ಬಿಡದಿ ಟೌನ್‌ಶಿಪ್‌ ವಿರುದ್ಧದ ಪಾದಯಾತ್ರೆಗೆ ಸರ್ಕಾರ ತಡೆ: ಗುಡುಗಿದ ದೇವೇಗೌಡ, ಮತ್ತೆ ಹೋರಾಟ!

ಹಾಸನ: ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ನಡೆಯುತ್ತಿದ್ದ ಪಾದಯಾತ್ರೆಗೆ ರಾಜ್ಯ ಸರ್ಕಾರ ತಡೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಪಾದಯಾತ್ರೆ ತಡೆದ ಸರ್ಕಾರದ ಕ್ರಮಕ್ಕೆ ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಡದಿ ಟೌನ್‌ಶಿಪ್‌ ಯೋಜನೆಯಿಂದ ಸ್ಥಳೀಯ ರೈತರು ಹಾಗೂ ಭೂಮಾಲೀಕರಿಗೆ ತೊಂದರೆಯಾಗಲಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜೆಡಿಎಸ್‌ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ದೇವೇಗೌಡರು ಸರ್ಕಾರದ ಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಡದಿ ಟೌನ್‌ಶಿಪ್‌ ವಿರುದ್ಧದ ಹೋರಾಟವನ್ನು ಮುಂದುವರಿಸುವ ಸುಳಿವು ನೀಡಿದ್ದಾರೆ.

Bidadi Township Protest Halted by Karnataka Government Deve Gowda Warns of Fresh Fight

ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಬಿಡದಿ ಟೌನ್‌ಶಿಪ್ ಪಾದಯಾತ್ರೆಯನ್ನು ಪೊಲೀಸರ ಮೂಲಕ ಸರ್ಕಾರ ತಡೆಯೊಡ್ಡಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅತ್ಯಂತ ಹೇಯ ಕೃತ್ಯ ಎಸಗಲು ಮುಂದಾಗಿದೆ ಎಂದು ದೂರಿದರು. ನಾನು ಪೊಲೀಸ್ ಅಧಿಕಾರಿಗಳ ಬಗ್ಗೆ ಮಾತನಾಡಲ್ಲ. ಭಾನುವಾರ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಭೂಮಿ ನೀಡುವುದಕ್ಕೆ ಯಾರಿಗೂ ಬಲವಂತ ಇಲ್ಲ ಎಂದಿದ್ದಾರೆ. ಹಾಗಿದ್ದ ಮೇಲೆ ಪಾದಯಾತ್ರೆಯನ್ನು ಯಾಕೆ ತಡೆದರು ಎಂದು ಪ್ರಶ್ನಿಸಿದದರು.

ಇದು ನಿಗೂಢ ಪ್ರಶ್ನೆ. ಇಂದು ಸುಮಾರು 35-40 ಸಾವಿರ ಖಾಲಿ ನಿವೇಶನಗಳು ಬಿಡಿಎ ವ್ಯಾಪ್ತಿಯಲ್ಲಿವೆ. ಅವುಗಳನ್ನು ಖರೀದಿ ಮಾಡುವವರು ಇಲ್ಲ. ಹೀಗಿರುವಾಗ ಯಾರು ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿದ್ದಾರೆಯೋ ಅವರಿಗೆ ತೊಂದರೆ ಕೊಡುವುದು, ಅವರನ್ನು ಬೀದಿ ಪಾಲು ಮಾಡುವುದು ಎಷ್ಟು ಸರಿ? ಯಾರಿಗಾಗಿ ಈ ಟೌನ್‌ಶಿಪ್ ಮಾಡುತ್ತಿದ್ದೀರಿ ಎಂದು ಆಕ್ರೋಶ ಹೊರ ಹಾಕಿದರು.

ಹೋರಾಟ ಕೇವಲ ಒಕ್ಕಲಿಗರಿಗಾಗಿ ಅಲ್ಲ, ಸಾಕಷ್ಟು ಹಿಂದುಳಿದ ಸಣ್ಣ ಸಮುದಾಯಗಳಿವೆ. ಅವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಆಗಬಾರದು ಎಂದ ಅವರು, ಸರ್ಕಾರದ ಕಡೆಯಿಂದ ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆ. ನಾಳೆ ಬೆಂಗಳೂರಿಗೆ ಹೊಗ್ತೇನೆ. ನಿಖಿಲ್ ಕುಮಾರಸ್ವಾಮಿ ಹಾಗೂ ನಮ್ಮ ಪಕ್ಷದ ಇತರ ನಾಯಕರಿಂದ ಮಾಹಿತಿ ಪಡೆಯುತ್ತೇನೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಗಸ್ಟ್ 18ರಂದು ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಅಂದು ಎಲ್ಲಾ ವಿಚಾರಗಳನ್ನು ಮಾತನಾಡುತ್ತೇನೆ ಎಂದು ಗುಡುಗಿದರು.

ಈ ಹೋರಾಟದಿಂದ ಹಿಂದಿರುವ ಪ್ರಶ್ನೆ ಇಲ್ಲ. ರಾಜ್ಯ ಸರ್ಕಾರ ರೈತ ವಿರೋಧಿಯಾದ ಈ ಯೋಜನೆಯನ್ನು ಕೈಬಿಡಬೇಕು. ಫ್ರೀಡಂ ಪಾರ್ಕ್‌ನಲ್ಲಿ ಸಹಸ್ರಾರು ಕಾರ್ಯಕ್ರಮ ಮಾಡಿದ್ದಾರೆ, ನಾನೇ ಮಾಡಿದ್ದೇನೆ.
ಈ ಸರ್ಕಾರದವರು ಏನು ನಿರ್ಧಾರ ಮಾಡುತ್ತಾರೋ, ಅದನ್ನು ನೋಡಿಕೊಂಡು ಆ ನಂತರ ನಾವು ತೀರ್ಮಾನ ಮಾಡ್ತೇವೆ ಎಂದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅವರು ಹೇಳಿದರು.

ಮೂರು ವರ್ಷ ನೀವೇ ಡಿಸಿಎಂ ಆಗಿರಲಿಲ್ಲವೇ? ಬೆಂಗಳೂರನ್ನು ಐದು ಕಾರ್ಪೊರೇಷನ್ ಮಾಡಿದ್ದು ನೀವೇ ಅಲ್ಲವೇ? ಸಿಎಂ ಆಗಿದ್ದ ಸಿದ್ದರಾಮಯ್ಯ ಅವರನ್ನು ಇಳಿಸಿ ಒಂದೇ ತಿಂಗಳಿಗೆ ಈ ಪ್ರಾಜೆಕ್ಟ್ ಯಾಕೆ ಮಾಡುತ್ತಿದ್ದೀರಿ ಎಂದು ಮಾಜಿ ಪ್ರಧಾನಿಗಳು ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿದರು. ದೆಹಲಿ ನಾಯಕರಿಗೆ ಕೊಟ್ಟ ಮಾತಿನಂತೆ ತರಾತುರಿಯಲ್ಲಿ ಈ ಯೋಜನೆ ಮಾಡಲು ಹೊರಟಿದ್ದೀರಿ ಆರೋಪಿಸಿದ ಅವರು; ಏನೇ ಆಗಲಿ, ಬಡವರ ಪರವಾಗಿ ನಾವು ಈ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+