ಭವಾನಿಪುರ ಉಪ ಚುನಾವಣೆ; ನಿಜವಾಯ್ತು ಎಚ್‌ಡಿಕೆ ಭವಿಷ್ಯ!

ಬೆಂಗಳೂರು, ಅಕ್ಟೋಬರ್ 03; ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಮಮತಾ ಬ್ಯಾನರ್ಜಿ ಅಭಿನಂದಿಸಿದ್ದಾರೆ. ಸೆಪ್ಟೆಂಬರ್ 22ರಂದು ಕುಮಾರಸ್ವಾಮಿ ಭವಾನಿಪುರ ಉಪ ಚುನಾವಣೆ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದ್ದರು. ಇಂದು ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿಯ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ 25 ಸಾವಿರ ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

"ಇಡೀ ಭಾರತದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರೀ ಅಂತರದ ಗೆಲವು ಸಾಧಿಸುವುದು ಖಚಿತ" ಎಂದು ಹೇಳಿದ್ದರು. ಕ್ಷೇತ್ರದಲ್ಲಿ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್, ಸಿಪಿಐ(ಎಂ) ನಿಂದ ಶ್ರೀಜಿಬ್ ಬಿಸ್ವಾಸ್ ಮಮತಾ ಬ್ಯಾನರ್ಜಿ ಎದುರಾಳಿಗಳಾಗಿದ್ದರು.

ಭಾನುವಾರ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. "ಭವಾನಿಪುರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಭೂತಪೂರ್ವ ಮತ್ತು ಐತಿಹಾಸಿಕ ಜಯ ಸಾಧಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಭಂಡತನ ತೋರಿತು

ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಗೆಲುವಿನ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, "ಕಳೆದ ಚುನಾವಣೆಯಲ್ಲಿ ಜನಾದೇಶವು ಮಮತಾ ಅವರ ಪರವಾಗಿತ್ತು. ಆದರೂ ಬಿಜೆಪಿ ಭಂಡತನ ತೋರಿತು. ಭವಾನಿಪುರದಲ್ಲಿ ಮಮತಾ ಅವರು ಭಾರೀ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಸ್ವತಃ ಬಿಜೆಪಿ ಮುಖಂಡ ರಾಜೀವ್ ಬ್ಯಾನರ್ಜಿ ಅವರೇ ಹೇಳಿದ್ದರು. ಅವರ ಭವಿಷ್ಯ ಈಗ ನಿಜವಾಗಿದೆ" ಎಂದು ಹೇಳಿದ್ದಾರೆ.

ಬಿಜೆಪಿ ಘನತೆ ಉಳಿಯುತ್ತಿತ್ತು

"ಬಿಜೆಪಿ ರಾಜಕೀಯ ಸಂಕುಚಿತ ಮನೋಭಾವ ತೊರೆದು ಮಮತಾ ಅವರ ಅವಿರೋಧ ಆಯ್ಕೆಗೆ ಸಹಕರಿಸಬೇಕಿತ್ತು. ಹಾಗೆ ಮಾಡಿದ್ದಿದ್ದರೆ ರಾಷ್ಟ್ರೀಯ ಪಕ್ಷವಾಗಿ ಆ ಪಕ್ಷದ ಘನತೆ ಉಳಿಯುತ್ತಿತ್ತು ಎನ್ನುವುದು ನನ್ನ ಅಭಿಪ್ರಾಯ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

"ಭವಾನಿಪುರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಭೂತಪೂರ್ವ ಮತ್ತು ಐತಿಹಾಸಿಕ ಜಯ ಸಾಧಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅಭ್ಯರ್ಥಿ ಹಾಕುವುದು ಬೇಡಿತ್ತು

ಸೆಪ್ಟೆಂಬರ್ 22ರಂದು ಟ್ವೀಟ್ ಮಾಡಿದ್ದ ಕುಮಾರಸ್ವಾಮಿ, "ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸ್ವತಃ ಆ ಪಕ್ಷದ ನಾಯಕ ರಾಜೀವ್ ಬ್ಯಾನರ್ಜಿ ಹೇಳಿರುವುದರಲ್ಲಿ ಅಚ್ಚರಿಯೇನು ಇಲ್ಲ. ಇದು ಅಪ್ಪಟ ಸತ್ಯ. ಮಮತಾ ಬ್ಯಾನರ್ಜಿ ಅವರು ಕೇವಲ ನಾಯಕಿಯಲ್ಲ, ಸಮಸ್ತ ಬಂಗಾಳಿಗರ ನಾಡಿಮಿಡಿತ. ಈ ಸತ್ಯವನ್ನು ಅರಿಯುವಲ್ಲಿ ಬಿಜೆಪಿ ಸೋತಿದೆ" ಎಂದು ಹೇಳಿದ್ದರು.

ಇತಿಹಾಸ ಸೃಷ್ಟಿಯಾಗಲಿದೆ ಎಂದು ಹೇಳಿದ್ದರು

"ಇತಿಹಾಸ ಸೃಷ್ಟಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಮತಾ ಅವರು ಕಳೆದ ಏಪ್ರಿಲ್‌ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 294 ವಿಧಾಸಭೆ ಕ್ಷೇತ್ರಗಳ ಪೈಕಿ 214 ಸ್ಥಾನಗಳನ್ನು ಜಯಿಸಿದ್ದರು. ಆಗಲೇ ಅವರು ಚರಿತ್ರೆ ಬರೆದಿದ್ದರು. ಈಗ ಹೊಸ ಚರಿತ್ರೆ ಸೃಷ್ಟಿಗೆ ಅಣಿಯಾಗಿದ್ದಾರೆ" ಎಂದು ಕುಮಾರಸ್ವಾಮಿ ಉಪ ಚುನಾವಣೆ ಬಗ್ಗೆ ಹೇಳಿದ್ದರು.

Recommended Video

    ಇವನ ಆಟದಿಂದ RCBಗೆ ಖುಲಾಯಿಸ್ತು ಲಕ್: ಈ ಸಲ RCB ಕಪ್ ಗೆಲ್ಲೋದು ಪಕ್ಕಾ | Oneindia Kannada
    ಚರಿತ್ರೆಯನ್ನು ಬರೆದಿದ್ದರು

    ಚರಿತ್ರೆಯನ್ನು ಬರೆದಿದ್ದರು

    "ಇತಿಹಾಸ ಸೃಷ್ಟಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಮತಾ ಅವರು ಕಳೆದ ಏಪ್ರಿಲ್‌ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 294 ವಿಧಾಸಭೆ ಕ್ಷೇತ್ರಗಳ ಪೈಕಿ 214 ಸ್ಥಾನಗಳನ್ನು ಜಯಿಸಿದ್ದರು. ಆಗಲೇ ಅವರು ಚರಿತ್ರೆ ಬರೆದಿದ್ದರು. ಈಗ ಹೊಸ ಚರಿತ್ರೆ ಸೃಷ್ಟಿಗೆ ಅಣಿಯಾಗಿದ್ದಾರೆ" ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ತಿಳಿಸಿದ್ದರು.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+