ಬೀದರ್: ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ ಆರೋಪ: ಸಾವಿರಾರು ಮುಸ್ಲಿಮರಿಂದ ಬೃಹತ್ ಪ್ರತಿಭಟನೆ, ಕೋಮು ಸಂಘರ್ಷ
ಬೀದರ್: ಬಸವಕಲ್ಯಾಣದಲ್ಲಿ ಕೋಮುಸಂಘರ್ಷ ಶುರುವಾಗಿದೆ. ಬಸವಕಲ್ಯಾಣದಲ್ಲಿ ಮಾರ್ಚ್ 3ರ ತಡರಾತ್ರಿ ನಡೆದಿರುವ ಬೆಳವಣಿಗೆಯೂ ಈ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವುದಕ್ಕೆ ಕಾರಣವಾಗಿದೆ. ಮುಸ್ಲಿಂ ಮೌಲ್ವಿಗಳ ಮೇಲೆ ಹಿಂದೂ ಯುವಕರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪದ ಬೆನ್ನಲ್ಲೇ ಮುಸ್ಲಿಂ ಸಮುದಾಯದ ಸಾವಿರಾರು ಜನ ಒಂದೆಡೆ ಸೇರಿದ್ದಾರೆ. ಈ ಘಟನೆಯ ಹಿನ್ನೆಲೆ ಏನು, ಈಗ ಬೀದರ್‌ನಲ್ಲಿ ಪರಿಸ್ಥಿತಿ ಹೇಗಿದೆ ಎನ್ನುವ ವಿವರ ಇಲ್ಲಿದೆ.
ಮುಸ್ಲಿಂ ಮೌಲ್ವಿಗಳ ಮೇಲೆ ಹಿಂದೂ ಯುವಕರು ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಈ ವಿಚಾರವು ಹಿಂದೂ - ಮುಸ್ಲಿಮರ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. ಈ ವಿಷಯವನ್ನು ಕೇಳಿ ಆಕ್ರೋಶಗೊಂಡಿರುವ ಸಾವಿರಾರು ಮುಸ್ಲಿಂ ಸಮುದಾಯದ ಜನ ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೌಲ್ವಿಗಳ ಮೇಲೆ ಹಲ್ಲೆ ಮಾಡಿರುವ ಯುವಕರನ್ನು ನಮ್ಮ ವಶಕ್ಕೆ ಕೊಡಿ ಎಂದು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

ಅಲ್ಲಾಹು ಅಕ್ಬರ್ ಎಂದು ಘೋಷಣೆ
ಇನ್ನು ಈ ಸಂಘರ್ಷವು ವಿಕೋಪಕ್ಕೆ ಹೋಗುವುದನ್ನು ತಪ್ಪಿಸುವುದಕ್ಕೆ ಪೊಲೀಸರು ಹರಸಾಹಸಪಟ್ಟಿದ್ದಾರೆ. ಗದ್ದಲ ಗಲಾಟೆ ಮಾಡಬೇಡಿ ಎಂದು ಪೊಲೀಸರು ಮೈಕ್ನಲ್ಲಿ ಮಾಡಿದ್ದಾರೆ. ಆದರೆ ಈ ಸಂದರ್ಭದಲ್ಲಿ ಕೆಲವು ಮುಸ್ಲಿಂ ಯುವಕರು ಪೊಲೀಸರಿಗೆ ಸಹಕಾರ ನೀಡಿಲ್ಲ ಎಂದು ಹೇಳಲಾಗಿದೆ. ಕೆಲವರು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆಯಿಂದಾಗಿ ಬಸವಕಲ್ಯಾಣ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ಹಿನ್ನೆಲೆ ಏನು
ಇಲ್ಲಿನ ಬಸವಕಲ್ಯಾಣದಲ್ಲಿ ಭಾಗದಲ್ಲಿ ಕೆಲವು ಹಿಂದೂ ಯುವಕರು ಮುಸ್ಲಿಂ ಮೌಲ್ವಿಗಳ ಮೇಲೆ ಹಲ್ಲೆ ಮಾಡಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಈ ವಿಷಯವು ಕೆಲವೇ ನಿಮಿಷಗಳಲ್ಲಿ ಎಲ್ಲೆಡೆ ಹಬ್ಬಿದ್ದು ಸಮಸ್ಯೆಯಾಗಿ ಪರಿವರ್ತನೆಯಾಯಿತು ಎಂದು ಹೇಳಲಾಗಿದೆ. ಈ ವಿಷಯದಿಂದ ಕೋಪಗೊಂಡ ಕೆಲವು ಮುಸ್ಲಿಂ ಸಮುದಾಯದ ಸಾವಿರಾರು ಯುವಕರು ಹಾಗೂ ಮುಖಂಡರು ನಗರದ ಗಾಂಧಿ ವೃತ್ತದಲ್ಲಿರುವ ಪೊಲೀಸ್ ಠಾಣೆ ಬಳಿ ಬಂದಿದ್ದಾರೆ. ಮೌಲ್ವಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ. ಅವರನ್ನು ನಮ್ಮ ವಶಕ್ಕೆ ವಶಕ್ಕೆ ಕೊಡಿ ಎಂದು ಕೇಳಿದ್ದಾರೆ.
ಹಿಂದೂ ಯುವಕರು - 49 ಜನ ಮುಸ್ಲಿಮರ ಮೇಲೆ ಪ್ರಕರಣ ದಾಖಲು
ಬೀದರ್‌ನ ಬಸವಕಲ್ಯಾಣದಲ್ಲಿ ಪರಿಸ್ಥಿತಿಯು ವಿಕೋಪಕ್ಕೆ ಹೋಗುತ್ತಿರುವುದನ್ನು ಗಮನಿಸಿರುವ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಪೊಲೀಸರು ಕೂಡಲೇ ಹಿಂದೂ ಯುವಕರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ಕ್ರಮದಿಂದಾಗಿ ಮುಸ್ಲಿಮರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಏಕಾಏಕಿ ಪ್ರತಿಭಟನೆ ಮಾಡಿ, ಗದ್ದಲ ಸೃಷ್ಟಿ ಮಾಡಿದ ಆರೋಪದ ಮೇಲೆ 49 ಜನ ಮುಸ್ಲಿಮರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.












Click it and Unblock the Notifications