ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬುಧವಾರ ಭಾರತ್ ಬಂದ್ : ಏನಿರುತ್ತೆ?, ಏನಿರಲ್ಲ?

|
Google Oneindia Kannada News

ಬೆಂಗಳೂರು, ಸೆ. 01 : ವಿವಿಧ ಕಾರ್ಮಿಕ ಸಂಘಟನೆಗಳು ಸೆಪ್ಟೆಂಬರ್ 2ರ ಬುಧವಾರ ಒಂದು ದಿನದ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಕರ್ನಾಟಕದಲ್ಲಿ ಸರ್ಕಾರಿ ಬಸ್ ಸೇವೆ ಸ್ಥಗಿತಗೊಳ್ಳಲಿದ್ದು, ಬೆಂಗಳೂರಿನಲ್ಲಿ ವಿವಿಧ ಆಟೋ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಿಸಿವೆ. ದೇಶಾದ್ಯಂತ 10ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಈ ಮಷ್ಕರಕ್ಕೆ ಬೆಂಬಲ ನೀಡಿವೆ.

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಆರ್ಥಿಕ ನೀತಿಗಳನ್ನು ಖಂಡಿಸಿ ಮತ್ತು ಸರ್ಕಾರದ ಉದ್ದೇಶಿತ 'ರಸ್ತೆ ಸಾರಿಗೆ ಸುರಕ್ಷತಾ ಮಸೂದೆ' ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಸೆ.2ರ ಬುಧವಾರ ಬೆಳಗ್ಗೆ 6 ಗಂಟೆಯಿಂದ ಸೆ.3ರ ಬೆಳಗ್ಗೆ 6 ಗಂಟೆಯ ತನಕ ಮುಷ್ಕರಕ್ಕೆ ಕರೆ ನೀಡಿವೆ. ಕರ್ನಾಟಕದಲ್ಲಿ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿಯ 1.20 ಲಕ್ಷ ಸಿಬ್ಬಂದಿ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. [ರಸ್ತೆ ಸುರಕ್ಷತಾ ಮಸೂದೆಯಲ್ಲೇನಿದೆ?]

ಬೆಂಗಳೂರಿನಲ್ಲಿ ವಿವಿಧ ಆಟೋ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಿದ್ದು ಆಟೋ ಸಂಚಾರದಲ್ಲಿಯೂ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಖಾಸಗಿ ಬಸ್ ಮಾಲೀಕರು, ಮ್ಯಾಕ್ಸಿ ಕ್ಯಾಬ್‌ಗಳು ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಟ್ಯಾಕ್ಸಿ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದಿನಂತೆ ಟ್ಯಾಕ್ಸಿ ಸಂಚಾರವಿರುತ್ತದೆ. ದೇಶಾದ್ಯಂತ ರೈಲು ಸೇವೆ ಎಂದಿನಂತೆ ಇರುತ್ತದೆ. [ಬೆಂಗಳೂರು ಸಿಟಿ ಟ್ಯಾಕ್ಸಿ ದೂರವಾಣಿ ಸಂಖ್ಯೆಗಳು]

ಕೇಂದ್ರ ಸರ್ಕಾರದ ಉದ್ದೇಶಿತ ರಸ್ತೆ ಸಾರಿಗೆ ಸುರಕ್ಷತಾ ಮಸೂದೆ ವಿರೋಧಿಸಿ ಏ.30ರಂದು ರಾಷ್ಟ್ರವ್ಯಾಪಿ ಬಂದ್ ನಡೆಸಲಾಗಿತ್ತು. ಈಗ ಮತ್ತೊಮ್ಮೆ ಬಂದ್‌ಗೆ ಕರೆ ನೀಡಲಾಗಿದೆ. ಬುಧವಾರ ಭಾರತ್ ಬಂದ್, ಏನಿರುತ್ತೇ ಏನಿರಲ್ಲ ನೋಡಿ....

ಬುಧವಾರದ ಬಂದ್ ಕರೆ ಕೊಟ್ಟಿದ್ದು ಏಕೆ?

ಬುಧವಾರದ ಬಂದ್ ಕರೆ ಕೊಟ್ಟಿದ್ದು ಏಕೆ?

'ರಸ್ತೆ ಸಾರಿಗೆ ಸುರಕ್ಷತಾ ಮಸೂದೆ-2014'ಯನ್ನು ವಿರೋಧಿಸಿ ಮತ್ತು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಸೆ.2ರ ಬುಧವಾರ ಬೆಳಗ್ಗೆ 6 ಗಂಟೆಯಿಂದ ಸೆ.3ರ ಬೆಳಗ್ಗೆ ಆರು ಗಂಟೆಯ ತನಕ ಬಂದ್‌ ಕರೆ ನೀಡಿವೆ. ದೇಶಾದ್ಯಂತ 10ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಕಾರ್ಮಿಕ ಸಂಘಟನೆಗಳು ತಮ್ಮ ಬೇಡಿಕೆ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿವೆ.

ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಇಲ್ಲ

ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಇಲ್ಲ

ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಕರ್ನಾಟಕ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಒಟ್ಟು 1.20 ಲಕ್ಷ ನೌಕರರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಆದ್ದರಿಂದ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಂಜೆ 5 ಗಂಟೆಯ ಬಳಿಕ ಬಸ್ ಸಂಚಾರ ಪುನಃ ಆರಂಭವಾಗಲಿದೆ ಎಂದು ಅಧಕಾರಿಗಳು ಹೇಳಿದ್ದಾರೆ.

ವಿವಿಧ ಆಟೋ ಸಂಘಟನೆಗಳ ಬೆಂಬಲ

ವಿವಿಧ ಆಟೋ ಸಂಘಟನೆಗಳ ಬೆಂಬಲ

ಬೆಂಗಳೂರಿನ ವಿವಿಧ ಆಟೋ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಿವೆ. ಆಟೋ ರಿಕ್ಷಾ ಏಕತಾ ಹೋರಾಟ ಸಮಿತಿ ವ್ಯಾಪ್ತಿಯ ಆಟೋಗಳು ಸಂಚಾರ ನಡೆಸುವುದಿಲ್ಲ ಎಂದು ಸಮಿತಿಯ ಅಧ್ಯಕ್ಷ ಎಂ.ಮಂಜುನಾಥ್ ಹೇಳಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಸಿಗೋಲ್ಲ

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಸಿಗೋಲ್ಲ

ಕರ್ನಾಟಕ ಅಕ್ಷರ ದಾಸೋಹ ನೌಕರರ ಸಂಘ ಮುಷ್ಕರಕ್ಕೆ ಬೆಂಬಲ ನೀಡಿದೆ. ಆದ್ದರಿಂದ, ಬುಧವಾರ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಸಿಗುವುದಿಲ್ಲ. ಆಶಾ ಕಾರ್ಯಕರ್ತೆಯರು ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ.

ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಒಂದು ದಿನದ ರಾಷ್ಟ್ರವ್ಯಾಪಿ ಬಂದ್ ಹಿನ್ನಲೆಯಲ್ಲಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ (ಕುಸ್ಮಾ) ಸೆ.2ರ ಬುಧವಾರ ಶಾಲೆಗಳಿಗೆ ರಜೆ ಘೋಷಿಸಿದೆ. ಬೆಂಗಳೂರು ನಗರದಲ್ಲಿ 700 ಮತ್ತು ರಾಜ್ಯಾದ್ಯಂತ 1,400 ಶಾಲೆಗಳು ಇದರ ವ್ಯಾಪ್ತಿಗೆ ಒಳಪಡುತ್ತವೆ.

ಬುಧವಾರ ಏನು ತೆರೆದಿರುತ್ತೆ?

ಬುಧವಾರ ಏನು ತೆರೆದಿರುತ್ತೆ?

ಹೋಟೆಲ್, ಚಿತ್ರಮಂದಿರ, ಮಾಲ್, ಸರ್ಕಾರಿ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಕಚೇರಿಗೆ ಬಂದವರಿಗೆ ಹೋಟೆಲ್‌ನಲ್ಲಿ ಊಟ ಸಿಗುತ್ತದೆ. ಆದರೆ, ಕಚೇರಿಗೆ ಬಸ್‌ನಲ್ಲಿ ಬರುವವರು ಬೇರೆ ವ್ಯವಸ್ಥೆ ಮಾಡಿಕೊಳ್ಳಬೇಕು.

ಅಂಚೆ ಕಚೇರಿಗಳು ತೆರೆಯುವುದಿಲ್ಲ

ಅಂಚೆ ಕಚೇರಿಗಳು ತೆರೆಯುವುದಿಲ್ಲ

ಒಂದು ದಿನದ ರಾಷ್ಟ್ರವ್ಯಾಪಿ ಬಂದ್ ಹಿನ್ನಲೆಯಲ್ಲಿ ಸೆ.2ರ ಬುಧವಾರ ಅಂಚೆ ಕಚೇರಿಗಳು ಕಾರ್ಯನಿರ್ವಹಣೆ ಮಾಡುವುದಿಲ್ಲ.

