ಭಾಸ್ಕರ ಪರ್ವ: ಜನವರಿ 31ರಂದು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ 'ಭಾಸ್ಕರ ಪರ್ವ', ಗುರುಗಳಿಗೆ ವಿಶೇಷ ಬೀಳ್ಕೊಡುಗೆ
ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸುದೀರ್ಘ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಲ್ಲಿ ಅನೇಕ ಪತ್ರಿಕೋದ್ಯಮ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿರುವ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ್ ಹೆಗಡೆ ಅವರು ಜನವರಿ 31ರಂದು ನಿವೃತ್ತರಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ವಿದ್ಯಾರ್ಥಿಗಳು ವಿಶೇಷ 'ಭಾಸ್ಕರ ಪರ್ವ - ಮಾಧ್ಯಮ ಗುರುವಿಗೆ ಅಭಿನಂದನೆ' ಎಂಬ ವಿಶಿಷ್ಟ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈ ಮೂಲಕ ಸನ್ಮಾನಿಸಿ, ಗೌರವಿಸಲು ಯೋಜಿಸಲಾಗಿದೆ.
ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿ ಬಳಗ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ ಈ 'ಭಾಸ್ಕರ ಪರ್ವ'; ಸಮಾರಂಭ ಶನಿವಾರ (ಜ.31) ಬೆಳಗ್ಗೆ 10 ಗಂಟೆಗೆ ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ಜರುಗಲಿದೆ.

ಸಮಾರಂಭದ ಉದ್ಘಾಟನೆ ಹಾಗೂ ಅಭಿನಂದನಾ ಗ್ರಂಥದ ಬಿಡುಗಡೆಯನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಎಸ್. ಅವರು ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಕ್ಷ್ಯ ಚಿತ್ರದ ಬಿಡುಗಡೆಯನ್ನು ಕ್ಷೇಮವನ, ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕಿ ಶ್ರೀಮತಿ ಶ್ರದ್ಧಾ ಅಮಿತ್ ಅವರು ಮಾಡಲಿದ್ದಾರೆ.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ.ಪಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಉಜಿರೆ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರು ಉಪಸ್ಥಿತರಿರುವರು. ಇದೇ ವೇಳೆ ಇವರಿಂದ ಕಲಿತು ಇಂದು ಪತ್ರಿಕೋದ್ಯಮ ಹಾಗೂ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ, ಇತರ ವಲಯಗಳಲ್ಲಿ ತೊಡಗಿರುವ ಹಳೇಯ ವಿದ್ಯಾರ್ಥಿಗಳು ಕಾರ್ಯಕ್ರಮ ಆಗಮಿಸುವ ನಿರೀಕ್ಷೆ ಇದೆ.












Click it and Unblock the Notifications