Get Updates
Get notified of breaking news, exclusive insights, and must-see stories!

ಭಾರತ್ ಜೋಡೋ ಯಾತ್ರೆ ಮಂಗಳವಾರವೂ ಮುಂದುವರಿಕೆ: ವದಂತಿ ನಂಬದಂತೆ ಡಿಕೆಶಿ ಸ್ಪಷ್ಟನೆ

ಬೆಂಗಳೂರು, ಅ.11: ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಮಂಗಳವಾರ (ಅ.11) ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಪಪಡಿಸಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಭಾರತ್ ಜೋಡೋ ಯಾತ್ರೆ ನಿಗದಿ ಆಗಿರುವಂತೆ ಮುಂದುವರಿಯಲಿದೆ, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ನಾಳೆ ಯಾತ್ರೆ ಸ್ಥಗಿತಗೊಳಿಸಿ ತೆರಳಲಿದ್ದಾರೆ ಎಂಬುದು ಕೇವಲ ವದಂತಿ. ಅವರು ಇಲ್ಲೇ ಇದ್ದು ಯಾತ್ರೆ ಮುಂದುವರಿಸುವರು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Bharat Jodo Yatra continues in Karnataka: DK Shivakumar clarified

ಚಿತ್ರದುರ್ಗ ಜಿಲ್ಲೆಯ ಹರ್ತಿಕೋಟೆಯಲ್ಲಿರುವ ಪಾದಯಾತ್ರೆ ತಂಡ ಮಂಗಳವಾರ ಬೆಳಗ್ಗೆ 6.30ಗೆ ಹರ್ತಿಕೋಟೆಯಿಂದ ಪ್ರಾರಂಭಿಸಿ, ಸಾಣಿಕೆರೆ ಮತ್ತ ಸಿದ್ದಾಪುರ ಮಾರ್ಗವಾಗಿ ರಾತ್ರಿ ವೇಳೆಗೆ ಚಿತ್ರದುರ್ಗ ತಲುಪಲಿದೆ.

ಮುಲಾಯಂಗೆ ಪುಷ್ಪ ನಮನ:

ಸೋಮವಾರ ನಿಧನರಾದ ಸಮಾಜವಾದಿ ಪಕ್ಷದ ಸಂಸ್ಥಾಪಕ, ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಅವರು ಚಿತ್ರದುರ್ಗದ ಹಿರಿಯೂರು ವಿಶ್ರಾಂತಿ ತಾಣದಲ್ಲಿ ಸೋಮವಾರ ಪುಷ್ಪ ನಮನ ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ, ಕೇಂದ್ರದ ಮಾಜಿ ಸಚಿವ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದರು.

"ಮುಲಾಯಂ ಸಿಂಗ್ ಯಾದವ್ ಅವರು ಒಬ್ಬ ಹುಟ್ಟು ಹೋರಾಟಗಾರ. ಜಾತ್ಯತೀತ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟು, ಶೋಷಿತರ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಿಟ್ಟರು. ಸಾಮಾನ್ಯ ಹಿನ್ನೆಲೆಯಿಂದ ಬಂದು ದೇಶದ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸುವ ಮಟ್ಟಿಗೆ ಬೆಳೆದು ನಿಂತ ನಾಯಕ ಮುಲಾಯಂ ಸಿಂಗ್ ಯಾದವ್ ಅವರು. ಅವರು ಬೇರೆ ರಾಜಕೀಯ ಪಕ್ಷಗಳ ನಾಯಕರ ಜತೆ ಉತ್ತಮ ಬಾಂಧವ್ಯ ಹಾಗೂ ಗೌರವ ಸಂಪಾದಿಸಿದ್ದು, ಅವರ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಸಮಾಜವಾದಿ ಚಿಂತನೆಗಳ ಪರ ನಿಂತಿದ್ದ ಧೀಮಂತ ನಾಯಕನ ಅಗಲಿಕೆ ಇಡೀ ದೇಶಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು, ಮಿತ್ರರು ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+