ಕಲ್ಯಾಣ ಕರ್ನಾಟಕಕ್ಕೆ ಬಿಗ್ ಗಿಫ್ಟ್: ₹25 ಕೋಟಿ ರಸ್ತೆ ಅಭಿವೃದ್ಧಿ, ರಾಯಚೂರಿನಲ್ಲಿ AI ಕೇಂದ್ರಕ್ಕೆ ಬಂಪರ್, ಏನಿದು ಯೋಜನೆ

ಕಲಬುರಗಿ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ರಸ್ತೆಗಳು ಸರಿ ಇಲ್ಲ ಎನ್ನುವ ಆರೋಪಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿವೆ. ಈ ಭಾಗದಲ್ಲಿ ರಸ್ತೆಗಳು ಹದಗೆಟ್ಟಿರುವ ಬಗ್ಗೆ ಜನರು ಪದೇ ಪದೇ ದೂರು ನೀಡುತ್ತಲ್ಲೇ ಇದ್ದಾರೆ. ಇದೀಗ ಕೊನೆಗೂ ಕಲಬುರಗಿ ಹಾಗೂ ಕಲ್ಯಾಣ ಕರ್ನಾಟಕದ ಭಾಗದ ಜನರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಕಲಬುರಗಿಯಲ್ಲಿ ಸಂಪರ್ಕ ಕಲ್ಯಾಣ ಎನ್ನುವ ಸಾಲುಗಳೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಉತ್ತಮ ರಸ್ತೆ ಎಂದರೆ ಅದು ಕೇವಲ ಸಂಚಾರದ ಸೌಲಭ್ಯವಲ್ಲ; ಅದು ಗ್ರಾಮಗಳ ಬೆನ್ನೆಲುಬು. ಗುಣಮಟ್ಟದ ರಸ್ತೆ ನಿರ್ಮಾಣದಿಂದ ಜನರ ಜೀವನಮಟ್ಟ ಸುಧಾರಿಸಲಿದೆ, ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗಲಿದೆ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರದ ವ್ಯವಸ್ಥೆ ದೊರೆಯಲಿದೆ. ಇದು ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೂ ಹೊಸ ಚೈತನ್ಯ ನೀಡಲಿದೆ.

Big Boost

ಕಲಬುರಗಿ ಜಿಲ್ಲೆಯ ಜೇವರ್ಗಿ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹25 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯ ಸಚಿವ ಸಂಪುಟದ ಅನುಮೋದನೆ ದೊರೆತಿದೆ. ಈ ಯೋಜನೆಯಡಿ ಒಟ್ಟು 20.65 ಕಿಲೋಮೀಟರ್ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದ್ದು, ರಾಜ್ಯ ಹೆದ್ದಾರಿ-156ರ ಕಟ್ಟಿಸಂಗವಿ-ಯನಗುಂಟಿ-ನರಿಬೋಳ- ಮಲ್ಲಾ (ಕೆ) ಕ್ರಾಸ್ ಮಾರ್ಗದ 9.045 ಕಿ.ಮೀ ರಸ್ತೆ ಹಾಗೂ ಕೆಲ್ಲೂರು-ಆಂದೋಲ ಜಿಲ್ಲಾ ಮುಖ್ಯ ರಸ್ತೆಯ 3.9 ಕಿ.ಮೀ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಪ್ರಸ್ತುತ 3.75 ಮೀಟರ್ ಅಗಲವಿರುವ ರಸ್ತೆಯನ್ನು ಆಯ್ದ ಭಾಗಗಳಲ್ಲಿ 5.5 ಮೀಟರ್ ಅಗಲಕ್ಕೆ ವಿಸ್ತರಿಸಿ ಗುಣಮಟ್ಟದ ರಸ್ತೆ ನಿರ್ಮಿಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.

ಮುಂದುವರಿದು ಈ ರಸ್ತೆ ಅಭಿವೃದ್ಧಿಯಿಂದ ಕಡಕೋಳ, ಕಟ್ಟಿಸಂಗವಿ, ನರಿಬೋಳ, ಕೆಲ್ಲೂರು ಹಾಗೂ ಆಂದೋಲ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನರಿಗೆ ಉತ್ತಮ ಸಂಪರ್ಕ ವ್ಯವಸ್ಥೆ ದೊರೆಯಲಿದ್ದು, ಈ ಭಾಗದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ ಎಂಬ ವಿಶ್ವಾಸವಿದೆ. ರಾಜ್ಯದ ಎಲ್ಲ ಭಾಗಗಳಿಗೂ ಸಮಾನ ಅಭಿವೃದ್ಧಿಯನ್ನು ಸಾಧಿಸುವುದು ಗ್ಯಾರಂಟಿ ಸರ್ಕಾರದ ಬದ್ಧತೆಯಾಗಿದೆ ಎಂದಿದ್ದಾರೆ.

