮೊಗ್ಗ, ಹಾವೇರಿ, ಚಿತ್ರದುರ್ಗ, ಹಾಸನ, ಮೈಸೂರು, ಗದಗ, ರಾಮನಗರ, ಧಾರವಾಡ.
ಯಾವ ಜಿಲ್ಲೆಯಲ್ಲಿ ರಜೆ ಇದೆ : ರಾಯಚೂರು, ಬಳ್ಳಾರಿ
ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಜನವರಿ 9 ರಂದು ಶಾಲಾ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳು ಜನವರಿ 9 ರಂದು ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications