ಬೀದರ್‌ನಲ್ಲಿ ಅನುಮಾನಾಸ್ಪದ ವಸ್ತು ಸ್ಟೋಟ: ಶಾಲಾ ಮಕ್ಕಳಿಗೆ ಗಂಭೀರ ಗಾಯ
ಬೀದರ್ : ಬೀದರ್ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಅನುಮಾನಾಸ್ಪದ ವಸ್ತುವೊಂದು ಸ್ಪೋಟಗೊಂಡಿದೆ. ನಿಗೂಢ ವಸ್ತು ಸ್ಪೋಟದಿಂದಾಗಿ ಶಾಳೆಗೆ ಹೊರಟಿದ್ದ 6 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಮೊಳಕೆರ ಗ್ರಾಮದಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡ ಪರಿಣಾಯ ಶಾಲೆಗೆ ತೆರಳುತ್ತಿದ್ದ ಆರು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿವೆ.
ಇನ್ನೂ ಈ ಅನುಮಾನಾಸ್ಪ ವಸ್ತುವಿನ ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡ ಶಾಲಾ ಮಕ್ಕಳನ್ನ ಹೈದರಾಬಾದ್ ಗೆ ಶಿಫ್ಟ್ ಮಾಡಲಾಗಿದ್ದು, ಮೊಳಗಿ ಮಾರಾಯ ದೇಗುಲಕ್ಕೆ ಹೋಗುವಾಗ ರಸ್ತೆಯಲ್ಲಿ ಒಂದು ಘಟನೆ ಸಂಭವಿಸಿದೆ. ಇನ್ನೂ ಈ ಘಟನ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಮನಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿನಲ್ಲಿ ಇದು ಎರಡನೇ ಬಾರಿ ಸ್ಪೋಟಗೊಂಡಿದ್ದು, ಈ ಸ್ಪೋಟದಿಂದಾಗಿ ಗ್ರಾಮಸ್ಥರಲ್ಲಿ ಹೆಚ್ಚಿನ ಆತಂಕ ಸೃಷ್ಟಿಯಾಗಿದೆ.

ಇನ್ನೂ ಸ್ಪೋಟದಲ್ಲಿ ಪರಿಜಾರ್(8), ಅಜೀಜ್(5), ಬುಶ್ರಾ(4)ಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಮಕ್ಕಳಿಗೆ ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.ಅನ್ವರ್ ಸಾಬ್(18) ಮತ್ತು ಜಬ್ಬಾರ್ ಸಾಬ್(65) ಎಂಬ ಯುವಕರಿಗೆ ತೀವ್ರ ಗಾಯಗಳಾಗಿದ್ದು,ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದ್ರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ.ಸ್ಫೋಟಕ್ಕೆ ಕಾರಣವಾದ ವಸ್ತುವಿನ ಮಾದರಿಗಳನ್ನು ಸಂಗ್ರಹಿಸಲು ಶೀಘ್ರದಲ್ಲೇ ಸೋಕೋ ತಂಡವನ್ನು ಸ್ಥಳಕ್ಕೆ ಕರೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಹುಮನಾಬಾದ್ ಸ್ಫೋಟ: ತನಿಖೆಗೆ ಈಶ್ವರ ಖಂಡ್ರೆ ಆದೇಶ
ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ, ತನಿಖೆಗೆ ಆದೇಶ ನೀಡಿದ್ದಾರೆ.
ಕೂಡಲೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಮತ್ತು ಚಿಕಿತ್ಸಾವೆಚ್ಚ ಭರಿಸಲು ಜಿಲ್ಲಾಡಳಿತಕ್ಕೆ ಸೂಚಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸ್ಫೋಟಕ ಪರೀಕ್ಷಾ ತಜ್ಞರನ್ನು ಸ್ಥಳಕ್ಕೆ ಕಳುಹಿಸಿ ಸ್ಫೋಟ ಸ್ಥಳದಲ್ಲಿ ಮಾದರಿ ಸಂಗ್ರಹಿಸಿ ತನಿಖೆ ಮಾಡಲು ಆದೇಶಿಸಿದ್ದಾರೆ. ಇನ್ನೂ ಈ ಸ್ಫೋಟಕ್ಕೆ ಕಾರಣವೇನು? ಸ್ಫೋಟಕ್ಕೆ ಬಳಕೆಯಾಗಿರುವ ವಸ್ತು ಯಾವುದು, ಆ ಸ್ಫೋಟಕ ವಸ್ತು ಅಲ್ಲಿಗೆ ಹೇಗೆ ಬಂತು, ಯಾವ ಉದ್ದೇಶಕ್ಕೆ ಅದು ಬಳಕೆಯಾಗುತ್ತಿದ್ದು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಿ, ಸ್ಫೋಟಕ್ಕೆ ಕಾರಣರಾದವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲು ಈಶ್ವರ ಖಂಡ್ರೆ ಸೂಚಿಸಿದ್ದಾರೆ.












Click it and Unblock the Notifications