'ಭಾಸ್ಕರರಾವ್ ರಾಜೀನಾಮೆ ಅಂಗೀಕರಿಸಬಾರದಿತ್ತು'
ಬೆಂಗಳೂರು, ಡಿಸೆಂಬರ್ 08 : ಕೊನೆಗೂ ಕರ್ನಾಟಕದ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದ ನಂತರ ಭಾಸ್ಕರರಾವ್ ರಾಜೀನಾಮೆಗೆ ಒತ್ತಾಯ ಕೇಳಿಬಂದಿತ್ತು.
ಡಿಸೆಂಬರ್ 7ರಂದು ವೈ.ಭಾಸ್ಕರರಾವ್ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದರು. ಮಂಗಳವಾರ ರಾಜ್ಯಪಾಲರು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ ಎಂದು ರಾಜಭವನ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. [ಭಾಸ್ಕರರಾವ್ ರಾಜೀನಾಮೆ]

ಒನ್ ಇಂಡಿಯಾ ಜೊತೆ ಮಾತನಾಡಿದ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಅವರು, 'ರಾಜ್ಯಪಾಲರು ವೈ.ಭಾಸ್ಕರರಾವ್ ರಾಜೀನಾಮೆಯನ್ನು ಅಂಗೀಕರಿಸಬಾರದಿತ್ತು. ಈ ಸಮಯದಲ್ಲಿ ರಾಜೀನಾಮೆ ನೀಡಿ ಭಾಸ್ಕರರಾವ್ ಕಾನೂನು ಪ್ರಕ್ರಿಯೆಗಳಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ' ಎಂದು ದೂರಿದರು. [ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ಸಂತೋಷ್ ಹೆಗ್ಡೆ ಸಂದರ್ಶನ]
'ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಲೋಕಾಯುಕ್ತ ಪದಚ್ಯುತಿ ನಿರ್ಣಯವನ್ನು ಮಂಡನೆ ಮಾಡಿ ಸದನದ ಒಪ್ಪಿಗೆ ಪಡೆಯಲಾಗಿದೆ. ಹೈಕೋರ್ಟ್ ಈ ನಿರ್ಣಯದ ಆಧಾರದ ಮೇಲೆ ತನಿಖೆಗೆ ಸಮಿತಿಯನ್ನು ರಚನೆ ಮಾಡಬೇಕಾಗಿದೆ. ಇಂತಹ ಸಮುದಲ್ಲಿ ಕಾನೂನು ಪ್ರಕ್ರಿಯೆಗಳಿಂದ ತಪ್ಪಿಸಿಕೊಳ್ಳಲು ರಾಜೀನಾಮೆ ನೀಡಿದ್ದಾರೆ' ಎಂದು ಸಂತೋಷ್ ಹೆಗ್ಡೆ ಹೇಳಿದ್ದಾರೆ. [ಕರ್ನಾಟಕ ಲೋಕಾಯುಕ್ತದಲ್ಲಿ ಇದೇನಿದು ಹಗರಣ?]
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications