ಭಾರತ್ ಬಂದ್ ಕೇಂದ್ರ ಸರ್ಕಾರದ ವಿರುದ್ಧದ ಷಡ್ಯಂತ್ರ: ಯಡಿಯೂರಪ್ಪ
ಬೆಂಗಳೂರು, ಸೆಪ್ಟೆಂಬರ್ 10: ಭಾರತ್ ಬಂದ್ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ನಡೆಸಿರುವ ವ್ಯವಸ್ಥಿತ ಷಡ್ಯಂತ್ರ ಎಂದು ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
ಈ ಭಾರತ್ ಬಂದ್ ದುರುದ್ದೇಶದಿಂದ ಕೂಡಿದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ನಡೆಸಿರುವ ಪಿತೂರಿ ಇದು. ಬಂದ್ ನಡೆಸುವ ಸಲುವಾಗಿ ಸರ್ಕಾರವೇ ಶಾಲಾ-ಕಾಲೇಜುಗಳಿಗೆ ರಜೆ ನೀಡಿದೆ.
ತೈಲ ಬೆಲೆಯಲ್ಲಿ ಏಕೆ ಹೆಚ್ಚಳವಾಗಿದೆ ಎನ್ನುವುದು ಇಡೀ ಜಗತ್ತಿಗೇ ಗೊತ್ತಿದೆ. ಕೇಂದ್ರ ಸರ್ಕಾರದ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸುವ ಸಲುವಾಗಿ ಬಂದ್ ಮಾಡಲಾಗುತ್ತಿದೆ. ದೇಶದ ಜನರ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ದೂರಿದ್ದಾರೆ.

ನಿವಾಸಕ್ಕೆ ಬಿಗಿ ಭದ್ರತೆ
ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಎಲ್ಲೆಡೆ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿರುವುದರಿಂದ ಅಹಿತಕರ ಘಟನೆಗೆ ಆಸ್ಪದ ಕೊಡದಂತೆ ಎಚ್ಚರಿಕೆ ವಹಿಸಲು ಯಡಿಯೂರಪ್ಪ ಮನೆಯ ಸುತ್ತಲೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಮನೆಗೆ ಭದ್ರತೆ ಒದಗಿಸಲು ಪೊಲೀಸ್ ಸಿಬ್ಬಂದಿ ಇದ್ದರೂ, ಬಂದ್ ಕಾರಣದಿಂದ ಹೆಚ್ಚುವರಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.












Click it and Unblock the Notifications