AI ವಿಷಯದಲ್ಲೂ ಗುಡ್‌ನ್ಯೂಸ್ ಕೊಟ್ಟ ಪ್ರಿಯಾಂಕ್ ಖರ್ಗೆ

ಇನ್ನು ಮುಂದುವರಿದು ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಸರ್ಕಾರ ವ್ಯವಹಾರ ನಿರ್ವಹಣೆ ನಿಯಮಗಳು, 1977ರ ಮೊದಲನೇ ಅನುಸೂಚಿಯ ಜನಸಂಖ್ಯೆ 15ರ ಅನ್ವಯ, ರಾಯಚೂರಿನ IIITಯಲ್ಲಿ ಕೃತಕ ಬುದ್ಧಿಮತ್ತೆ ಉತ್ಕೃಷ್ಟತಾ ಕೇಂದ್ರ (Centre of Excellence in Artificial Intelligence - CoE-AI) ಸ್ಥಾಪನೆಗೆ ಅನುಮೋದನೆ ದೊರೆತಿದೆ.

ಈ ಕೇಂದ್ರವನ್ನು ಐದು ವರ್ಷಗಳ ಅವಧಿಯಲ್ಲಿ ಒಟ್ಟು ₹12 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದರಲ್ಲಿ ₹5 ಕೋಟಿ 2026-27ರ ಬಜೆಟ್ ಘೋಷಣೆಯಡಿ ಹಾಗೂ ₹7 ಕೋಟಿ LEAP ಕಾರ್ಯಕ್ರಮದಡಿ ಒದಗಿಸಲಾಗುತ್ತದೆ. ಈ ಉತ್ಕೃಷ್ಟತಾ ಕೇಂದ್ರವು ಉತ್ತರ ಕರ್ನಾಟಕದ 13 ಜಿಲ್ಲೆಗಳಿಗಾಗಿ ಪ್ರಾದೇಶಿಕ AI ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಬೆಂಗಳೂರು ಕೇಂದ್ರೀಕೃತ ತಂತ್ರಜ್ಞಾನ ಪರಿಸರದ ಅಸಮತೋಲನ ನಿವಾರಿಸಿ, ಟೈರ್-2 ಮತ್ತು ಟೈರ್-3 ನಗರಗಳಲ್ಲಿ AI ಶಿಕ್ಷಣ, ಸಂಶೋಧನೆ, ನಾವೀನ್ಯತೆ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಕೃಷಿ, ಆರೋಗ್ಯ, ಶಿಕ್ಷಣ, MSME, ಆಡಳಿತ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಸ್ಯೆಗಳಿಗೆ AI ಆಧಾರಿತ ಪರಿಹಾರಗಳನ್ನು ರೂಪಿಸಲು ಈ ಕೇಂದ್ರ ನೆರವಾಗಲಿದೆ.

ಈ ಯೋಜನೆಯಡಿ AI ಅಭಿವೃದ್ಧಿ ಪ್ರಯೋಗಾಲಯಗಳು, ಉನ್ನತ ಗಣಕ ಸಂಪನ್ಮೂಲಗಳು, ಪ್ರೋಟೋಟೈಪ್ ಅಭಿವೃದ್ಧಿ, ಕೌಶಲ್ಯಾಭಿವೃದ್ಧಿ ತರಬೇತಿಗಳು, ನವೋದ್ಯಮಗಳಿಗೆ ಇನ್ಕ್ಯುಬೇಷನ್, ಸ್ಟಾರ್ಟ್‌ಅಪ್ ಬೆಂಬಲ ಹಾಗೂ ಪ್ರಾದೇಶಿಕ ವಿಸ್ತರಣಾ ಕಾರ್ಯಕ್ರಮಗಳನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು.
ಯೋಜನೆಯ ನಿರ್ವಹಣೆಗೆ "IIIT Raichur ARIA - AI Research & Innovation Arena" ಎಂಬ ವಿಶೇಷ ಉದ್ದೇಶಿತ ಸಂಸ್ಥೆ (SPV) ರಚಿಸಲಾಗುವುದು. ಯೋಜನೆಯ ಅನುಷ್ಠಾನವು ಮೂರು ಹಂತಗಳಲ್ಲಿ ನಡೆಯಲಿದ್ದು, ಮೂಲಸೌಕರ್ಯ ನಿರ್ಮಾಣದಿಂದ ಆರಂಭಿಸಿ ನಾವೀನ್ಯತೆ, ಉದ್ಯಮಶೀಲತೆ ಮತ್ತು ದೀರ್ಘಕಾಲೀನ ಸ್ವಾವಲಂಬನೆಯತ್ತ ಕೊಂಡೊಯ್ಯಲಾಗುತ್ತದೆ.

ಈ ಯೋಜನೆಯ ಮೂಲಕ ರಾಯಚೂರು ಹಾಗೂ ಉತ್ತರ ಕರ್ನಾಟಕವನ್ನು ಕೃತಕ ಬುದ್ಧಿಮತ್ತೆ ಕ್ಷೇತ್ರದ ಪ್ರಮುಖ ಕೇಂದ್ರವನ್ನಾಗಿ ರೂಪಿಸುವುದರೊಂದಿಗೆ, ವಿದ್ಯಾರ್ಥಿಗಳು, ಸಂಶೋಧಕರು, ನವೋದ್ಯಮಿಗಳು ಮತ್ತು ಕೈಗಾರಿಕೆಗಳಿಗೆ ಜಾಗತಿಕ ಮಟ್ಟದ ಅವಕಾಶಗಳು ದೊರೆಯಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+