Bidadi: ನೈಸ್ - ಬಿಡದಿ ಟೌನ್ ಶಿಪ್ ಯೋಜನೆಗೆ ಸಹಿ ಹಾಕಿದ್ದು ಯಾರು ಎನ್ನುವ ಹೆಸರು ರಿವೀಲ್ ಮಾಡಿದ ಡಿ.ಕೆ ಶಿವಕುಮಾರ್!

Bidadi: ನೈಸ್ - ಬಿಡದಿ ಟೌನ್ ಶಿಪ್ ಯೋಜನೆಗೆ ಸಹಿ ಹಾಕಿದ್ದು ಯಾರು ಎನ್ನುವ ಹೆಸರನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಿವೀಲ್ ಮಾಡಿದ್ದಾರೆ. ಬಿಡದಿ ಟೌನ್ ಶಿಪ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ. ತಮ್ಮ ಮನೆಯ ಹುಡುಗನ (ನಿಖಿಲ್ ಕುಮಾರಸ್ವಾಮಿ) ರಾಜಕೀಯ ಭವಿಷ್ಯಕ್ಕಾಗಿ ಮಾಡುತ್ತಿರುವ ಹೋರಾಟ ಇದು ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅವರು ವ್ಯಂಗ್ಯವಾಡಿದ್ದಾರೆ.

ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಮಾಡುತ್ತಿರುವ ಪಾದಯಾತ್ರೆಯಲ್ಲಿ ದೇವೇಗೌಡರು ಭಾಗಿಯಾಗಿದ್ದಾರೆಯೇ ಎಂದು ಹೇಳಿದಾಗ "ಬೇರೆ ಕ್ಷೇತ್ರದಲ್ಲಿರುವ ಪಕ್ಷದ ಕಾರ್ಯಕರ್ತರನ್ನು ಕರೆದುಕೊಂಡು ಬಂದು ಪಾದಯಾತ್ರೆ ಕೈಗೊಂಡಿದ್ದಾರೆ. ಹೋರಾಟ ಮತ್ತು ಪ್ರತಿಭಟನೆ ಪ್ರಜಾಪ್ರಭುತ್ವದಲ್ಲಿ ಅವರಿಗಿರುವ ಹಕ್ಕು.ಅದನ್ನು ನಾನು ಬೇಡ ಎನ್ನುವುದಿಲ್ಲ" ಎಂದರು.

Bidadi

ಮುಂದುವರಿದು ಬಿಜೆಪಿ - ಜೆಡಿಎಸ್ ಪಕ್ಷದವರು ಮಾಡಿದ ಯೋಜನೆ ನಾವು ಮುಂದುವರಿಸಿದ್ದೇವೆ. ಅವರು 25 ಲಕ್ಷ ಪರಿಹಾರ ನೀಡುತ್ತೇವೆ ಎಂದಿದ್ದರು. ನಾವು 2.50 ಕೋಟಿಯಿಂದ 3 ಕೋಟಿ ರೂ.ವರೆಗೂ ಪರಿಹಾರ ನೀಡುತ್ತಿದ್ದೇವೆ ಎಂದು ವಿವರಿಸಿದರು.

ನೈಸ್ ಹಾಗೂ ಬಿಡದಿ ಟೌನ್ ಶಿಪ್ ಯೋಜನೆಗೆ ಸಹಿ ಹಾಕಿದ್ದೇ ಅವರು!

ಕರ್ನಾಟಕದಲ್ಲಿ ಕಳೆದ ಮೂರು ನಾಲ್ಕು ತಿಂಗಳಿನಿಂದಲೂ ನೈಸ್ - ಬಿಡದಿ ಟೌನ್ ಶಿಪ್ ಯೋಜನೆಯು ವಿವಾದ ಸ್ವರೂಪವನ್ನು ಪಡೆದುಕೊಂಡಿದೆ. ನೈಸ್ ಮತ್ತು ಬಿಡದಿ ಯೋಜನೆ ಒಂದೇ ರೀತಿಯ ಯೋಜನೆ ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್ ಅವರು, ಅವರೆಡೂ ಯೋಜನೆಗಳಿಗೆ ಅವರೇ ಸಹಿ ಹಾಕಿದ್ದು ಅವರೇ. ನೈಸ್ ಯೋಜನೆ ಮಾಡಿದವರು ಯಾರು? ಅವರೇ ಮಾಡಿದ್ದು. ಆದರೆ ಅದರಿಂದ ಒಳ್ಳೇದಾಗಿದೆ. ರಸ್ತೆ ಆಗಿರುವುದರಿಂದ ಬೆಂಗಳೂರು ಇವತ್ತು ಉಳಿದುಕೊಂಡಿದೆ. ಅವರು ಮಾಡಿದ್ದು ತಪ್ಪು ಎಂದಲ್ಲ. ಆದರೆ ಅದರಲ್ಲಿ ಅವರ ಸ್ವಾರ್ಥವಿದೆ. ಅದನ್ನೆಲ್ಲಾ ಸಮಯ ಬಂದಾಗ ಮಾತನಾಡುವೆ ಎಂದಷ್ಟೇ ಪ್ರತಿಕ್ರಿಯೆ ನೀಡಿದ್ದಾರೆ.

Bidadi: ಶೀಘ್ರದಲ್ಲೇ ಖಾತೆ ಹಂಚಿಕೆ

ಇನ್ನು ಕರ್ನಾಟಕದಲ್ಲಿ ಸಚಿವರಿಗೆ ಖಾತೆ ಹಂಚಿಕೆ ವಿಚಾರವು ಕಗ್ಗಂಟಾಗಿ ಉಳಿದಿದೆ. ಹೊಸ ಸರ್ಕಾರ ರಚನೆಯಾಗಿ ಸಚಿವರ ಪ್ರಮಾಣ ವಚನ ಸ್ವೀಕರಿಸಿದರೂ, ಸಹ ಇನ್ನೂ ಯಾವುದೇ ಹೊಸ ಸಚಿವರಿಗೆ ಖಾತೆ ಹಂಚಿಕೆ ಆಗಿಲ್ಲ. ಈ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಶನಿವಾರ ಸಂಜೆ ದೆಹಲಿಯಲ್ಲಿ ವರಿಷ್ಠರೊಂದಿಗೆ ಚರ್ಚೆ ಮಾಡಿ ಬಂದಿದ್ದೇನೆ. ಬಹುಶಃ ಇಂದು ಬಗೆಹರಿಯಲಿದೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+