ಖಾಸಗಿ ಬಸ್ಸುಗಳು ಸಂಚರಿಸುತ್ತವೆ

ಖಾಸಗಿ ಬಸ್ಸುಗಳು ಸಂಚರಿಸುತ್ತವೆ

ಖಾಸಗಿ ಬಸ್ಸುಗಳ ಮಾಲೀಕರ ಸಂಘ ಬುಧವಾರದ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಆದ್ದರಿಂದ, ಖಾಸಗಿ ಬಸ್ಸುಗಳು ಸಂಚಾರ ನಡೆಸಲಿವೆ. ಸಂಜೆ 5 ಗಂಟೆಯ ಬಳಿಕ ಸರ್ಕಾರಿ ಬಸ್ಸುಗಳ ಸಂಚಾರವೂ ಆರಂಭವಾಗುವ ಸಾಧ್ಯತೆ ಇದೆ.

ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಸಂಚಾರವಿರುತ್ತದೆ

ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಸಂಚಾರವಿರುತ್ತದೆ

ಬುಧವಾರದ ಮುಷ್ಕರಕ್ಕೆ ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಮಾಲೀಕರ ಸಂಘ ಬೆಂಬಲ ಸೂಚಿಸಿಲ್ಲ. ಆದ್ದರಿಂದ, ಟ್ಯಾಕ್ಸಿ ಸೇವೆ ಎಂದಿನಂತೆ ಇರಲಿದೆ. ನಾವು ಮುಷ್ಕರಕ್ಕೆ ಬೆಂಬಲ ನೀಡಿಲ್ಲ ಎಂದು ಬೆಂಗಳೂರು ಟೂರಿಸ್ಟ್ ಟ್ಯಾಕ್ಸಿ ಸಂಘಟನೆಯ ಕಾರ್ಯದರ್ಶಿ ರಾಧಾಕೃಷ್ಣ ಹೊಳ್ಳ ಹೇಳಿದ್ದಾರೆ.

ಬ್ಯಾಂಕ್, ಎಲ್‌ಐಸಿ ವ್ಯವಹಾರ ಸ್ಥಗಿತ

ಬ್ಯಾಂಕ್, ಎಲ್‌ಐಸಿ ವ್ಯವಹಾರ ಸ್ಥಗಿತ

ಎಸ್‌ಬಿಐ ಮತ್ತು ಬ್ಯಾಂಕ್ ಆಫ್ ಬರೋಡಾ ಹೊರತುಪಡಿಸಿ ಉಳಿದ ಬ್ಯಾಂಕ್‌ಗಳು ಬುಧವಾರ ತೆರೆದಿರುವುದಿಲ್ಲ. ಭಾರತೀಯ ಜೀವ ವಿಮಾನಿಗಮ (ಎಲ್‌ಐಸಿ) ಕಚೇರಿಗಳು ಕಾರ್ಯ ನಿರ್ವಹಣೆ ಮಾಡುವುದಿಲ್ಲ.

ಹಾಲು, ಔಷಧಿ, ಆಸ್ಪತ್ರೆ ಸೇವೆಗಳು ಲಭ್ಯ

ಹಾಲು, ಔಷಧಿ, ಆಸ್ಪತ್ರೆ ಸೇವೆಗಳು ಲಭ್ಯ

ಸೆ.2ರ ಬುಧವಾರ ಭಾರತ್ ಬಂದ್ ಇದ್ದರೂ ಅಗತ್ಯ ವಸ್ತುಗಳಾದ ಹಾಲು, ಔಷಧಗಳು ದೊರೆಯಲಿವೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ತೆರೆದಿರುತ್ತವೆ. ಆಂಬ್ಯುಲೆನ್ಸ್ ಸೇವೆ ಲಭ್ಯವಿರುತ್ತದೆ. ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಸಾಗಣೆ ಮಾಡುವ ಲಾರಿಗಳು ಬಂದ್‌ಗೆ ಬೆಂಬಲ ನೀಡಿಲ್ಲ.

ರೈಲುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ

ರೈಲುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ

ಕೆಎಸ್ಆರ್‌ಟಿಸಿ, ಬಿಎಂಟಿಸಿ ಮತ್ತು ಆಟೋಗಳ ಸಂಚಾರ ಬುಧವಾರ ಸ್ಥಗಿತಗೊಳ್ಳಲಿದೆ. ಆದರೆ, ರೈಲುಗಳು ಎಂದಿನಂತೆ ಸಂಚಾರ ನಡೆಸಲಿವೆ. ಜನರು ತುರ್ತು ಪ್ರಯಾಣಕ್ಕಾಗಿ ರೈಲು ಮತ್ತು ಖಾಸಗಿ ಬಸ್ಸುಗಳನ್ನು ಅವಲಂಬಿಸಬಹುದು.

English summary
Another bandh will hit India on Wednesday, September 2. Nation wide bandh will be observed against NDA government's proposed Road Safety Bill, 2014. KSRTC and BMTC employees announced support for bandh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X