ನ್ಯಾ.ಭಾಸ್ಕರರಾವ್ ಲೋಕಾಯುಕ್ತ ಕೋರ್ಟ್‌ಗೆ ಗೈರು

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 30 : ನ್ಯಾಯಮೂರ್ತಿ ವೈ.ಭಾಸ್ಕರರಾವ್ ಅವರು ಲೋಕಾಯುಕ್ತ ಕೋರ್ಟ್‌ಗೆ ಗೈರು ಹಾಜರಾಗಿದ್ದಾರೆ. ಸೆಪ್ಟೆಂಬರ್ 23ರಂದು ಕೋರ್ಟ್‌ಗೆ ಹಾಜರಾಗಬೇಕು ಎಂದು ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ.

ಕರ್ನಾಟಕ ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಭಾಸ್ಕರರಾವ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ, ಇಂದು ಅವರು ಅನಾರೋಗ್ಯದ ನೆಪವೊಡ್ಡಿ ಕೋರ್ಟ್‌ಗೆ ಗೈರು ಹಾಜರಾದರು. [ಭಾಸ್ಕರರಾವ್ ಗೆ ಸಮನ್ಸ್]

Bhaskar Rao to appear before Lokayukta court on September 23

ನ್ಯಾ.ಭಾಸ್ಕರರಾವ್ ಅವರ ಪರ ವಕೀಲರು ಅನಾರೋಗ್ಯದ ಕಾರಣದಿಂದಾಗಿ ಹಾಜರಾತಿಗೆ ವಿನಾಯಿತಿ ನೀಡಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಕೋರ್ಟ್ ಸೆ.23ರಂದು ಹಾಜರಾಗಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.[ಲೋಕಾಯುಕ್ತ ಕಚೇರಿ ಕೆಲಸದ ಅವಧಿ ವಿಸ್ತರಣೆ]

ಕರ್ನಾಟಕ ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಸ್ಕರರಾವ್ ಅವರು 7ನೇ ಆರೋಪಿ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಈಗಾಗಲೇ ಭಾಸ್ಕರರಾವ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಆದ್ದರಿಂದ, ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.[ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ಭಾಸ್ಕರರಾವ್ 7ನೇ ಆರೋಪಿ]

ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಸ್ಕರರಾವ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರು ಜುಲೈ ತಿಂಗಳಿನಲ್ಲಿ ಒಪ್ಪಿಗೆ ನೀಡಿದ್ದರು. ಹಗರಣಕ್ಕೆ ಸಂಬಂಧಿಸಿದಂತೆ ಅಶ್ವಿನ್ ರಾವ್ ಅವರನ್ನು ಎಸ್‌ಐಟಿ ಬಂಧಿಸಿದ ಬಳಿಕ ಲೋಕಾಯುಕ್ತ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka Lokayukta court directed the Justice Y.Bhaskar Rao to appear before court on September 23, 2016. On August 30th he cannot appear in court due to health problems.
Please Wait while comments are loading...