Siddaramaiah: ಚುನಾವಣೆಗಾಗಿ ಭಾರತ್‌ ಅಕ್ಕಿ ನೀಡಿದ್ರು, ಚುನಾವಣೆ ಮುಗಿದ ಮೇಲೆ ಅಕ್ಕಿ ಬಂದ್ ಮಾಡಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು, ಜುಲೈ 06: ಕೇಂದ್ರ ಸರ್ಕಾರ ಆರಂಭಿಸಿದ್ದ ʻಭಾರತ್‌ ಅಕ್ಕಿʼ ಯೋಜನೆ ಸ್ಥಗಿತಗೊಳಿಸಿದ್ದಾರೆ. ಚುನಾವಣೆಗೋಸ್ಕರ ಈ ಯೋಜನೆ ಆರಂಭಿಸಿರುವುದು ಇದರಿಂದ ಸ್ಪಷ್ಟವಾಗುತ್ತದೆ. ನಾವು ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ಕೇಳಿದಾಗ, ಭಾರತೀಯ ಆಹಾರ ನಿಗಮದಲ್ಲಿ ದಾಸ್ತಾನಿದ್ದರೂ ನೀಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದರು.

ಈ ಕುರಿತು ಶನಿವಾರ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಪಶ್ಚಿಮ ದ್ವಾರದ ಬಳಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಅಕ್ಕಿ ನೀಡದ ಕಾರಣ ನಾವು ಜನರಿಗೆ ಹೆಚ್ವುವರಿಯಾಗಿ ಹಣ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಹೇಳಿದರು.

Bharat Rice for Elections CM Siddaramaiah Criticises

ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿರುವ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್‌ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ದೇಶದಲ್ಲಿ ತೀವ್ರ ಆಹಾರದ ಕೊರತೆಯುಂಟಾಗಿ, ಬೇರೆ ದೇಶಗಳ ಮುಂದೆ ಬೇಡಬೇಕಾದ ಪರಿಸ್ಥಿತಿ ಇತ್ತು. ಹೊಸ ತಳಿಗಳ ಅಭಿವೃದ್ದಿ ಸೇರಿದಂತೆ ಹಲವು ಕ್ರಮಗಳ ಮೂಲಕ ಜಗಜೀವನರಾಂ ಅವರು ಆಹಾರ ಭದ್ರತೆಯನ್ನು ಒದಗಿಸಿದರು.

ಜಗಜೀವನರಾಂ ಅವರು ರಕ್ಷಣಾ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದರೂ, ದಕ್ಷ ಆಡಳಿತ ನೀಡಿದ್ದಾರೆ. ಕಾರ್ಮಿಕರ ಪರವಾಗಿ ಅನೇಕ ಕಾಯ್ದೆಗಳನ್ನು ರಚಿಸಿದ ಕೀರ್ತಿ ಅವರದು. ಬಡವರು, ರೈತರು, ಕೂಲಿ ಕಾರ್ಮಿಕರ ಪರವಾಗಿ ನಿರಂತರವಾಗಿ ಅವರು ಹೋರಾಟ ನಡೆಸಿದ್ದಾರೆ. ಅವರು ತೋರಿದ ಹಾದಿಯಲ್ಲಿ ನಡೆಯುವ ಸಂಕಲ್ಪವನ್ನು ಈ ದಿನ ನಾವು ಮಾಡಬೇಕಾಗಿದೆ ಎಂದರು.

ಭವನ ಲೋಕಾರ್ಪಣೆ: ಸುಮಾರು 3ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ.ಬಾಬು ಜಗಜೀವನರಾಂ ಭವನವನ್ನು ಜುಲೈ 13ರಂದು ಲೋಕಾರ್ಪಣೆ ಮಾಡಲಾಗುವುದು. ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಈ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿತ್ತು. ಅರ್ಹ ಅಭ್ಯರ್ಥಿಗಳಿಗೆ ವಿಜ್ಞಾನ, ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಸಹ ಈ ಭವನದಲ್ಲಿ ಒದಗಿಸಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+